AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಗಂಟೆಗಳ ಕಾಲ ಚಿತ್ರಹಿಂಸೆ, ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಯನ್ನು ಪತ್ನಿ, ಆಕೆಯ ಪ್ರಿಯಕರ ಮತ್ತು ತಂಗಿ ಸೇರಿ ಕ್ರೂರವಾಗಿ ಚಿತ್ರಹಿಂಸೆ ನೀಡಿ, ವಿದ್ಯುತ್ ಶಾಕ್ ಕೊಟ್ಟು, ವಿಷ ಕುಡಿಸಿ ಕೊಲೆ ಮಾಡಿದ್ದಾರೆ. ನಂತರ ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

3 ಗಂಟೆಗಳ ಕಾಲ ಚಿತ್ರಹಿಂಸೆ, ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ
ದಂಪತಿImage Credit source: India Today
ನಯನಾ ರಾಜೀವ್
|

Updated on: May 26, 2026 | 11:14 AM

Share

ಮೊರಾದಾಬಾದ್, ಮೇ 26: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿ(Husband)ಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ(Murder) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ, ಆಂಚಲ್‌ಗೆ ಆಕೆಯ ಸ್ವಂತ ಸೋದರಳಿಯ ಅಂಕಿತ್ (21) ಎಂಬಾತನೊಂದಿಗೆ ವಿವಾಹೇತರ ಸಂಬಂಧವಿತ್ತು. ಈ ವಿಷಯ ಪವನ್‌ಗೆ ತಿಳಿದಿದ್ದರಿಂದ ಇಬ್ಬರ ನಡುವೆ ಪ್ರತಿದಿನ ತೀವ್ರ ಕೌಟುಂಬಿಕ ಜಗಳಗಳು ನಡೆಯುತ್ತಿದ್ದವು. ಇದೇ ಕಾರಣಕ್ಕೆ ಆಂಚಲ್ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೆ ಪ್ಲಾನ್ ಮಾಡಿದ್ದಳು.

ಈ ಪಕ್ಕಾ ಸ್ಕೆಚ್‌ಗೆ ಸಹಾಯ ಮಾಡಲು ಆಂಚಲ್ ತಂಗಿ ಶಿಖಾ (18) ನಾಲ್ಕು ದಿನಗಳ ಮೊದಲೇ ಇವರ ಮನೆಗೆ ಬಂದಿದ್ದಳು. ಅಷ್ಟೇ ಅಲ್ಲದೆ ಶಿಖಾ ತನ್ನ ಗೆಳೆಯ ಅಜಯ್ (19) ಎಂಬಾತನನ್ನು ಕೂಡ ಈ ಅಪರಾಧ ಕೃತ್ಯಕ್ಕೆ ಬಳಸಿಕೊಂಡಿದ್ದಳು.

ಮತ್ತಷ್ಟು ಓದಿ: ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾನಕ್ಕೆ ಅಪ್ರಾಪ್ತೆ ಬಲಿ

ನಡೆದಿದ್ದೇನು? ಕೊಲೆಯ ದಿನದಂದು ಈ ನಾಲ್ವರ ಗ್ಯಾಂಗ್ ಪವನ್‌ಗೆ ಬಲವಂತವಾಗಿ ವಿಷ ಕುಡಿಸಲು ಯತ್ನಿಸಿದೆ. ಪವನ್ ತೀವ್ರವಾಗಿ ಪ್ರತಿರೋಧ ಒಡ್ಡಿದಾಗ, ಆತನನ್ನು ಹಗ್ಗದಿಂದ ಕಟ್ಟಿಹಾಕಿ ಬರ್ಬರವಾಗಿ ಥಳಿಸಿದ್ದಾರೆ. ಅಷ್ಟಕ್ಕೇ ನಿಲ್ಲಿಸದೆ ಸುಮಾರು ಮೂರು ಗಂಟೆಗಳ ಕಾಲ ಪವನ್‌ನನ್ನು ಒತ್ತೆಯಾಳಾಗಿ ಇರಿಸಿಕೊಂಡು, ಆತನಿಗೆ ಸತತವಾಗಿ ವಿದ್ಯುತ್ ಆಘಾತಗಳನ್ನು ನೀಡಿದ್ದಾರೆ. ಪವನ್ ತೀವ್ರವಾಗಿ ಜರ್ಜರಿತನಾದಾಗ, ಕೊನೆಗೆ ಆತನಿಗೆ ಬಲವಂತವಾಗಿ ವಿಷ ಪ್ರಾಶನ ಮಾಡಿಸಿದ್ದಾರೆ.

ಪವನ್ ಮೃತಪಟ್ಟ ನಂತರ ಕೊಲೆಯನ್ನು ಮುಚ್ಚಿಹಾಕಲು, ಶವವನ್ನು ಮೆಟ್ಟಿಲುಗಳ ಮೇಲಿಂದ ತಳ್ಳಿ ಹಾಕಿದ್ದಾರೆ. ನಂತರ ನೆರೆಹೊರೆಯವರಿಗೆ ಪವನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂಬಿಸಲು ಕಥೆ ಕಟ್ಟಿದ್ದಾರೆ.

ಪವನ್ ಕುಟುಂಬಸ್ಥರ ಪ್ರಕಾರ, ಆತನಿಗೆ ಮೊದಲೇ ಜೀವ ಬೆದರಿಕೆ ಇತ್ತು. ಮೂರು ತಿಂಗಳ ಹಿಂದೆಯೇ ಪವನ್ ತನ್ನ ಸಹೋದರಿಗೆ ಕರೆ ಮಾಡಿ ತನಗೆ ಏನಾದರೂ ಅಪಾಯ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದನು. ಸದ್ಯ ಪೊಲೀಸರು ಆಂಚಲ್, ಅಂಕಿತ್, ಶಿಖಾ ಮತ್ತು ಅಜಯ್ ನಾಲ್ವರನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More