AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಇರುವುದೊಂದೇ ಅದು ಸನಾತನ ಧರ್ಮ: ಯೋಗಿ ಆದಿತ್ಯನಾಥ್

ಧರ್ಮ ಇರುವುದೊಂದೇ ಅದು ಸನಾತನ ಧರ್ಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಒಂದೇ ಧರ್ಮವಿದೆ, ಅದು ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು ಮತ್ತು ಆರಾಧನಾ ವ್ಯವಸ್ಥೆಗಳು ಎಂದು ಹೇಳಿದ್ದಾರೆ. ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಯೋಗಿ ಅವರು ಸನಾತನ ಧರ್ಮವು ಮಾನವೀಯತೆಯ ಧರ್ಮವಾಗಿದೆ, ಯಾರಾದರೂ ಸನಾತನ ಧರ್ಮದ ಮೇಲೆ ದಾಳಿ ಮಾಡಿದರೆ ಇಡೀ ವಿಶ್ವದ ಮಾನವೀಯತೆ ತೊಂದರೆಗೆ ಒಳಗಾಗುತ್ತದೆ ಎಂದು ಹೇಳಿದ್ದರು.

ಧರ್ಮ ಇರುವುದೊಂದೇ ಅದು ಸನಾತನ ಧರ್ಮ: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್Image Credit source: Hindustan Times
ನಯನಾ ರಾಜೀವ್
|

Updated on: Oct 03, 2023 | 8:49 AM

Share

ಧರ್ಮ ಇರುವುದೊಂದೇ ಅದು ಸನಾತನ ಧರ್ಮ(Sanatana Dharma) ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)ಹೇಳಿದ್ದಾರೆ. ಒಂದೇ ಧರ್ಮವಿದೆ, ಅದು ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು ಮತ್ತು ಆರಾಧನಾ ವ್ಯವಸ್ಥೆಗಳು ಎಂದು ಹೇಳಿದ್ದಾರೆ. ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಯೋಗಿ ಅವರು ಸನಾತನ ಧರ್ಮವು ಮಾನವೀಯತೆಯ ಧರ್ಮವಾಗಿದೆ, ಯಾರಾದರೂ ಸನಾತನ ಧರ್ಮದ ಮೇಲೆ ದಾಳಿ ಮಾಡಿದರೆ ಇಡೀ ವಿಶ್ವದ ಮಾನವೀಯತೆ ತೊಂದರೆಗೆ ಒಳಗಾಗುತ್ತದೆ ಎಂದು ಹೇಳಿದ್ದರು.

ಬ್ರಹ್ಮಲಿನ್ ಮಹಂತ್ ದಿಗ್ವಿಜಯ್ನಾಥ್ ಅವರ ಒಂಬತ್ತನೇ ಪುಣ್ಯತಿಥಿ ಮತ್ತು ಬ್ರಹ್ಮಲಿನ್ ಮಹಂತ್ ಅವೇದ್ಯನಾಥ್ ಅವರ ಒಂಬತ್ತನೇ ಪುಣ್ಯತಿಥಿಯಂದು ಗೋರಖನಾಥ ದೇವಸ್ಥಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಲಿನ್ ಮಹಂತ್ ದಿಗ್ವಿಜಯ್ನಾಥ್ ಮತ್ತು ಬ್ರಹ್ಮಲಿನ್ ಮಹಂತ್ ಅವೇದ್ಯನಾಥ್ ಇಬ್ಬರೂ ಯೋಗಿ ಆದಿತ್ಯನಾಥ್ ಅವರ ಗುರುಗಳು. ಈ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

ಸನಾತನ ಧರ್ಮದ ಮಹತ್ವವನ್ನು ವಿವರಿಸಿದ ಅವರು, ‘ಸನಾತನ ಧರ್ಮವು ಮಾನವೀಯತೆಯ ಧರ್ಮವಾಗಿದ್ದು, ಸನಾತನ ಧರ್ಮದ ಮೇಲೆ ದಾಳಿಯಾದರೆ ಅದು ಇಡೀ ವಿಶ್ವದ ಮಾನವೀಯತೆಗೆ ಬಿಕ್ಕಟ್ಟು ತರುತ್ತದೆ’ ಎಂದು ಹೇಳಿದರು.

ಮತ್ತಷ್ಟು ಓದಿ: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದ: ತಕ್ಕ ಉತ್ತರ ನೀಡಬೇಕು ಎಂದ ನರೇಂದ್ರ ಮೋದಿ

ಶ್ರೀಮದ್ ಭಾಗವತದ ಸಾರವನ್ನು ಅರ್ಥಮಾಡಿಕೊಳ್ಳುವುದು ಮುಖ್ಯ, ಅದನ್ನು ಅರ್ಥಮಾಡಿಕೊಳ್ಳಲು ಆಲೋಚನೆಗಳ ಸಂಕುಚಿತತೆ ಇರಬಾರದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. ಸಣ್ಣ ಮತ್ತು ಸಂಕುಚಿತ ಮನಸ್ಸಿನ ಜನರು ಶ್ರೀಮದ್ ಭಾಗವತದ ಅಗಾಧತೆಯನ್ನು ಎಂದಿಗೂ ನೋಡಲಾಗುವುದಿಲ್ಲ. ಏಳು ದಿನಗಳ ಕಾಲ ನಡೆದ ಶ್ರೀಮದ್ ಭಗವತ್ ಕಥಾ ಜ್ಞಾನ ಯಾಗದಲ್ಲಿ ಇಲ್ಲಿ ಉಪಸ್ಥಿತರಿರುವ ಎಲ್ಲ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಕಥೆಯನ್ನು ಆಲಿಸಿದರು.

ಉದಯನಿಧಿ ಸ್ಟಾಲಿನ್ ಹೇಳಿಕೆ

ಸನಾತನ ಧರ್ಮ ಎಂಬುದು ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಟೀಕಿಸಿದ್ದರು. ಹೇಗೆ ಈ ರೋಗಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲವೂ ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕೋ ಹಾಗೆಯೇ ಸನಾತನ ಧರ್ಮವನ್ನು ವಿರೋಧಿಸಿ ಪ್ರಯೋಜನವಿಲ್ಲ ಅದನ್ನು ಇಲ್ಲದಂತೆ ಮಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆಯು ದೇಶಾದ್ಯಂತ ಗದ್ದಲವನ್ನು ಸೃಷ್ಟಿ ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ