Pralhad Joshi: ವಿಧಾನಸಭೆ ಚುನಾವಣೆ 2023 – ರಾಜಸ್ಥಾನ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ನೇಮಕ

ಇದರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹೆಗಲಿಗೆ ವರಿಷ್ಠರು ಮತ್ತೊಂದು ಪ್ರಮುಖ ಜವಾಬ್ದಾರಿ ವಹಿಸಿದಂತಾಗಿದೆ. ಕಳೆದ ಬಾರಿ ಉತ್ತರಾಖಂಡದ ಜವಾಬ್ದಾರಿ ಹೊತ್ತಿದ್ದ ಪ್ರಲ್ಹಾದ ಜೋಶಿಯವರು ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.

Pralhad Joshi: ವಿಧಾನಸಭೆ ಚುನಾವಣೆ 2023 - ರಾಜಸ್ಥಾನ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ನೇಮಕ
ರಾಜಸ್ಥಾನ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ನೇಮಕ
Follow us
ಸಾಧು ಶ್ರೀನಾಥ್​
|

Updated on:Jul 07, 2023 | 10:49 PM

ನವದೆಹಲಿ : ಕಳೆದ ವರ್ಷ ಉತ್ತರಾಖಂಡದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇದೀಗ ಮತ್ತೊಮ್ಮೆ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಪ್ರಲ್ಹಾದ ಜೋಶಿಯವರಿಗೆ ರಾಜಸ್ಥಾನ ರಾಜ್ಯದ ಉಸ್ತುವಾರಿ (Rajasthan Assembly Elections 2023) ಜವಾಬ್ದಾರಿ ನೀಡಲಾಗಿದೆ.

ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಅಖಾಡ ಸಿದ್ದವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಾಲ್ವರು ಪ್ರಮುಖ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ಅಧಿಕೃತ ಹೇಳಿಕೆಯನ್ನು ಪ್ರಕಟಿಸಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಭೂಪೇಂದ್ರ ಯಾದವ್ ಅವರನ್ನು​ ಕ್ರಮವಾಗಿ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ನೇಮಿಸಿದೆ.

ಕಳೆದ ವರ್ಷದ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಪ್ರಲ್ಹಾದ್​ ಜೋಶಿ ಅವರನ್ನು ಉಸ್ತುವಾರಿಯನ್ನಾಗಿ ಮಾಡಿದ್ದ ಸಮಯದಲ್ಲೇ ಪಕ್ಷ ಅಧಿಕಾರವನ್ನು ಪಡೆದುಕೊಂಡಿತು. ಜೋಶಿ, ಭೂಪೇಂದ್ರ ಯಾದವ್​ ನಂತರ ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್​ ಮತ್ತು ಓಂ ಪ್ರಕಾಶ್ ಮಾಥುರ್​​​ ಅವರನ್ನು ಕ್ರಮವಾಗಿ ತೆಲಂಗಾಣ, ಛತ್ತೀಸಗಢ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಇದರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹೆಗಲಿಗೆ ವರಿಷ್ಠರು ಮತ್ತೊಂದು ಪ್ರಮುಖ ಜವಾಬ್ದಾರಿ ವಹಿಸಿದಂತಾಗಿದೆ. ಕಳೆದ ಬಾರಿ ಉತ್ತರಾಖಂಡದ ಜವಾಬ್ದಾರಿ ಹೊತ್ತಿದ್ದ ಪ್ರಲ್ಹಾದ ಜೋಶಿಯವರು ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅದೇ ನಿರೀಕ್ಷೆಯೊಂದಿಗೆ ಬಿಜೆಪಿ ವರಿಷ್ಠ ನಾಯಕರು ಜೋಶಿಯವರಿಗೆ ರಾಜಸ್ಥಾನದ ಉಸ್ತುವಾರಿ ನೀಡಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Fri, 7 July 23