ಬಿಜೆಪಿ ನಾಯಕರು ಎಲ್ಲಿ ಹೇಳುತ್ತಾರೋ ಅಲ್ಲಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಸಿಎಂ ಯೋಗಿ ಆದಿತ್ಯನಾಥ್

| Updated By: ಸುಷ್ಮಾ ಚಕ್ರೆ

Updated on: Jan 03, 2022 | 8:01 PM

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂಬರುವ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪುನರುಚ್ಚರಿಸುವ ಮೂಲಕ ತಮ್ಮ ರಾಜಕೀಯ ವಿರೋಧಿಗಳಾದ ಅಖಿಲೇಶ್ ಯಾದವ್, ಮಾಯಾವತಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಬಿಜೆಪಿ ನಾಯಕರು ಎಲ್ಲಿ ಹೇಳುತ್ತಾರೋ ಅಲ್ಲಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಸಿಎಂ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್​ ಮತ್ತು ಪ್ರಧಾನಿ ಮೋದಿ
Follow us on

ನವದೆಹಲಿ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂಬ ಒತ್ತಡ ಹೆಚ್ಚಾಗಿದೆ. ತಾವು ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ಬಿಜೆಪಿ ಪಕ್ಷ ನಿರ್ಧರಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಚುನಾವಣೆಗೆ ಸ್ಪರ್ಧಿಸುವುದರಿಂದ ಕೆಲ ಸಂದೇಶ ರವಾನೆಗೆ ಸಹಾಯಕವಾಗುತ್ತೆ ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿದೆ. ವಾರಾಣಸಿ (Varanasi) ಕ್ಷೇತ್ರದಲ್ಲಿ ನರೇಂದ್ರ ಮೋದಿ (Narendra Modi) ಸ್ಪರ್ಧೆಯಿಂದ ಸುತ್ತಮುತ್ತಲಿನ ಕ್ಷೇತ್ರ ಗೆಲ್ಲಲು ಸಹಾಯಕವಾಯಿತು. ಈಗ ಯೋಗಿ ಆದಿತ್ಯನಾಥ್ ವಿಧಾನಸಭಾ ಚುನಾವಣೆ ಸ್ಪರ್ಧೆಯ ಹಿಂದೆಯೂ ಅಂಥದ್ದೇ ಲೆಕ್ಕಾಚಾರಗಳಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂಬರುವ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪುನರುಚ್ಚರಿಸುವ ಮೂಲಕ ತಮ್ಮ ರಾಜಕೀಯ ವಿರೋಧಿಗಳಾದ ಅಖಿಲೇಶ್ ಯಾದವ್, ಮಾಯಾವತಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಅಯೋಧ್ಯೆ, ಗೋರಖ್‌ಪುರ ಅಥವಾ ಮಥುರಾ ಕ್ಷೇತ್ರಗಳ ಪೈಕಿ ಯಾವುದಾದರೊಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಲಕ್ನೋದಲ್ಲಿ ಶನಿವಾರ ಆದಿತ್ಯನಾಥ್ ಎಲ್ಲಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಒಂದು ವೇಳೆ ಅಯೋಧ್ಯೆಯಿಂದ ಸ್ಪರ್ಧಿಸಿದರೆ ಯೋಗಿ ಆದಿತ್ಯನಾಥ್, ರಾಮ ಜನ್ಮಭೂಮಿ ಆಂದೋಲನದೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದರಿಂದ ರಾಜ್ಯದಲ್ಲಿ ದೊಡ್ಡ ಸಂದೇಶದೊಂದಿಗೆ ಸಾಂಕೇತಿಕ ಹೋರಾಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈಗ ವಾರಾಣಸಿಯೊಂದಿಗೆ ಬಾಂಧವ್ಯ ಹೊಂದಿದ್ದಾರೆ. ಅದೇ ರೀತಿ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆಯೊಂದಿಗೆ ಸಂಬಂಧ ಹೊಂದುತ್ತಾರೆ. ಸಾಂಪ್ರದಾಯಿಕ ಆಯ್ಕೆಯೆಂದರೆ ಯೋಗಿ ಆದಿತ್ಯನಾಥ ತವರು ಜಿಲ್ಲೆ ಗೋರಖ್ ಪುರ ಅಥವಾ ಇತ್ತೀಚೆಗೆ ಜನವಿಶ್ವಾಸ ಯಾತ್ರೆಗೆ ಚಾಲನೆ ನೀಡಿರುವ ಮಥುರಾ ಜಿಲ್ಲೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಮಥುರಾದಿಂದಲೂ ಯೋಗಿ ಆದಿತ್ಯನಾಥ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯ ಹರನಾಥ ಸಿಂಗ್ ಯಾದವ್, ಮಥುರಾದಿಂದ ಸಿಎಂ ಯೋಗಿ ಆದಿತ್ಯನಾಥ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ.

ಅಖಿಲೇಶ್ ಯಾದವ್, ಮಾಯಾವತಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲದಿರುವ ಸಮಯದಲ್ಲಿ ಈ ಕ್ರಮವು ನಾಯಕನ “ವಿಶ್ವಾಸ” ಮತ್ತು “ಯುದ್ಧದ ಅಖಾಡದಲ್ಲಿ ಮುಂದೆ ನಿಂತು ಹೋರಾಡುವ ಮನೋಭಾವ, ಪ್ರಜ್ಞೆಯನ್ನು ತೋರಿಸುತ್ತದೆ ಎಂದು ಸಿಎಂ ಆಪ್ತರು ಹೇಳಿದ್ದಾರೆ.

ಅಖಿಲೇಶ್ ಯಾದವ್ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಅವರು ಹಿಂದೆಂದೂ ಹಾಗೆ ಮಾಡಿಲ್ಲ. ಸಂಸತ್ತಿನ ಸ್ಥಾನಗಳಿಗೆ ಮಾತ್ರ ಸ್ಪರ್ಧಿಸಿದ್ದಾರೆ. ನಂತರ ಅವರ ಪಕ್ಷವು ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಬೇಕಾಯಿತು ಎಂದು ಸಹಾಯಕರು ಹೇಳಿದರು. ಮಾಯಾವತಿ ಅವರು ದೀರ್ಘಕಾಲದಿಂದ ಚುನಾವಣೆಗೆ ಸ್ಪರ್ಧಿಸಿಲ್ಲ, ಪ್ರಿಯಾಂಕಾ ಗಾಂಧಿ ಅವರು ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟತೆ ಇಲ್ಲ.

ಶನಿವಾರ ಲಕ್ನೋದಲ್ಲಿ ಪತ್ರಕರ್ತರೊಂದಿಗೆ ಅನೌಪಚಾರಿಕವಾಗಿ ಸಂವಾದ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್, ಇದೇ ವೇಳೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ 300 ಸ್ಥಾನಗಳನ್ನು ದಾಟಲಿದೆ. ಕೆಲವು ಹಾಲಿ ಶಾಸಕರ ಟಿಕೆಟ್‌ಗೆ ಕತ್ತರಿ ಬೀಳುವ ವಿಶ್ವಾಸವಿದೆ ಎಂದು ಹೇಳಿದರು. ಅಖಿಲೇಶ್ ಯಾದವ್ ಅವರು ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ಇತ್ತೀಚೆಗೆ ಘೋಷಿಸಿದ್ದನ್ನು ಅವರು ಲಘುವಾಗಿ ಹೇಳಿದರು. ಅಖಿಲೇಶ್ ಯಾದವ್ ಅವರು ಅಧಿಕಾರದಲ್ಲಿದ್ದರೆ ಇಷ್ಟು ಹೊತ್ತಿಗೆ ರಾಮಮಂದಿರವನ್ನು ನಿರ್ಮಿಸುತ್ತಿದ್ದರು. ರಾಜ್ಯದ 75 ಜಿಲ್ಲೆಗಳ ಪೈಕಿ ನಾಲ್ಕು ಜಿಲ್ಲೆಗಳಿಗೆ ಮಾತ್ರ ನಿರಂತರ ವಿದ್ಯುತ್ ನೀಡಿದ ಯಾದವ್ ಮತ್ತು ಕರಸೇವಕರ ಮೇಲೆ ಗುಂಡು ಹಾರಿಸಿದ ಪಕ್ಷವನ್ನು ಯಾರೂ ನಂಬುವುದಿಲ್ಲ ಎಂದು ಸಿಎಂ ಆದಿತ್ಯನಾಥ್ ಹೇಳಿದರು.

ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದಲ್ಲಿ ಜನರಿಗೆ ನೀಡುತ್ತಿರುವ ವಿವಿಧ ಭರವಸೆಗಳ ಬಗ್ಗೆ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದ ಜನರಿಗೆ ಅಂತಹ ಭರವಸೆಗಳನ್ನು ಏಕೆ ನೀಡುತ್ತಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಕೇಳಿದರು. 2017ರಲ್ಲಿ ಎಸ್‌ಪಿ ಸರ್ಕಾರದ ವೈಫಲ್ಯದ ಮೇಲೆ ಬಿಜೆಪಿ ಚುನಾವಣೆ ಎದುರಿಸಿತ್ತು. ಈ ಬಾರಿ ನಾವು ನಮ್ಮ ಸಾಧನೆಯೊಂದಿಗೆ ಕಣದಲ್ಲಿದ್ದೇವೆ ಎಂದು ಸಿಎಂ ಯೋಗಿ ಆದಿತ್ಯನಾಥ ಹೇಳಿದರು.

ನಿಗದಿತ ಸಮಯಕ್ಕೆ ಚುನಾವಣೆ ನಡೆಯಬೇಕು ಎಂದು ಅವರು ಒತ್ತಿ ಹೇಳಿದರು ಮತ್ತು ಭಾರತೀಯ ಚುನಾವಣಾ ಆಯೋಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. 2022ರಲ್ಲಿ ಬಿಜೆಪಿ ಶೇ.40ಕ್ಕಿಂತ ಹೆಚ್ಚು ಮತ ಗಳಿಸುವ ವಿಶ್ವಾಸವಿದೆ ಎಂದು ಸಿಎಂ ಆಪ್ತರೊಬ್ಬರು ಹೇಳಿದ್ದಾರೆ.

ಇದರ ಮಧ್ಯೆಯೇ ಸಿಎಂ ಯೋಗಿ ಆದಿತ್ಯನಾಥ್ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಯೋಗಿ ಆದಿತ್ಯನಾಥ್ ಯಾವ ಜಿಲ್ಲೆಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಈಗ ಕುತೂಹಲ ಸೃಷ್ಟಿಯಾಗಿದೆ. ಯೋಗಿ ಆದಿತ್ಯನಾಥ್ ಚುನಾವಣೆಗೆ ಸ್ಪರ್ಧಿಸಿದ ಜಿಲ್ಲೆ, ಪ್ರಾಂತ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲಕರ ವಾತಾವರಣ ಸೃಷ್ಟಿಯಾಗುತ್ತದೆ ಎಂಬ ಭಾವನೆ ಬಿಜೆಪಿ ಪಕ್ಷದಲ್ಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದರೂ, ಯೋಗಿ ಆದಿತ್ಯನಾಥ್ ಮಾಡಲಿಲ್ಲ ಯಾಕೆ?-ಅಖಿಲೇಶ್ ಯಾದವ್ ಹೇಳಿದ ಕಾರಣ ಇದು

ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ; ದೂರು ದಾಖಲು