Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ ಗುಫ್ರಾನ್​ ಹತ್ಯೆ

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ ಗುಫ್ರಾನ್​ ಹತ್ಯೆ
ಎನ್​ಕೌಂಟರ್
Image Credit source: ANI

Updated on: Jun 27, 2023 | 8:00 AM

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಾತಕಿಯನ್ನು ಗುಫ್ರಾನ್ ಎಂದು ಗುರುತಿಸಲಾಗಿದ್ದು, ಹಲವಾರು ಕೊಲೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಈತ ಬೇಕಾಗಿದ್ದ ಎನ್ನಲಾಗಿದೆ. ಪ್ರತಾಪ್‌ಗಢ್ ಮತ್ತು ಉತ್ತರ ಪ್ರದೇಶದ ಇತರ ಜಿಲ್ಲೆಗಳಲ್ಲಿ 13 ಕೊಲೆ, ಕೊಲೆ ಯತ್ನ ಮತ್ತು ದರೋಡೆ ಪ್ರಕರಣಗಳಲ್ಲಿ ಗುಫ್ರಾನ್ ಬೇಕಾಗಿದ್ದ.

ಈತನ ಪತ್ತೆಗೆ ಉತ್ತರ ಪ್ರದೇಶ ಪೊಲೀಸರು 1,00,000 ರೂ.ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ಪೊಲೀಸರು ಮತ್ತು ಅಪರಾಧಿಗಳ ನಡುವಿನ ಎನ್‌ಕೌಂಟರ್‌ನಲ್ಲಿ ಇದು ಇತ್ತೀಚಿನದು.

ಮತ್ತಷ್ಟು ಓದಿ: Encounter In UP: ಯುಪಿಯಲ್ಲಿ ಕಳೆದ 6 ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಎನ್​ಕೌಂಟರ್​ಗಳು, 63 ಕ್ರಿಮಿನಲ್​ಗಳ ಹತ್ಯೆ

2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ, 10,900 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು ನಡೆದಿವೆ, ಇದರಲ್ಲಿ 185 ಕ್ಕೂ ಹೆಚ್ಚು ಕ್ರಿಮಿನಲ್‌ಗಳು ಕೊಲ್ಲಲ್ಪಟ್ಟಿದ್ದಾರೆ.

ಕೌಶಂಬಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಗುಫ್ರಾನ್‌ಗೆ ಗುಂಡು ಹಾರಿಸಲಾಗಿದೆ. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದಾರೆ.

ಎಸ್‌ಪಿ ಕೌಶಂಬಿ ಬ್ರಿಜೇಶ್ ಶ್ರೀವಾಸ್ತವ ಪ್ರಕಾರ, ಕೌಶಂಬಿಯ ಮಂಜನ್‌ಪುರದ ಸಮದಾ ಸಕ್ಕರೆ ಕಾರ್ಖಾನೆಯ ಬಳಿ ಯುಪಿ ಎಸ್‌ಟಿಎಫ್‌ನೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೊ.ಗುಫ್ರಾನ್ ಎಂದು ಗುರುತಿಸಲಾದ ಕ್ರಿಮಿನಲ್ ಮೃತಪಟ್ಟಿದ್ದಾನೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 8:00 am, Tue, 27 June 23

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us