ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಸಮಾಧಿಗೆ ತ್ರಿವರ್ಣ ಧ್ವಜ ಹೊದಿಸಿದ ಕಾಂಗ್ರೆಸ್ ಮುಖಂಡನ ಬಂಧನ
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್(Atiq Ahmad) ಅಮಾಧಿಗೆ ತ್ರಿವರ್ಣ ಧ್ವಜ ಹೊದಿಸಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್(Atiq Ahmad) ಅಮಾಧಿಗೆ ತ್ರಿವರ್ಣ ಧ್ವಜ ಹೊದಿಸಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಯಾಗ್ರಾಜ್ನ ರಾಜ್ಕುಮಾರ್ ಅಲಿಯಾಸ್ ರಜ್ಜು ಭಯ್ಯಾ ಅತೀಕ್ನನ್ನು ಹುತಾತ್ಮ ಎಂದು ಕರೆದಿದ್ದು, ಅವರ ಮೇಲೆ ತ್ರಿವರ್ಣ ಧ್ವಜವನ್ನು ಹೊದಿಸಿ ಭಾರತರತ್ನ ನೀಡುವಂತೆ ಒತ್ತಾಯಿಸಿದ್ದರು. ಕಾಂಗ್ರೆಸ್ ಪಕ್ಷವು ರಾಜ್ ಕುಮಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಿದೆ.
ರಜ್ಜು ಕೆಲವು ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಮನೆಯಲ್ಲಿ ಮನೋವೈದ್ಯಕೀಯ ಔಷಧಿಗಳ ಪ್ರಿಸ್ಕ್ರಿಪ್ಷನ್ ಕಂಡುಬಂದಿದೆ ಎಂಬುದು ತಿಳಿದುಬಂದಿದೆ.
ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದರು. ಆ ಭಯಾನಕ ಹತ್ಯೆಯ ದೃಶ್ಯಾವಳಿಗಳು ಆಸ್ಪತ್ರೆಯ ಹೊರಗಡೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮತ್ತಷ್ಟು ಓದಿ: Asad Kalia: ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಗ್ಯಾಂಗ್ನ ಸದಸ್ಯ ಅಸದ್ ಕಾಲಿಯಾ ಬಂಧನ
ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ದರೋಡೆಕೋರನ ದೇಹದಲ್ಲಿ ಒಂಬತ್ತು ಗುಂಡೇಟುಗಳು ಕಂಡುಬಂದಿವೆ. ಅವರ ಸಹೋದರ ಅಶ್ರಫ್ ಅಹ್ಮದ್ ಅವರ ದೇಹದಿಂದ ಐದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಅತೀಕ್ ಅಹ್ಮದ್ ತಲೆಗೆ ಒಂದು ಬಾರಿ ಮತ್ತು ಎದೆ ಮತ್ತು ಬೆನ್ನಿನ ಮೇಲೆ ಎಂಟು ಬಾರಿ ಗುಂಡು ಹಾರಿಸಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಶ್ರಫ್ ಅವರ ಮುಖದ ಮೇಲೆ ಒಂದು, ಬೆನ್ನಿನ ಮೇಲೆ ನಾಲ್ಕು ಗುಂಡೇಟುಗಳು ಕಂಡುಬಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ