AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಸಂಬಂಧಗಳು ಸಾಮಾನ್ಯವಾಗಿರಲು ಸಾಧ್ಯವಿಲ್ಲ: ವಿದೇಶಾಂಗ ಸಚಿವಾಲಯ

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಭಾರತ, ಚೀನಾ ಸಂಬಂಧ ಸಾಮಾನ್ಯವಾಗಿರುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಪೂರ್ವ ಲಡಾಖ್‌ನಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಎರಡೂ ಕಡೆಯವರು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ನಡೆಸುತ್ತಿದ್ದಾರೆ.

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಸಂಬಂಧಗಳು ಸಾಮಾನ್ಯವಾಗಿರಲು ಸಾಧ್ಯವಿಲ್ಲ: ವಿದೇಶಾಂಗ ಸಚಿವಾಲಯ
ಭಾರತ-ಚೀನಾImage Credit source: NDTV
ನಯನಾ ರಾಜೀವ್
|

Updated on: Jan 05, 2024 | 9:27 AM

Share

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಭಾರತ(India), ಚೀನಾ(China) ಸಂಬಂಧ ಸಾಮಾನ್ಯವಾಗಿರುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಪೂರ್ವ ಲಡಾಖ್‌ನಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಎರಡೂ ಕಡೆಯವರು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ನಡೆಸುತ್ತಿದ್ದಾರೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಚೀನಾ ಕುರಿತ ನಮ್ಮ ನಿಲುವು ಎಲ್ಲರಿಗೂ ತಿಳಿದಿದೆ. ಈ ಸಂಬಂಧಗಳು ಸಾಮಾನ್ಯವಲ್ಲ ಆದರೆ ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತನಾಡಿದ್ದೇವೆ. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಉಭಯ ಪಕ್ಷಗಳ ನಡುವೆ ನಡೆದ ಮಾತುಕತೆಗಳನ್ನು ಜೈಸ್ವಾಲ್ ಉಲ್ಲೇಖಿಸಿದ್ದಾರೆ.

ಒಂದು ವಿಚಾರದ ಬಗ್ಗೆ ಮಾತನಾಡಿದಾಗ ಮಾತ್ರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯ. ಗಡಿಯಲ್ಲಿ ಶಾಂತಿ ನೆಲೆಸುವವರೆಗೆ ಚೀನಾ ಜತೆಗಿನ ಬಾಂಧವ್ಯ ಸಹಜವಾಗಿರಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. ಮೇ 5, 2020 ರಂದು ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ಹಿಂಸಾತ್ಮಕ ಘರ್ಷಣೆಯ ನಂತರ ಪೂರ್ವ ಲಡಾಖ್ ಗಡಿಯಲ್ಲಿ ಬಿಕ್ಕಟ್ಟು ಉಂಟಾಗಿತ್ತು.

ಮತ್ತಷ್ಟು ಓದಿ: ಭಾರತ- ಚೀನಾ ಸಂಬಂಧಗಳನ್ನು ಹದಗೆಡಿಸುತ್ತಿರುವ ಗಡಿ ವಿವಾದ

ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಆಡಳಿತದಲ್ಲಿ ಭಾರತವು ಅತ್ಯುತ್ತಮ ಫಲಿತಾಂಶಗಳನ್ನು ಸಾಧಿಸಿದೆ. ದೇಶದ ಆರ್ಥಿಕತೆಯು ವೇಗವನ್ನು ಪಡೆದುಕೊಂಡಿದೆ ಮತ್ತು ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗುವ ಹಾದಿಯಲ್ಲಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ