ಉತ್ತರ ಪ್ರದೇಶ: ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವು; ಹಲವರು ಸಿಲುಕಿರುವ ಶಂಕೆ

ಹರ್ಮಿಲಾಪ್ ಬಿಲ್ಡಿಂಗ್ ಎಂದು ಕರೆಯಲ್ಪಡುವ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಗೋಡೌನ್ ಆಗಿ ಬಳಸಲಾಗುತ್ತಿತ್ತು. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಲಕ್ನೋದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವು; ಹಲವರು ಸಿಲುಕಿರುವ ಶಂಕೆ
ಕುಸಿದು ಬಿದ್ದ ಕಟ್ಟಡ ಬಳಿ ರಕ್ಷಣಾ ಕಾರ್ಯಾಚರಣೆ
Follow us
ರಶ್ಮಿ ಕಲ್ಲಕಟ್ಟ
|

Updated on:Sep 07, 2024 | 7:07 PM

ಲಕ್ನೋ ಸೆಪ್ಟೆಂಬರ್ 07: ಶನಿವಾರ ಲಕ್ನೋದ (Lucknow)ಟ್ರಾನ್ಸ್‌ಪೋರ್ಟ್ ನಗರ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಸುಮಾರು ಹತ್ತು ಮಂದಿ ಸಿಲುಕಿರುವ ಶಂಕೆ ಇದೆ. ಅಧಿಕಾರಿಗಳ ಪ್ರಕಾರ, ಕಟ್ಟಡದ ನೆಲಮಾಳಿಗೆಯಲ್ಲಿ ಕಟ್ಟಡ ಕುಸಿತದ ವೇಳೆ ಕಾಮಗಾರಿ ನಡೆಯುತ್ತಿತ್ತು. ಘಟನೆಯಲ್ಲಿ ಸುಮಾರು 13 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರ್ಮಿಲಾಪ್ ಬಿಲ್ಡಿಂಗ್ ಎಂದು ಕರೆಯಲ್ಪಡುವ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಗೋಡೌನ್ ಆಗಿ ಬಳಸಲಾಗುತ್ತಿತ್ತು. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳದಲ್ಲಿವೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸಿಕ್ಕಿಬಿದ್ದಿರುವ ವ್ಯಕ್ತಿಗಳನ್ನು ಹೊರತೆಗೆಯಲು ಶ್ರಮಿಸುತ್ತಿವೆ ಎಂದು ರಿಲೀಫ್ ಕಮಿಷನರ್  ಜಿಎಸ್ ನವೀನ್ ಕುಮಾರ್ ತಿಳಿಸಿದ್ದಾರೆ.

“ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ದ ರಕ್ಷಣಾ ತಂಡಗಳನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದ್ದು ಸಿಲುಕಿರುವ ವ್ಯಕ್ತಿಗಳನ್ನು ಹೊರತೆಗೆಯಲು ಕೆಲಸ ಮಾಡುತ್ತಿದೆ ಎಂದು ಕುಮಾರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮತ್ತು ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: Puja Khedkar: ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್‌ನ್ನು ಐಎಎಸ್‌ನಿಂದ ವಜಾ ಮಾಡಿದ ಕೇಂದ್ರ

“ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಲಕ್ನೋದ ಟ್ರಾನ್ಸ್‌ಪೋರ್ಟ್ ನಗರದಲ್ಲಿ ಕಟ್ಟಡ ಕುಸಿತದ ಘಟನೆಯನ್ನು ಗಮನಕ್ಕೆ ತೆಗೆದುಕೊಂಡಿದ್ದಾರೆ” ಎಂದು ಅವರ ಕಚೇರಿ ಎಕ್ಸ್‌ನಲ್ಲಿ ಬರೆದಿದೆ.

“ಮುಖ್ಯಮಂತ್ರಿ ಅವರು ಜಿಲ್ಲಾ ಆಡಳಿತದ ಅಧಿಕಾರಿಗಳು, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳಿಗೆ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸೂಕ್ತ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಖಚಿತಪಡಿಸಿಕೊಂಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು ಎಂದು ಪೋಸ್ಟ್ ನಲ್ಲಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Sat, 7 September 24

ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್