UP Investors Summit: ಉತ್ತರ ಪ್ರದೇಶದ ಹೂಡಿಕೆದಾರರ ಸಮಾವೇಶದಲ್ಲಿ 80,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ
Narendra Modi: ಉತ್ತರ ಪ್ರದೇಶದಲ್ಲಿ 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
ಲಕ್ನೋ: ಉತ್ತರ ಪ್ರದೇಶದಲ್ಲಿ 80,000 ಕೋಟಿ ರೂ.ಗಳ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದಾರೆ. ಇದರಿಂದ ಉತ್ತರ ಪ್ರದೇಶದ ಯುವಜನತೆಗೆ ಸಾವಿರಾರು ಉದ್ಯೋಗಾವಕಾಶಗಳು ಸಿಗುತ್ತದೆ. ಉತ್ತರ ಪ್ರದೇಶದ ಹೂಡಿಕೆದಾರರ ಸಮಾವೇಶದಲ್ಲಿ (Uttar Pradesh Investors Summit) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಇಂದು ಇಲ್ಲಿ 80,000 ಕೋಟಿ ರೂ.ಗೂ ಹೆಚ್ಚು ಹೂಡಿಕೆಯ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಈ ದಾಖಲೆಯ ಹೂಡಿಕೆಯು ಸಾವಿರಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಅದಕ್ಕಾಗಿ ನಾನು ಉತ್ತರಪ್ರದೇಶದ ಯುವಕರನ್ನು ಅಭಿನಂದಿಸುತ್ತೇನೆ” ಎಂದಿದ್ದಾರೆ.
80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದ ಯುವಜನರಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಹೂಡಿಕೆದಾರರಿಗೆ ಧನ್ಯವಾದ ಹೇಳಿದ ನರೇಂದ್ರ ಮೋದಿ, ಮುಂದಿನ 25 ವರ್ಷಗಳಲ್ಲಿ ಹೊಸ ಗುರಿಗಳನ್ನು ಹೊಂದಿಸುವ ಸಮಯ ಇದು ಎಂದು ಹೇಳಿದರು. ಕೇಂದ್ರದಲ್ಲಿ 8 ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ನರೇಂದ್ರ ಮೋದಿ, ನಾವು ಇತ್ತೀಚೆಗೆ 8 ವರ್ಷಗಳ ಕೇಂದ್ರ ಆಡಳಿತವನ್ನು ಪೂರ್ಣಗೊಳಿಸಿದ್ದೇವೆ. ಈ ವರ್ಷಗಳಲ್ಲಿ, ನಾವು ಸುಧಾರಣೆ, ಸಾಧನೆ, ರೂಪಾಂತರದ ಮಂತ್ರದ ಮೇಲೆ ಪ್ರಗತಿ ಹೊಂದಿದ್ದೇವೆ ಎಂದಿದ್ದಾರೆ.
PM Narendra Modi attends the Ground Breaking Ceremony @ 3.0 of the UP Investors Summit in Lucknow
CM Yogi Adityanath, Defence Minister Rajnath Singh also present at the event pic.twitter.com/5qE7CeM7EI
— ANI UP/Uttarakhand (@ANINewsUP) June 3, 2022
ಇದನ್ನೂ ಓದಿ: Narendra Modi: ಉತ್ತರ ಪ್ರದೇಶದಲ್ಲಿ 80,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ರಾಜ್ಯದ ಅಭಿವೃದ್ಧಿಯನ್ನು ಶ್ಲಾಘಿಸಿದರು. ರಾಜ್ಯದ ಯುವಜನರ ಸಾಮರ್ಥ್ಯಗಳನ್ನು ಬಣ್ಣಿಸಿದರು. ರಾಜ್ಯದಲ್ಲಿ ಹೂಡಿಕೆದಾರರ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರಪ್ರದೇಶದ ಯುವಕರು ನಿಮ್ಮ ಕನಸುಗಳಿಗೆ ರೆಕ್ಕೆಗಳನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಭಾರತ ಇತರ ಜಿ-20 ದೇಶಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಬೆಳವಣಿಗೆಯನ್ನು ವೇಗಗೊಳಿಸಿದೆ. ನಾವು ಅನಗತ್ಯ ಕಾನೂನುಗಳನ್ನು ತೊಡೆದುಹಾಕಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
Today agreements of investment of more than Rs 80,000 Cr have been done here. This record investment will create thousands of employment opportunities. I congratulate the youth of UP for it as they will be most benefitted from it: PM Modi at UP Investors Summit in Lucknow pic.twitter.com/8PoyKP6HoF
— ANI UP/Uttarakhand (@ANINewsUP) June 3, 2022
ಈ 80,000 ಕೋಟಿ ರೂ. ಮೌಲ್ಯದ ಯೋಜನೆಗಳು ಕೃಷಿ ಮತ್ತು ಸಂಬಂಧಿತ, ಐಟಿ ಮತ್ತು ಎಲೆಕ್ಟ್ರಾನಿಕ್ಸ್, ಎಂಎಸ್‌ಎಂಇ, ಉತ್ಪಾದನೆ, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣೆ ಮತ್ತು ಏರೋಸ್ಪೇಸ್ ಮತ್ತು ಕೈಮಗ್ಗ ಮತ್ತು ಜವಳಿ ಮುಂತಾದ ವೈವಿಧ್ಯಮಯ ವಲಯಗಳನ್ನು ಒಳಗೊಂಡಿದೆ ಎಂದು ಹೇಳಿಕೆ ತಿಳಿಸಿದೆ.
UP | Earlier, India’s stance on world affairs was not taken seriously. But today, India has reached a level where the world listens to us carefully: Defence Minister Rajnath Singh at the Ground Breaking Ceremony @ 3.0 of UP Investors Summit at Indira Gandhi Pratishthan in Lucknow pic.twitter.com/OhHMycHdXI
— ANI UP/Uttarakhand (@ANINewsUP) June 3, 2022
ಇಂದು ಕೃಷಿ, ಐಟಿ ಮತ್ತು ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 80,000 ಕೋಟಿ ರೂ.ಗಳ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಉಪಸ್ಥಿತರಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:52 pm, Fri, 3 June 22