Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತಪ್ಪಾಗಿದೆ ಎಂದು ಮುಸ್ಲಿಂ ಸಮುದಾಯ ಒಪ್ಪಿಕೊಳ್ಳಬೇಕು: ಯೋಗಿ ಆದಿತ್ಯನಾಥ್

ಜ್ಞಾನವಾಪಿ ಮಸೀದಿ(Gyanvapi Mosque)ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತಪ್ಪಾಗಿದೆ ಎಂದು ಮುಸ್ಲಿಂ ಸಮುದಾಯ ಒಪ್ಪಿಕೊಳ್ಳಬೇಕು: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Follow us
ನಯನಾ ರಾಜೀವ್
|

Updated on:Jul 31, 2023 | 12:32 PM

ಜ್ಞಾನವಾಪಿ ಮಸೀದಿ(Gyanvapi Mosque)ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಎಎನ್​ಐಗೆ ನೀಡಿರುವ ಸಂದರ್ಶನವೊಂದರಲ್ಲಿ ಮಾತನಾಡಿರುವ ಯೋಗಿ, ಅದು ಮಸೀದಿಯೇ ಆಗಿದ್ದರೆ ಅಲ್ಲಿ ತ್ರಿಶೂಲ ಏನು ಮಾಡುತ್ತಿದೆ, ಮುಸ್ಲಿಂ ಸಮುದಾಯವು ತಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ, ಜ್ಞಾನವಾಪಿ ಮಸೀದಿ ಸಮೀಕ್ಷೆಯ ವಿಚಾರ ಸುಪ್ರೀಂಕೋರ್ಟ್​ನಲ್ಲಿದ್ದು, ಸಧ್ಯಕ್ಕೆ ಕೋರ್ಟ್ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡಿದೆ, ಈ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಮಹತ್ವ ಪಡೆದಿದೆ.

ಮತ್ತಷ್ಟು ಓದಿ: ಆಗಸ್ಟ್ 3ರಂದು ತೀರ್ಪು ನೀಡುವವರೆಗೆ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆಯಾಜ್ಞೆ ನೀಡಿದ ಅಲಹಾಬಾದ್ ಹೈಕೋರ್ಟ್

1991 ರಲ್ಲಿ, ಕಾಶಿ ವಿಶ್ವನಾಥ ದೇವಾಲಯದ ಭಕ್ತರು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ವಿಶ್ವೇಶ್ವರ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಜ್ಞಾನವಾಪಿ ಮಸೀದಿಯ ಸಮೀಪದಲ್ಲಿ ಮೊಕದ್ದಮೆ ಹೂಡಲಾಗಿದೆ.

ಮಸೀದಿಯಲ್ಲಿ ಜೋತಿರ್ಲಿಂಗ, ತ್ರಿಶೂಲಗಳಿವೆ ಇದು ಮಸೀದಿಯಲ್ಲ ಎಂದು ಅಲ್ಲಿನ ಗೋಡೆಗಳೇ ಕೂಗಿ ಹೇಳುತ್ತಿವೆ. ಮುಸ್ಲಿಮರಿಂದ ಐತಿಹಾಸಿಕ ತಪ್ಪಾಗಿದೆ ಅದನ್ನು ಒಪ್ಪಿಕೊಳ್ಳಬೇಕೆಂದು ನಾವು ಬಯಸುತ್ತೇವೆ.

ವಾರಾಣಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಕ್ಯಾಂಪಸ್‌ನ ವಿವಾದಿತ ವಝುಖಾನಾ ಭಾಗವನ್ನು ಹೊರತುಪಡಿಸಿ ಎಲ್ಲಾ ಪ್ರದೇಶಗಳ ಎಎಸ್‌ಐ ಸಮೀಕ್ಷೆಗೆ ಆದೇಶಿಸಿತ್ತು.

ಈ ಆದೇಶದ ವಿರುದ್ಧ ಮಸೀದಿ ಸಮಿತಿ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಸರ್ವೆ ನಿಲ್ಲಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಿತು.

ಹೈಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಎಎಸ್‌ಐ ಸಮೀಕ್ಷೆಯ ಕುರಿತು ನಿರ್ಧಾರ ಹೊರಬೀಳಲಿದೆ. ಈ ವಿಚಾರದಲ್ಲಿ ರಾಜಕೀಯ ಬಿಸಿ ಏರಿದೆ. ಜ್ಞಾನವಾಪಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಸರಕಾರ ಪ್ರಯತ್ನಿಸುತ್ತಿದೆ ಎಂದರು.

ರಾಷ್ಟ್ರೀಯು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 31 July 23

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್