AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಮುಸ್ಲಿಂ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಸಹೋದರರು 22 ವರ್ಷದ ಹಿಂದೂ ಯುವತಿ ಹಾಗೂ 27 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾರೆ. ಅಂತರ್ಧರ್ಮೀಯ ಪ್ರೀತಿಯನ್ನು ವಿರೋಧಿಸಿದ ಸಹೋದರರು, ಪ್ರೇಮಿಗಳನ್ನು ಕಟ್ಟಿಹಾಕಿ ಬರ್ಬರವಾಗಿ ಕೊಚ್ಚಿ ಕೊಂದಿದ್ದಾರೆ. ಪೊಲೀಸರ ತನಿಖೆಯಲ್ಲಿ ಹತ್ಯೆಯ ರಹಸ್ಯ ಬಯಲಾಗಿದ್ದು, ಇಬ್ಬರು ಸಹೋದರರನ್ನು ಬಂಧಿಸಲಾಗಿದೆ.

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು
ಸಾವುImage Credit source: iStock
ನಯನಾ ರಾಜೀವ್
|

Updated on: Jan 22, 2026 | 2:06 PM

Share

ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ ಸಹೋದರರು ಅಂತರ್ಧರ್ಮೀಯ ಸಂಬಂಧವನ್ನು ವಿರೋಧಿಸಿದರು ಮತ್ತು ಆತನನ್ನು ಮರೆತುಬಿಡು ಎಂದು ಕೇಳಿಕೊಂಡಿದ್ದರು.

ಸುಮಾರು ಮೂರು ದಿನಗಳ ಹಿಂದೆ, ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿತ್ತು. ಆಕೆಯ ಸಹೋದರರನ್ನು ವಿಚಾರಣೆ ನಡೆಸಿದಾಗ, ಇಬ್ಬರನ್ನು ಕೊಂದಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ

ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದಿದ್ದರು. ಬುಧವಾರ ಸಂಜೆ ಶವಗಳನ್ನು ಹೊರತೆಗೆಯಲಾಯಿತು. ಅರ್ಮಾನ್ ಮತ್ತು ಕಾಜಲ್ ಅವರ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಯುವತಿಯ ಸಹೋದರರೇ ಅವರನ್ನು ಕೊಂದಿದ್ದಾರೆ ಎಂಬುದು ತಿಳಿದುಬಂದಿದೆ. ಸಹೋದರರು ತಪ್ಪೊಪ್ಪಿಕೊಂಡಿದ್ದು, ನಾವು ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಕೊಲೆಗಳಿಗೆ ಬಳಸಿದ ಗುದ್ದಲಿಯನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಆಂಟಿಲ್ ಹೇಳಿದ್ದಾರೆ.

ಮಹಿಳೆಯ ಮೂವರು ಸಹೋದರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅರ್ಮಾನ್ ಮತ್ತು ಕಾಜಲ್ ನಡುವಿನ ಯಾವುದೇ ಸಂಬಂಧದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಅರ್ಮಾನ್ ಸಹೋದರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ
ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ
ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ದುರಂತ: 13 ಬೈಕ್‌ಗಳು ಭಸ್ಮ
ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ದುರಂತ: 13 ಬೈಕ್‌ಗಳು ಭಸ್ಮ
ಕೇರಳ, ತಮಿಳುನಾಡಲ್ಲೂ ರಾಜ್ಯಪಾಲ VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು?
ಕೇರಳ, ತಮಿಳುನಾಡಲ್ಲೂ ರಾಜ್ಯಪಾಲ VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು?