ಮೊದಲ ಅಲೆಯಿಂದ ಪಾಠ ಕಲಿತಿಲ್ಲ; ಉತ್ತರಪ್ರದೇಶದ ಕೊವಿಡ್ ಬಿಕ್ಕಟ್ಟು ನಿರ್ವಹಣೆ ಬಗ್ಗೆ ಬಿಜೆಪಿ ನಾಯಕರಿಂದಲೇ ಟೀಕೆ

Uttar Pradesh:ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್ ಕೊವಿಡ್-19 ರ ಮೊದಲ ಅಲೆಯಿಂದ ಆರೋಗ್ಯ ಇಲಾಖೆಯು ಯಾವುದೇ ಪಾಠಗಳನ್ನು ಕಲಿಯಲಿಲ್ಲ, ಇದು ಎರಡನೇ ಅಲೆಯಲ್ಲಿ ಕಾಯಿಲೆಯಿಂದಾಗಿ ಹೆಚ್ಚಿನ ಸಂಖ್ಯೆಯ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ಮೊದಲ ಅಲೆಯಿಂದ ಪಾಠ ಕಲಿತಿಲ್ಲ; ಉತ್ತರಪ್ರದೇಶದ ಕೊವಿಡ್ ಬಿಕ್ಕಟ್ಟು ನಿರ್ವಹಣೆ ಬಗ್ಗೆ ಬಿಜೆಪಿ ನಾಯಕರಿಂದಲೇ ಟೀಕೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ

ಲಕ್ನೊ: ಉತ್ತರಪ್ರದೇಶದಲ್ಲಿ ಕೊವಿಡ್-19 ಬಿಕ್ಕಟ್ಟನ್ನು ನಿಭಾಯಿಸಿದ್ದನ್ನು ಟೀಕಿಸಿದ ಆಡಳಿತ ಪಕ್ಷದ ಮುಖಂಡರೊಬ್ಬರು ಎರಡನೇ ಅಲೆಯಲ್ಲಿ ಪ್ರತಿ ಹಳ್ಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಶನಿವಾರ ಈ ಹೇಳಿಕೆ ನೀಡಿದ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್, ರಾಜ್ಯದ ಕೊರೊನಾವೈರಸ್ ಸೋಂಕಿನ ನಿರ್ವಹಣೆಯನ್ನು ಟೀಕಿಸಿದ ಬಿಜೆಪಿ ನಾಯಕರಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್ ಕೊವಿಡ್-19 ರ ಮೊದಲ ಅಲೆಯಿಂದ ಆರೋಗ್ಯ ಇಲಾಖೆಯು ಯಾವುದೇ ಪಾಠಗಳನ್ನು ಕಲಿಯಲಿಲ್ಲ, ಇದು ಎರಡನೇ ಅಲೆಯಲ್ಲಿ ಕಾಯಿಲೆಯಿಂದಾಗಿ ಹೆಚ್ಚಿನ ಸಂಖ್ಯೆಯ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ಕೊವಿಡ್ 19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ರಾಜ್ಯದ ಪ್ರತಿ ಹಳ್ಳಿಯಿಂದ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಆರೋಪಿಸಿದರು. ಸೋಂಕಿಗೆ ಬಲಿಯಾದವರ ಕುಟುಂಬಗಳಿಗೆ 10 ಲಕ್ಷ ರೂ.ಗಳನ್ನು ನೀಡಬೇಕೆಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಸ್ವಾತಂತ್ರ್ಯದ 75 ವರ್ಷಗಳ ನಂತರ, 34 ಲಕ್ಷ ಜನಸಂಖ್ಯೆ ಹೊಂದಿರುವ ಈ ಜಿಲ್ಲೆಯಲ್ಲಿ ವೈದ್ಯರು ಅಥವಾ ಔಷಧಿಗಳಿಲ್ಲ ಎಂದು ಅವರು ವಿಷಾದಿಸಿದರು.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಲ್ಲಿಯಾ ಭೇಟಿಯ ಸಮಯದಲ್ಲಿ ಆರೋಗ್ಯ ಇಲಾಖೆ ಮಾಡಿದ ವ್ಯವಸ್ಥೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿಂಗ್ ಅವರು ಕೇಳಿದಾಗ, ಅಧಿಕಾರಿಗಳು ಸಿಎಂ ಅವರನ್ನು ದಾರಿ ತಪ್ಪಿಸಿದ್ದಾರೆ ಮತ್ತು ಸತ್ಯವನ್ನು ತೋರಿಸಲಾಗಿಲ್ಲ ಎಂದು ಉತ್ತರಿಸಿದ್ದಾರೆ.

ರೈತರಿಗೆ ಡೀಸೆಲ್ ಸಬ್ಸಿಡಿ ನೀಡಬೇಕೆಂದು ಅವರು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದರು. ಏತನ್ಮಧ್ಯೆ, ಬಲಿಯಾ ಬಿಜೆಪಿ ಸಂಸದ ವೀರೇಂದ್ರ ಸಿಂಗ್ ಮಾಸ್ತ್ ಅವರು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ಕೇಂದ್ರದ ಮೂರು ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಹಳಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಿಕಾಯತ್ ಅವರು ರೈತ ಚಳವಳಿಯನ್ನು ಬಿಜೆಪಿ ವಿರೋಧಿ ಚಳುವಳಿಗೆ, ಪಶ್ಚಿಮ ಬಂಗಾಳ ಚುನಾವಣೆಗಳು, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮತ್ತು 370 ನೇ ವಿಧಿಯೊಂದಿಗೆ ಸಂಪರ್ಕ ಲಿಂಕ್ ಮಾಡಬಾರದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ ಪೊಲೀಸರ ಸಮನ್ಸ್​ ಜಾರಿ ಹಿನ್ನೆಲೆ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಟ್ವಿಟರ್​ ಇಂಡಿಯಾ ಮುಖ್ಯಸ್ಥ

ಇದನ್ನೂ ಓದಿ:  ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್​​ರ ಜನ್ಮ ದಿನಾಚರಣೆ ಆಚರಿಸಲಿದೆ ಆರ್​​ಜೆಡಿ: ತೇಜಸ್ವಿ ಯಾದವ್