ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್​ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ

ಕೇಂದ್ರ ಶಿಕ್ಷಣ ಸಚಿವರಾದ ಪ್ರಲ್ಹಾದ್ ಜೋಶಿ ಇಂದು (ಸೋಮವಾರ) ಸಿಬಿಎಸ್‌ಇಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಸಿಬಿಎಸ್‌ಇಯ ಶೈಕ್ಷಣಿಕ, ಪರೀಕ್ಷಾ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸುವ ಪ್ರಮುಖ ಆದ್ಯತೆಗಳನ್ನು ಪರಿಶೀಲಿಸಲಾಯಿತು. ಹೆಚ್ಚಿನ ದಕ್ಷತೆ, ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸುಧಾರಿತ ಬೆಂಬಲ ನೀಡುವುದರ ಮೇಲೆ ಈ ಸಭೆಯಲ್ಲಿ ಗಮನ ಹರಿಸಲಾಯಿತು.

ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್​ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ
Pralhad Joshi Meeting
Image Credit source: TV9

Updated on: Aug 24, 2026 | 5:22 PM

ನವದೆಹಲಿ, ಆಗಸ್ಟ್ 24: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi)  ಇಂದು ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಬಿಎಸ್​ಇ (CBSE – Central Board of Secondary Education) ಸಂಸ್ಥೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಈ ವೇಳೆ ಸಿಬಿಎಸ್​ಇ ಮಂಡಳಿಯ ಶೈಕ್ಷಣಿಕ, ಪರೀಕ್ಷಾ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸುವ ಮತ್ತು ನವೀಕರಿಸುವ ಕುರಿತು ಚರ್ಚಿಸಲಾಯಿತು.

ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ CBSE ಮಂಡಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪ್ರಮುಖ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) ಶೈಕ್ಷಣಿಕ ವ್ಯವಸ್ಥೆ, ಪರೀಕ್ಷಾ ಪ್ರಕ್ರಿಯೆಗಳು ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯನ್ನು ಮತ್ತಷ್ಟು ಬಲಪಡಿಸುವ ಮತ್ತು ನವೀಕರಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.


ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಆನ್​ಲೈನ್ ತರಬೇತಿಯ ಜಾರಿ ಬಗ್ಗೆ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಭೆ

ಸಿಬಿಎಸ್​ಇ ಮಂಡಳಿಯ ದಿನನಿತ್ಯದ ಆಡಳಿತ ಮತ್ತು ಪರೀಕ್ಷಾ ನಿರ್ವಹಣೆಯಲ್ಲಿ ಹೆಚ್ಚಿನ ಕಾರ್ಯದಕ್ಷತೆ ಹಾಗೂ ಪಾರದರ್ಶಕತೆಯನ್ನು ತರುವ ಆದ್ಯತೆಗಳ ಕುರಿತು ಸಚಿವ ಪ್ರಲ್ಹಾದ್ ಜೋಶಿ ಪರಾಮರ್ಶಿಸಿದರು. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಮತ್ತು ಶಿಕ್ಷಕರಿಗೆ ಬೋಧನೆಯಲ್ಲಿ ಹೆಚ್ಚಿನ ಅನುಕೂಲ ಹಾಗೂ ಬೆಂಬಲ ಸಿಗುವಂತೆ ವ್ಯವಸ್ಥೆಯನ್ನು ಸುಧಾರಿಸುವ ಬಗ್ಗೆಯೂ ಚರ್ಚಿಸಲಾಯಿತು. ವಿದ್ಯಾರ್ಥಿಗಳ ಕಲಿಕಾ ಅನುಭವವನ್ನು ಸುಲಭಗೊಳಿಸಲು ಹಾಗೂ ಶಿಕ್ಷಕರಿಗೆ ಅಗತ್ಯವಿರುವ ಸಂಪನ್ಮೂಲ ಮತ್ತು ಬೋಧನಾ ಬೆಂಬಲವನ್ನು ಮೇಲ್ದರ್ಜೆಗೇರಿಸುವ ಕುರಿತು ವಿಶೇಷ ಗಮನ ಹರಿಸಲಾಯಿತು.

ಶಾಲಾ ಪಠ್ಯಕ್ರಮ, ಆಡಳಿತಾತ್ಮಕ ನಿರ್ಧಾರಗಳು ಹಾಗೂ ಪರೀಕ್ಷಾ ಸುಧಾರಣೆಗಳನ್ನು ಕಾಲಕ್ಕೆ ತಕ್ಕಂತೆ ಆಧುನಿಕಗೊಳಿಸುವ ಪ್ರಸ್ತಾವನೆಗಳ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us