ಉನ್ನಾವೋ ರೇಪ್ ಕೇಸ್: 1ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕನಿಗೆ ಜೀವಾವಧಿ, ಇನ್ನೂ 4 ಕೇಸ್ ಇದಾವೆ
ದೆಹಲಿ: ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ಗೆ ಜೀವಿತಾವಧಿ ಶಿಕ್ಷೆ ನೀಡಿ ದೆಹಲಿಯ ತೀಸ್ ಹಜಾರಿ ಕೋರ್ಟ್ ಆದೇಶಿಸಿದೆ. ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಭದ್ರತೆ ನೀಡುವಂತೆ ಕೋರ್ಟ್ ಸೂಚಿಸಿದೆ. ಉತ್ತರ ಪ್ರದೇಶದ ಬಂಗಾರಮೌ ಕ್ಷೇತ್ರದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗರ್ ಅಪರಾಧಿ ಎಂದು ಡಿಸೆಂಬರ್ 16ರಂದು ಕೋರ್ಟ್ ತೀರ್ಪು ನೀಡಿತ್ತು. ಇಂದು ಅಪರಾಧಿ ಸೆಂಗರ್ಗೆ ಜೀವಾವಧಿ ಶಿಕ್ಷೆ ಹಾಗು 25 ಲಕ್ಷ […]
ದೆಹಲಿ: ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ಗೆ ಜೀವಿತಾವಧಿ ಶಿಕ್ಷೆ ನೀಡಿ ದೆಹಲಿಯ ತೀಸ್ ಹಜಾರಿ ಕೋರ್ಟ್ ಆದೇಶಿಸಿದೆ. ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಭದ್ರತೆ ನೀಡುವಂತೆ ಕೋರ್ಟ್ ಸೂಚಿಸಿದೆ.
ಉತ್ತರ ಪ್ರದೇಶದ ಬಂಗಾರಮೌ ಕ್ಷೇತ್ರದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗರ್ ಅಪರಾಧಿ ಎಂದು ಡಿಸೆಂಬರ್ 16ರಂದು ಕೋರ್ಟ್ ತೀರ್ಪು ನೀಡಿತ್ತು. ಇಂದು ಅಪರಾಧಿ ಸೆಂಗರ್ಗೆ ಜೀವಾವಧಿ ಶಿಕ್ಷೆ ಹಾಗು 25 ಲಕ್ಷ ರೂ. ದಂಡ ವಿಧಿಸಿ ದೆಹಲಿಯ ತೀಸ್ ಹಜಾರಿ ಕೋರ್ಟ್ ಆದೇಶ ನೀಡಿದೆ.
2017ರ ಜೂನ್ 4ರಂದು ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್ ಹಜಾರಿ ಕೋರ್ಟ್ ಸೆಂಗರ್ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
Published On - 2:17 pm, Fri, 20 December 19