ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸೆಂಗಾರ್​ಗೆ ಮಧ್ಯಂತರ ಜಾಮೀನು

ವೈದ್ಯಕೀಯ ಕಾರಣಕ್ಕಾಗಿ ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕುಲದೀಪ್ ಸೆಂಗಾರ್ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಅವರು ಮಾಡಿದ ಮನವಿಯನ್ನು ಸಿಬಿಐ ವಿರೋಧಿಸಿತ್ತು.

ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸೆಂಗಾರ್​ಗೆ ಮಧ್ಯಂತರ ಜಾಮೀನು
ದೆಹಲಿ ಹೈಕೋರ್ಟ್‌
Follow us
ಸುಷ್ಮಾ ಚಕ್ರೆ
|

Updated on: Dec 05, 2024 | 6:41 PM

ನವದೆಹಲಿ: 2017ರಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವೈದ್ಯಕೀಯ ಕಾರಣಗಳಿಗಾಗಿ ದೆಹಲಿ ಹೈಕೋರ್ಟ್ ಇಂದು (ಡಿಸೆಂಬರ್ 5) ಎರಡು ವಾರಗಳ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಮತ್ತು ನ್ಯಾಯಮೂರ್ತಿ ಅಮಿತ್ ಶರ್ಮಾ ಅವರನ್ನೊಳಗೊಂಡ ಪೀಠವು ಕುಲದೀಪ್ ಸೆಂಗಾರ್ ಅವರ ವೈದ್ಯಕೀಯ ಮೌಲ್ಯಮಾಪನಕ್ಕಾಗಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ (ಎಐಐಎಂಎಸ್) ದಾಖಲಾಗುವಂತೆ ನಿರ್ದೇಶಿಸಿದೆ. ನ್ಯಾಯಾಲಯವು ಏಮ್ಸ್ ವೈದ್ಯಕೀಯ ಮಂಡಳಿಯಿಂದ ವರದಿಯನ್ನು ಕೇಳಿದೆ.

ಹೈಕೋರ್ಟ್ ಹೇಳಿದ್ದೇನು?:

“ಈ ಪ್ರಕರಣದ ಇತಿಹಾಸ ಮತ್ತು ಅರ್ಜಿದಾರರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ, ಅರ್ಜಿದಾರರನ್ನು ಎರಡು ವಾರಗಳವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು. ಸಮಗ್ರ ವೈದ್ಯಕೀಯ ಮೌಲ್ಯಮಾಪನಕ್ಕಾಗಿ ಅವರು ದೆಹಲಿಯ ಏಮ್ಸ್‌ಗೆ ದಾಖಲಾಗಬೇಕು ಎಂದು ನಿರ್ದೇಶಿಸಲಾಗಿದೆ” ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ನೆಲಮಂಗಲದಲ್ಲಿ 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ

ಕುಲದೀಪ್ ಸೆಂಗಾರ್ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಸಲ್ಲಿಸಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಕೋರಿ ಅವರು ಮಾಡಿದ ಮನವಿಯನ್ನು ಸಂತ್ರಸ್ತೆ ಹಾಗೂ ಕೇಂದ್ರೀಯ ತನಿಖಾ ದಳ (ಸಿಬಿಐ) ವಿರೋಧಿಸಿತ್ತು.

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಸೆಂಗಾರ್ ಅವರನ್ನು ದೆಹಲಿ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ವಿಚಾರಣಾ ನ್ಯಾಯಾಲಯವು ಆತನನ್ನು ಅಪರಾಧಿ ಎಂದು ಘೋಷಿಸುವಾಗ ಅವರು ಸಾರ್ವಜನಿಕ ಸೇವಕ ಮತ್ತು ಜನರು ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ಅವರು ಅವರ ನಂಬಿಕೆಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿತ್ತು. ವಿಚಾರಣಾ ನ್ಯಾಯಾಲಯವು ಸೆಂಗಾರ್‌ಗೆ 25 ಲಕ್ಷ ರೂ. ದಂಡವನ್ನು ಪಾವತಿಸುವಂತೆ ಆದೇಶಿಸಿತ್ತು. ಅದರಲ್ಲಿ ಸಂತ್ರಸ್ತೆಗೆ 10 ಲಕ್ಷ ರೂ.ಗಳನ್ನು ಪರಿಹಾರವಾಗಿ ಪಾವತಿಸಲು ಆದೇಶಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಅವರ ಮೇಲ್ಮನವಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

ಇದನ್ನೂ ಓದಿ: ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಕೋಲು, ಮೆಣಸಿನ ಪುಡಿ ತುರುಕಿ ಚಿತ್ರಹಿಂಸೆ

ಹಾಗೇ, ಅತ್ಯಾಚಾರ ಸಂತ್ರಸ್ತೆಯ ತಂದೆ ಕಸ್ಟಡಿಯಲ್ಲಿ ಸಾವನ್ನಪ್ಪಿದ ಪ್ರಕರಣದಲ್ಲಿ ಸೆಂಗಾರ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಯಿತು. ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಸೆಂಗಾರ್ ಅವರ ಆದೇಶದ ಮೇರೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಬಂಧಿಸಲಾಗಿತ್ತು. ಅವರು ನ್ಯಾಯಾಂಗ ಬಂಧನದಲ್ಲಿದ್ದಾಗ ಏಪ್ರಿಲ್ 9, 2018ರಂದು ನಿಧನರಾಗಿದ್ದರು. ವಿಚಾರಣಾ ನ್ಯಾಯಾಲಯವು ಸೆಂಗಾರ್ ಅವರ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ