ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ: ಗಣ್ಯರಿಂದ ಪುಷ್ಪನಮನ, ರೈತರ ಖಾತೆಗೆ ಬರಲಿದೆ ಕಿಸಾನ್ ಸಮ್ಮಾನ್ ಹಣ..

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ಸದೈವ್ ಅಟಲ್‌ನಲ್ಲಿರುವ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದ್ದಾರೆ. ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರಿಂದ ವಾಜಪೇಯಿ ಸಮಾಧಿಗೆ ಪುಷ್ಪನಮನ ಸಲ್ಲಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ: ಗಣ್ಯರಿಂದ ಪುಷ್ಪನಮನ, ರೈತರ ಖಾತೆಗೆ ಬರಲಿದೆ ಕಿಸಾನ್ ಸಮ್ಮಾನ್ ಹಣ..
ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ. ಗಣ್ಯರಿಂದ ಪುಷ್ಪನಮನ

Updated on: Dec 25, 2020 | 9:18 AM

ದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ಸದೈವ್ ಅಟಲ್‌ನಲ್ಲಿರುವ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದ್ದಾರೆ. ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರಿಂದ ವಾಜಪೇಯಿ ಸಮಾಧಿಗೆ ಪುಷ್ಪನಮನ ಸಲ್ಲಿಸಲಾಗಿದೆ.

ವಾಜಪೇಯಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದರು. ಬಲವಾದ, ಸಮೃದ್ಧ ಭಾರತ ನಿರ್ಮಾಣಕ್ಕೆ ಪ್ರಯತ್ನಿಸಿದ್ದರು. ವಾಜಪೇಯಿಯವರ ಕೊಡುಗೆಗಳು ಸದಾ ಸ್ಮರಣೀಯ ಎಂದು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಇನ್ನು ಭಾರತರತ್ನ, ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿದಂತೆ 6 ರಾಜ್ಯಗಳ ರೈತರ ಜತೆ ಸಂವಾದ ನಡೆಸಲಿದ್ದಾರೆ. ದೇಶಾದ್ಯಂತ ಇಂದು ಕಿಸಾನ್ ಸಮ್ಮಾನ್ ದಿನಾಚರಣೆ ಆಚರಿಸಲಿದ್ದು ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ರೈತರ ಖಾತೆಗೆ ಸೇರಲಿದೆ. 9 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ರೂ. ಜಮೆಗೊಳ್ಳಲಿದೆ. ಈ ಪೈಕಿ ಇಂದು ರಾಜ್ಯದ 53,01,252 ರೈತರ ಖಾತೆಗೆ ಹಣ ಜಮೆಯಾಗಲಿದೆ.

ವಾಜಪೇಯಿ 96ನೇ ಜನ್ಮದಿನದಂದು 9 ಕೋಟಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ