ಚಿಕ್ಕ ಗಾಯವೂ ಆಗದಂತೆ ಜೋಪಾನ ಮಾಡಿದ ತಾಯಿಗೆ ಬೆಂಕಿ ಹಚ್ಚಿ ಕ್ರೂರತೆ ಮೆರೆದ ಮಗ

ಮಗನೊಬ್ಬ ಪೊಲೀಸ್​ ಠಾಣೆ ಎದುರು ತಾಯಿಗೆ ಬೆಂಕಿ ಹಚ್ಚಿರುವ ಘಟನೆ ಅಲಿಗಢದಲ್ಲಿ ನಡೆದಿದೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ. ಮಗು ಚಿಕ್ಕದಿದ್ದಾಗ ಬೆಂಕಿ ಬಳಿ ಹೋಗದಂತ, ನೀರಿನ ಬಳಿ ಹೋಗದಂತೆ, ಬೀಳದಂತೆ ಪ್ರತಿ ಹಂತದಲ್ಲೂ ಜೋಪಾನ ಮಾಡುವ ತಾಯಿಯನ್ನು ಈ ವ್ಯಕ್ತಿ ಹತ್ಯೆಯನ್ನೇ ಮಾಡಿದ್ದಾನೆ.

ಚಿಕ್ಕ ಗಾಯವೂ ಆಗದಂತೆ ಜೋಪಾನ ಮಾಡಿದ ತಾಯಿಗೆ ಬೆಂಕಿ ಹಚ್ಚಿ ಕ್ರೂರತೆ ಮೆರೆದ ಮಗ
ತಾಯಿಯ ಹತ್ಯೆImage Credit source: NDTV
Follow us
ನಯನಾ ರಾಜೀವ್
|

Updated on: Jul 17, 2024 | 11:50 AM

ಒಂಬತ್ತು ತಿಂಗಳುಗಳ ಕಾಲ ಹೊತ್ತು, ಹೆತ್ತು ಸಾಕಿರುವ ತಾಯಿಯನ್ನೇ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ಅಲಿಗಢದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪೊಲೀಸ್​ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ.

ಮಗು ಚಿಕ್ಕದಿದ್ದಾಗ ಬೆಂಕಿ ಬಳಿ ಹೋಗದಂತ, ನೀರಿನ ಬಳಿ ಹೋಗದಂತೆ, ಬೀಳದಂತೆ ಪ್ರತಿ ಹಂತದಲ್ಲೂ ಜೋಪಾನ ಮಾಡುವ ತಾಯಿಯನ್ನು ಈ ವ್ಯಕ್ತಿ ಹತ್ಯೆಯನ್ನೇ ಮಾಡಿದ್ದಾನೆ. ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಆಕೆಯ ಸ್ಥಿತಿ ಗಂಭೀರವಾದುದನ್ನು ನೋಡಿದ ವೈದ್ಯರು ಆಕೆಯನ್ನು ಅಲಿಗಢಕ್ಕೆ ಕಳುಹಿಸಿದ್ದರು, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

ಅವರಿಗೆ ಶೇ.80ರಷ್ಟು ಭಾಗ ಸುಟ್ಟು ಹೋಗಿತ್ತು. ಪೊಲೀಸರು ಮಗನನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಹತ್ಯೆ ಮಾಡಿದ್ದಾನೆ.

ಮತ್ತಷ್ಟು ಓದಿ: ಸೂಟ್‌ಕೇಸ್‌ನಲ್ಲಿ 2 ಶವ ಪತ್ತೆ; ಕೊನೆಗೂ ಬಯಲಾಯ್ತು ಡಬಲ್ ಮರ್ಡರ್ ರಹಸ್ಯ

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಿಳೆ ತನ್ನ ಮಗನೊಂದಿಗೆ ಪೊಲೀಸ್​ ಠಾಣೆಗೆ ಆಗಮಿಸಿದ್ದು ಪೊಲೀಸರ ಜತೆ ಮಾತುಕತೆ ನಡೆಸಿದ್ದನ್ನು ಕಾಣಬಹುದು. ಮಹಿಳೆಯೇ ಮೊದಲು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು, ಪೊಲೀಸರು ಲೈಟರ್​ ಕಿತ್ತುಕೊಳ್ಳಲು ಹೋದಾಗ ಅದು ಕೆಳಗೆ ಬಿದ್ದಿತ್ತು, ಆಗ ಅದನ್ನು ತೆಗೆದುಕೊಂಡ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ.

ಮಹಿಳೆಯ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು, ಇದನ್ನು ಬಗೆಹರಿಸಿಕೊಡಿ ಎಂದು ಕೇಳಲು ಪೊಲೀಸ್​ ಠಾಣೆಗೆ ಹೋಗಿದ್ದರು, ತಾವು ಹೋದ ಕೆಲಸ ಆಗದಿದ್ದಾಗ ಮಹಿಳೆ ಪೆಟ್ರೋಲ್​ ಸುರಿದುಕೊಂಡು ಹೆದರಿಸಲು ಶುರು ಮಾಡಿದ್ದರು ಇದೇ ಸಮಯದಲ್ಲ ಅವರ ಮಗ ಬೆಂಕಿ ಹಚ್ಚಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ ಮಗನನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ