ಪುರಿಯಲ್ಲಿ ನಡೆದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಭಾಗಿಯಾದ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್

Meri Mati Mera Desh: ಮೇರಿ ಮಾಟಿ, ಮೇರಾ ದೇಶ್ ಅಭಿಯಾನದಡಿ ಪುರಿಯಲ್ಲಿ ಆಯೋಜನೆಗೊಂಡಿದ್ದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರದಮಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಭಾಗವಹಿಸಿದ್ದರು.ಇದಕ್ಕೂ ಮುನ್ನ ಹಣಕಾಸು ಸಚಿವರು ಮತ್ತು ಶಿಕ್ಷಣ ಸಚಿವರು ಜಗನ್ನಾಥ ಪುರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಪುರಿಯಲ್ಲಿ ನಡೆದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಭಾಗಿಯಾದ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್
Follow us
ನಯನಾ ರಾಜೀವ್
| Updated By: Digi Tech Desk

Updated on:Aug 17, 2023 | 12:50 PM

ಮೇರಿ ಮಾಟಿ, ಮೇರಾ ದೇಶ್ ಅಭಿಯಾನದಡಿ ಪುರಿಯಲ್ಲಿ ಆಯೋಜನೆಗೊಂಡಿದ್ದ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರದಮಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಭಾಗವಹಿಸಿದ್ದರು.ಇದಕ್ಕೂ ಮುನ್ನ ಹಣಕಾಸು ಸಚಿವರು ಮತ್ತು ಶಿಕ್ಷಣ ಸಚಿವರು ಪುರಿ ಜಗನ್ನಾಥ  ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದರ್ಶನದ ನಂತರ ನಿರ್ಮಲಾ ಸೀತಾರಾಮನ್ ಮತ್ತು ಧರ್ಮೇಂದ್ರ ಪ್ರಧಾನ್ ಪುರಿಯ ಬ್ಲೂ ಫ್ಲಾಗ್ ಬೀಚ್‌ಗೆ ಆಗಮಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರ ಮರಳು ಕಲೆಯನ್ನು ವೀಕ್ಷಿಸಿದರು. ಇದೇ ವೇಳೆ ಸುದರ್ಶನ್ ಮೇರಿ ಮಾಟಿ ಮೇರಾ ದೇಶ್ ಎಂಬ ವಿಷಯದ ಕುರಿತು ಕಲಾಕೃತಿಯನ್ನು ಸಿದ್ಧಪಡಿಸಿದ್ದರು.

ಮೇರಿ ಮಾಟಿ, ಮೇರಾ ದೇಶ್’ ಕಾರ್ಯಕ್ರಮದಡಿ ‘ಪಂಚ ಪ್ರಾಣ ಪ್ರತಿಜ್ಞಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ವಿದೇಶಿಯರ ಗುಲಾಮಗಿರಿಯ ಕಾಲದಲ್ಲಿ ನಮ್ಮಲ್ಲಿ ಮೂಡಿರುವ ಮನಸ್ಥಿತಿಯನ್ನು ಹೋಗಲಾಡಿಸುವುದು ಬಹಳ ಮುಖ್ಯ. ಆಗ ಮಾತ್ರ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತದೆ ಮತ್ತು ಭಾರತದ ಬಗ್ಗೆ ಹೆಮ್ಮೆ ಪಡುವ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಪಂಚ ಪ್ರಾಣ ಪ್ರತಿಜ್ಞಾ ಕುರಿತ ಎಎನ್​ಐ ಟ್ವೀಟ್

ಈ ಕಾರ್ಯಕ್ರಮವು ಆಗಸ್ಟ್ 9 ರಿಂದ ಪ್ರಾರಂಭವಾಗಿದೆ ಮತ್ತು ಈ ಅಭಿಯಾನವು ಆಗಸ್ಟ್ 30 ರವರೆಗೆ ನಡೆಯಲಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರು ಮತ್ತು ವೀರಯೋಧರನ್ನು ಗೌರವಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ಅಭಿಯಾನದಡಿ ದೇಶದಾದ್ಯಂತ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಮತ್ತಷ್ಟು ಓದಿ: ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ ‘ಮೇರಿ ಮಾಟಿ ಮೇರಾ ದೇಶ್ ಅಭಿಯಾನ’ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ

ಮೇರಿ ಮಾಟಿ ಮೇರಾ ದೇಶ್ ಅಭಿಯಾನದ ಅಡಿಯಲ್ಲಿ, 16 ಆಗಸ್ಟ್ 2023 ರಿಂದ ಬ್ಲಾಕ್, ಪುರಸಭೆ, ಕಾರ್ಪೊರೇಷನ್ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳು ಆರಂಭವಾಗಿವೆ. ಸಮಾರೋಪ ಸಮಾರಂಭವನ್ನು 30 ಆಗಸ್ಟ್ 2023 ರಂದು ನವದೆಹಲಿಯ ಕಧ್ವತಿ ಪಥ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Thu, 17 August 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್