ಸಂತ್ರಸ್ತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್ ಅಮಾನತ್ತು, ಎಲ್ಲಿ?

ಉತ್ತರ ಪ್ರದೇಶ: ವಾಟ್ಸಾಪ್‌ನಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್​ನಲ್ಲಿ ನೆಡೆದಿದೆ. ಇತ್ತೀಚೆಗೆ ಸಂತ್ರಸ್ತ ಮಹಿಳೆ ತನ್ನ ಅಳಿಯರೊಂದಿಗೆ ವಿವಾದ ಮಾಡಿಕೊಂಡಿದ್ದರು. ಇದರಿಂದಾಗಿ ಸಿಕಂದರಾಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳೆ ತನ್ನ ಅಳಿಯನ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತುಕೊಂಡು ಠಾಣೆಯ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದಾರೆ. ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲಿಗೆ ಅಶ್ಲೀಲ […]

ಸಂತ್ರಸ್ತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್ ಅಮಾನತ್ತು, ಎಲ್ಲಿ?
ಸಾಧು ಶ್ರೀನಾಥ್​

Updated on: Aug 18, 2020 | 12:42 PM

ಉತ್ತರ ಪ್ರದೇಶ: ವಾಟ್ಸಾಪ್‌ನಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್​ನಲ್ಲಿ ನೆಡೆದಿದೆ.

ಇತ್ತೀಚೆಗೆ ಸಂತ್ರಸ್ತ ಮಹಿಳೆ ತನ್ನ ಅಳಿಯರೊಂದಿಗೆ ವಿವಾದ ಮಾಡಿಕೊಂಡಿದ್ದರು. ಇದರಿಂದಾಗಿ ಸಿಕಂದರಾಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳೆ ತನ್ನ ಅಳಿಯನ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತುಕೊಂಡು ಠಾಣೆಯ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದಾರೆ.

ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲಿಗೆ ಅಶ್ಲೀಲ ವಿಡಿಯೋ ಹಾಗೂ ಮೆಸೇಜ್​ಗಳನ್ನು ವಾಟ್ಸಾಪ್ ಮಾಡಿದ್ದಾರೆ. ಇನ್ಸ್‌ಪೆಕ್ಟರ್​ನ ಈ ಕಿರುಕುಳದಿಂದ ಬೇಸತ್ತ ಸಂತ್ರಸ್ತ ಮಹಿಳೆ, ಬುಲಂದ್‌ಶಹರ್​ನಲ್ಲಿ ಮೇಲಾಧಿಕಾರಿಗಳಿಗೆ, ಇನ್ಸ್‌ಪೆಕ್ಟರ್ ವಿರುದ್ಧ ದೂರು ನೀಡಿದ್ದಾಳೆ.

ದೂರಿನನ್ವಯ ತನಿಖೆ ನಡೆಸಿದ ಮೇಲಧಿಕಾರಿಗಳು, ಪ್ರಾಥಮಿಕ ತನಿಖೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧದ ಆರೋಪಗಳು ನಿಜವೆಂದು ದೃಢಪಟ್ಟಿದ್ದು, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್, ಆಪಾದಿತ ಪೊಲೀಸ್ ಅಧಿಕಾರಿಯನ್ನು ಅಮಾನತಗೊಳಿಸಿ, ಈ ಬಗ್ಗೆ ತನಿಖೆ ನಡೆಸಲು ಇಲಾಖೆಗೆ ಆದೇಶ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us