AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಿವಾಹಿತ ಮಗಳು ತನ್ನ ಪೋಷಕರಿಂದ ಮದುವೆ ಖರ್ಚನ್ನು ಪಡೆಯಲು ಅರ್ಹಳು; ಹೈಕೋರ್ಟ್ ತೀರ್ಪು

ವಿವಾಹದ ಉದ್ದೇಶಕ್ಕಾಗಿ ತನ್ನ ಪೋಷಕರಿಂದ 25 ಲಕ್ಷ ರೂ. ಮೊತ್ತವನ್ನು ಕೋರಿ ಅವಿವಾಹಿತ ಮಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಅವಿವಾಹಿತ ಮಗಳು ತನ್ನ ಪೋಷಕರಿಂದ ಮದುವೆ ಖರ್ಚನ್ನು ಪಡೆಯಲು ಅರ್ಹಳು; ಹೈಕೋರ್ಟ್ ತೀರ್ಪು
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 31, 2022 | 4:36 PM

Share

ರಾಯ್‌ಪುರ: ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆಯಡಿ ಅವಿವಾಹಿತ ಮಗಳು ತನ್ನ ಪೋಷಕರಿಂದ ಮದುವೆಯ ಖರ್ಚನ್ನು ಪಡೆಯಲು ಅರ್ಹಳು ಎಂದು ಛತ್ತೀಸ್‌ಗಢ ಹೈಕೋರ್ಟ್ (Chhattisgarh High Court) ಹೇಳಿದೆ. “ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ಮದುವೆಗೂ ಮುನ್ನ ಮತ್ತು ಮದುವೆಯ ನಂತರ ಹಲವು ರೀತಿಯ ವೆಚ್ಚಗಳನ್ನು ಮಾಡಬೇಕಾಗುತ್ತದೆ. ಆ ಹಣವನ್ನು ಪೋಷಕರಿಂದ ಆಕೆ ಪಡೆಯಬಹುದು” ಎಂದು ಛತ್ತೀಸ್​ಗಢ ಹೈಕೋರ್ಟ್ ಹೇಳಿದೆ.

ಹೆಣ್ಣುಮಕ್ಕಳು ತಮ್ಮ ಮದುವೆಗೆ ಪೋಷಕರಿಂದ ಹಣ ಪಡೆಯಬಹುದು ಎಂಬ ಬಗ್ಗೆ ಹಕ್ಕನ್ನು ರಚಿಸಲಾಗಿದೆ. ಅಂತಹ ಹಕ್ಕುಗಳನ್ನು ಅವಿವಾಹಿತ ಹೆಣ್ಣುಮಕ್ಕಳು ಪ್ರತಿಪಾದಿಸಿದಾಗ ನ್ಯಾಯಾಲಯ ನಿರಾಕರಿಸಲು ಸಾಧ್ಯವಿಲ್ಲ ಎಂದು ಛತ್ತೀಸ್​ಗಢದ ಉಚ್ಚ ನ್ಯಾಯಾಲಯವು ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ವಿವಾಹದ ಉದ್ದೇಶಕ್ಕಾಗಿ ತನ್ನ ಪೋಷಕರಿಂದ 25 ಲಕ್ಷ ರೂ. ಮೊತ್ತವನ್ನು ಕೋರಿ ಅವಿವಾಹಿತ ಮಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಗೌತಮ್ ಭಾದುರಿ ಮತ್ತು ಸಂಜಯ್ ಎಸ್ ಅಗರವಾಲ್ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸುತ್ತಿದೆ.

ನಿವೃತ್ತಿಯ ನಂತರ ಆಕೆಯ ತಂದೆ 75 ಲಕ್ಷ ರೂ. ಪಡೆದಿದ್ದರು. ಇನ್ನೂ 25 ಲಕ್ಷ ರೂ. ಅವರಿಗೆ ಬರಬೇಕಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಅರ್ಜಿದಾರರ ಪರ ವಕೀಲ ಟಿ.ಕೆ. ತಿವಾರಿ ವಾದ ಮಂಡಿಸಿದ್ದರು. ಛತ್ತೀಸ್​ಗಢದ ಹೈಕೋರ್ಟ್ ಕಾಯಿದೆಯ ಸೆಕ್ಷನ್ 20 (3) ಅನ್ನು ಪರಿಗಣಿಸಿದೆ, ಇದು ಒಬ್ಬ ವ್ಯಕ್ತಿಗೆ ಅವನ ಅಥವಾ ಅವಳ ವಯಸ್ಸಾದ ಅಥವಾ ಅಶಕ್ತ ತಂದೆ ಅಥವಾ ಮದುವೆಯಾಗದ ಮತ್ತು ತನ್ನನ್ನು ತಾನೇ ಬೆಂಬಲಿಸಲು ಸಾಧ್ಯವಾಗದ ಮಗಳನ್ನು ಬೆಂಬಲಿಸುವ ಜವಾಬ್ದಾರಿಯನ್ನು ನೀಡುತ್ತದೆ.

ಇದನ್ನೂ ಓದಿ: Murder: ಹುಡುಗರ ಜೊತೆ ಸುತ್ತಾಡಿದ್ದಕ್ಕೆ ಬೈದ ಅಮ್ಮನನ್ನೇ ಕೊಂದ 17 ವರ್ಷದ ಮಗಳು!

ಪ್ರೀತಿಗಾಗಿ ಅಪ್ಪ-ಅಮ್ಮನನ್ನೇ ಕೊಂದ ಮಗಳು; ಪ್ರಿಯಕರನ ಜೊತೆ ಸೇರಿ 17 ವರ್ಷದ ಯುವತಿಯಿಂದ ಡಬಲ್ ಮರ್ಡರ್!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?