ಇದರಲ್ಲಿ ನಿಜವಾದ ರಾಹುಲ್ ಗಾಂಧಿ ಯಾರು?; ಕಾಂಗ್ರೆಸ್ ನಾಯನ ದ್ವಂದ್ವ ನಿಲುವು ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ

ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತು ಪ್ರಾಮಾಣಿಕತೆಯನ್ನು ಪ್ರತಿಪಾದಿಸುವ ವ್ಯಕ್ತಿಯೊಬ್ಬರು ಅರವಿಂದ್ ಕೇಜ್ರಿವಾಲ್ ಅವರ ಕಾರ್ಯಗಳ ಮೂಲಕ ಆಡಳಿತ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರವನ್ನು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬ ವಿವರಗಳನ್ನು ನಮಗೆ ಸಿಕ್ಕಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಇದರಲ್ಲಿ ನಿಜವಾದ ರಾಹುಲ್ ಗಾಂಧಿ ಯಾರು?; ಕಾಂಗ್ರೆಸ್ ನಾಯನ ದ್ವಂದ್ವ ನಿಲುವು ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ
ಸ್ಮೃತಿ ಇರಾನಿ- ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 23, 2024 | 1:14 PM

ದೆಹಲಿ ಮಾರ್ಚ್ 23: ವಯನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಕಾಂಗ್ರೆಸ್ ನಾಯಕ  “ದ್ವಂದ್ವ ನಿಲುವು ” ಹೊಂದಿದ್ದಾರೆ ಎಂದಿದ್ದಾರೆ. ರಾಹುಲ್ ಗಾಂಧಿ ಈಗ ಅರವಿಂದ್ ಕೇಜ್ರಿವಾಲ್ (Arvind kejriwal) ಅವರ ಕುಟುಂಬಕ್ಕೆ ಒಗ್ಗಟ್ಟು ಪ್ರದರ್ಶಿಸುತ್ತಾರೆ. ಆದರೆ ಇದೇ ರಾಹುಲ್, ತೆಲಂಗಾಣದಲ್ಲಿ ದೆಹಲಿ ಮುಖ್ಯಮಂತ್ರಿ “ಭ್ರಷ್ಟ” ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿ ಒಂದೇ ವಿಷಯದ ಮೇಲೆ ಹೇಗೆ ವಿವಿಧ ರೀತಿಯಲ್ಲಿ ದಾಳ ಉರುಳಿಸುತ್ತಾರೆ ಎಂಬುದಕ್ಕೆ ನಾನು ಪುರಾವೆ ನೀಡಲು ಬಯಸುತ್ತೇನೆ. ಜುಲೈ 2, 2023 ರಂದು ತೆಲಂಗಾಣದಲ್ಲಿ ಕೆಸಿಆರ್ ಕೂಡ ಭ್ರಷ್ಟ, ಮದ್ಯ ಹಗರಣ ನಡೆದಿದೆ ಎಂಬುದು ಎಲ್ಲಾ ಏಜೆನ್ಸಿಗಳಿಗೂ ಗೊತ್ತು.ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಎಎಪಿ ಭ್ರಷ್ಟಾಚಾರದ ಹಣವನ್ನು ಬಳಸಿದೆ ಎಂದು ಅಜಯ್ ಮಾಕೆನ್ ಹೇಳಿದ್ದರು. ಹಾಗಾದರೆ ಯಾರು ನಿಜ ಹೇಳುತ್ತಿದ್ದಾರೆ? ಎಂದು ಸ್ಮೃತಿ ಪ್ರಶ್ನಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಅಬಕಾರಿ ನೀತಿ ಪ್ರಕರಣ ಆರೋಪದಲ್ಲಿ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟ ಒಂದು ದಿನದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಶುಕ್ರವಾರ ಏಳು ದಿನಗಳ ಕಾಲ ಅಂದರೆ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶುಕ್ರವಾರ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಇಡಿ ಕಸ್ಟಡಿಗೆ ಕಳುಹಿಸಿದೆ.

“ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತು ಪ್ರಾಮಾಣಿಕತೆಯನ್ನು ಪ್ರತಿಪಾದಿಸುವ ವ್ಯಕ್ತಿಯೊಬ್ಬರು ಅರವಿಂದ್ ಕೇಜ್ರಿವಾಲ್ ಅವರ ಕಾರ್ಯಗಳ ಮೂಲಕ ಆಡಳಿತ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರವನ್ನು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬ ವಿವರಗಳನ್ನು ನಮಗೆ ಸಿಕ್ಕಿವೆ ಎಂದು ಇರಾನಿ ಹೇಳಿದ್ದಾರೆ.

ಸ್ಮೃತಿ ಇರಾನಿ ಸುದ್ದಿಗೋಷ್ಠಿ

“ರಾಹುಲ್ ಗಾಂಧಿಯ ನಿಜವಾದ ಮುಖ ಯಾವುದು? ತೆಲಂಗಾಣದಲ್ಲಿ ಮಾತನಾಡುತ್ತಿದ್ದವರಾ ಅಥವಾ ದೆಹಲಿಯಲ್ಲಿರುವವರಾ?” ಎಂದು ಕೇಂದ್ರ ಸಚಿವರು ತಮ್ಮ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಈ ಹಿಂದೆ ತೆಲಂಗಾಣ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಭಾರತ ರಾಷ್ಟ್ರ ಸಮಿತಿಯು ಬಿಜೆಪಿಯೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ ಎಂದು ಹೇಳಿದ್ದರು. ಏಕೆಂದರೆ ಕೇಂದ್ರದ ಆಡಳಿತ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರ ಬಗ್ಗೆ ತಿಳಿದಿದೆ. ದೆಹಲಿ ಮದ್ಯ ಹಗರಣದಲ್ಲಿ ಭಾಗಿಯಾಗಿದ್ದು, ಆಕೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ದೆಹಲಿ ಮದ್ಯ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಮೇಲೆ ಆರೋಪ ಹೊರಿಸಿ ಕಾಂಗ್ರೆಸ್ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದನ್ನು ಸ್ಮೃತಿ ಇರಾನಿ ಇಲ್ಲಿ ನೆನಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ನಿವಾಸದಲ್ಲಿ ಶೋಧ ನಡೆಸುತ್ತಿರುವ ಸಿಬಿಐ

ಜೂನ್ 3, 2022 ರಂದು ಕಾಂಗ್ರೆಸ್ ಮದ್ಯದ ಹಗರಣದ ಬಗ್ಗೆ ದೆಹಲಿ ಪೊಲೀಸರಿಗೆ ಪತ್ರ ಬರೆದಿತ್ತು. ಯಾವುದು ಸತ್ಯ ಹೇಳುತ್ತಿದೆ? ಹಿಂದಿನದು ಅಥವಾ ಇಂದು ನಾವು ನೋಡುತ್ತಿರುವುದೇ? ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಎಎಪಿ ಭ್ರಷ್ಟಾಚಾರದ ಹಣವನ್ನು ಬಳಸಿದೆ ಎಂದು ಅಜಯ್ ಮಾಕೆನ್ ಹೇಳಿದ್ದರು. ಹಾಗಾದರೆ ಯಾರು ಸತ್ಯವನ್ನು ಹೇಳುತ್ತಿದ್ದಾರೆ? ರಾಹುಲ್ ತೆಲಂಗಾಣದಲ್ಲಿ ಹೇಳಿದ್ದೇ ಅಥವಾ ದೆಹಲಿಯಲ್ಲಿ ಹೇಳಿದ್ದೇ? ಆಗ ವಕ್ತಾರು ಹೇಳಿದ್ದೇ? ಅಥವಾ ಈಗ ವಕ್ತಾರರು ಹೇಳುತ್ತಿರುವುದೇ?” ಎಂದು ಸ್ಮೃತಿ ಇರಾನಿ ಕೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ