ಅಮೇಠಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ, ಪ್ರಿಯಾಂಕಾ ಎಲ್ಲಿ ಬಯಸುತ್ತಾರೋ ಅಲ್ಲಿ ಕಣಕ್ಕಿಳಿಯಬಹುದು: ಯುಪಿ ಕಾಂಗ್ರೆಸ್ ಮುಖ್ಯಸ್ಥ

2019 ರಲ್ಲಿ, ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಇದ್ದಾಗಲೇ ಕೊನೆಯ ಕ್ಷಣದಲ್ಲಿ ಅಜಯ್ ರಾಯ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸಲಾಗಿತ್ತು. 2014ರಲ್ಲೂ ಅಜಯ್ ರಾಯ್ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು. ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಅಮೇಠಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ, ಪ್ರಿಯಾಂಕಾ ಎಲ್ಲಿ ಬಯಸುತ್ತಾರೋ ಅಲ್ಲಿ ಕಣಕ್ಕಿಳಿಯಬಹುದು: ಯುಪಿ ಕಾಂಗ್ರೆಸ್ ಮುಖ್ಯಸ್ಥ
ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Aug 18, 2023 | 6:13 PM

ದೆಹಲಿ ಆಗಸ್ಟ್ 18: ರಾಹುಲ್ ಗಾಂಧಿ (Rahul Gandhi) ಅವರು ಅಮೇಠಿಯಿಂದಲೇ (Amethi) ಸ್ಪರ್ಧಿಸಲಿದ್ದಾರೆ ಎಂದು ಅಜಯ್ ರಾಯ್ (Ajay Rai)ಶುಕ್ರವಾರ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಒಂದು ದಿನದ ನಂತರ ಅಜಯ್ ರಾಯ್ ಈ  ಹೇಳಿಕೆ ನೀಡಿದ್ದಾರೆ. 2024 ರ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ರಾಯ್, ಅವರು ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಎಲ್ಲಿ ಬೇಕಾದರೂ ಸ್ಪರ್ಧಿಸುತ್ತಾರೆ. ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಬಯಸಿದರೆ, ಪ್ರತಿಯೊಬ್ಬ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸುತ್ತಾರೆ ಎಂದಿದ್ದಾರೆ. ಸ್ಮೃತಿ ಇರಾನಿ ಕುರಿತು ಮಾತನಾಡಿದ ರಾಯ್, ಅವರು ಭರವಸೆ ನೀಡಿದಂತೆ ಪ್ರತಿ ಕಿಲೋಗೆ ₹ 13 ಕ್ಕೆ ಸಕ್ಕರೆ ಲಭ್ಯವಾಗಬಹುದೇ ಎಂದು ಅವರನ್ನು ಕೇಳಿ, ಸಕ್ಕರೆ ಎಲ್ಲಿ ಹೋಯಿತು ಎಂದು ಸಾರ್ವಜನಿಕರಿಗೆ ಉತ್ತರಿಸಬೇಕು ಎಂದಿದ್ದಾರೆ.

2019 ರಲ್ಲಿ, ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಇದ್ದಾಗಲೇ ಕೊನೆಯ ಕ್ಷಣದಲ್ಲಿ ಅಜಯ್ ರಾಯ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸಲಾಗಿತ್ತು. 2014ರಲ್ಲೂ ಅಜಯ್ ರಾಯ್ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು. ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ:  Maternity Benefits: ಗುತ್ತಿಗೆ ಉದ್ಯೋಗದಲ್ಲಿನ ಅವಧಿ ಮುಗಿದಿದ್ದರೂ ಹೆರಿಗೆ ರಜೆಯನ್ನು ನೀಡಬಹುದು: ಸುಪ್ರೀಂಕೋರ್ಟ್

ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಬಗ್ಗೆ ಆಕೆಯ ಪತಿ ರಾಬರ್ಟ್ ವಾದ್ರಾ ಕೂಡಾ ಮಾತನಾಡಿದ್ದಾರೆ. ಅವಳು ಪ್ರಿಯಾಂಕಾ ಲೋಕಸಭೆಯಲ್ಲಿ ಇರಲೇಬೇಕು. ಆಕೆಗೆ ಎಲ್ಲಾ ಅರ್ಹತೆಗಳಿವೆ. ಅವಳು ಸಂಸತ್ತಿನಲ್ಲಿರಲು ಅರ್ಹಳು. ಕಾಂಗ್ರೆಸ್ ಪಕ್ಷವು ಅವಳನ್ನು ಸ್ವೀಕರಿಸುತ್ತದೆ ಮತ್ತು ಉತ್ತಮವಾಗಿ ಯೋಜಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ್ದ ರಾಬರ್ಟ್ ವಾದ್ರಾ ಹೇಳಿದ್ದಾರೆ.

ವಯನಾಡಿನಿಂದ ಸ್ಪರ್ಧಿಸಿದ್ದರು ರಾಹುಲ್ ಗಾಂಧಿ

2019ರಲ್ಲಿ ರಾಹುಲ್ ಗಾಂಧಿ ಅವರು ಅಮೇಠಿ ಮತ್ತು ವಯನಾಡ್ ಎರಡರಿಂದಲೂ ಸ್ಪರ್ಧಿಸಿದ್ದರು. ಅಮೇಠಿ ಪ್ರತಿಷ್ಠೆಯ ಸ್ಥಾನವಾಗಿದ್ದರೆ ವಯನಾಡ್ ದಕ್ಷಿಣ ಭಾರತದಲ್ಲಿ ಅವರ ಮೊದಲ ಪ್ರವೇಶವಾಗಿತ್ತು. ಅಮೇಠಿಯಲ್ಲಿ ರಾಹುಲ್ ಗಾಂಧಿಯನ್ನು ಸ್ಮೃತಿ ಇರಾನಿ ಸೋಲಿಸಿದ್ದುಸ ರಾಹುಲ್ ಗಾಂಧಿ ಅವರು ವಯನಾಡಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 2019 ರ ಮೋದಿ ಉಪನಾಮ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡ ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನವಾಗಿತ್ತು. ರಾಹುಲ್ ಗಾಂಧಿ ಅವರ ದೋಷಾರೋಪಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ್ದರಿಂದ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್