ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಗೆ ಸ್ವಾಗತಿಸಿದ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ
ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಇಳಯರಾಜ ಭೇಟಿಯಾಗಿ, ಮಾತುಕತೆ ನಡೆಸಿದರು.
ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿಂದು (Rajya Sabha) ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರನ್ನ ಭೇಟಿಯಾದ ಇಳಯರಾಜ (Musician Ilaiyaraaja) ಮಾತುಕತೆ ನಡೆಸಿದರು.
ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಇಳಯರಾಜ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.
ನಂತರ ಇಳಯರಾಜ ಅವರನ್ನು ಕುರಿತು ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Met @ilaiyaraaja ji post his oath ceremony in RS at #Parliament, today.
Looking forward to his unparalleled journey in the office!! pic.twitter.com/f4Y2CvAlZB
— Pralhad Joshi (@JoshiPralhad) July 25, 2022
Published On - 4:34 pm, Mon, 25 July 22