AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು

ಉತ್ತರ ಪ್ರದೇಶದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಮೂರು ಜಿಲ್ಲೆಗಳಲ್ಲಿ ಗೋಡೆ ಕುಸಿದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಪ್ರತಾಪಗಢ, ಬಾರಾಬಂಕಿ, ಮತ್ತು ಸಹರಾನ್‌ಪುರದಲ್ಲಿ ಈ ದುರಂತಗಳು ಸಂಭವಿಸಿವೆ. ಮೃತಪಟ್ಟವರಲ್ಲಿ ನಾಲ್ವರು ಮಕ್ಕಳೂ ಸೇರಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ತೀವ್ರಗೊಳಿಸಲು ಮತ್ತು ಮೃತರ ಕುಟುಂಬಗಳಿಗೆ ತುರ್ತು ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು
ಮಳೆ
ನಯನಾ ರಾಜೀವ್
|

Updated on: Aug 07, 2026 | 7:19 AM

Share

ಲಕ್ನೋ, ಆಗಸ್ಟ್ 06: ಉತ್ತರ ಪ್ರದೇಶದಾದ್ಯಂತ ಸುರಿಯುತ್ತಿರುವ ಭಾರಿ ಮಳೆ(Rain)ಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಪ್ರತಾಪ್‌ಗಢ, ಬಾರಾಬಂಕಿ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಈ ಕರುಣಾಜನಕ ದುರಂತಗಳು ಸಂಭವಿಸಿವೆ. ಪ್ರತಾಪ್‌ಗಢ ಜಿಲ್ಲಾ ಕೇಂದ್ರದ ಬಳಿಯ ಮಹುಲಿ ಬಜಾರ್‌ನಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಶತಮಾನದಷ್ಟು ಹಳೆಯದಾದ ಜರ್ಜರಿತ ಮನೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಪ್ರಮೋದ್ ಶ್ರೀವಾಸ್ತವ (60), ಅವರ ಪತ್ನಿ ರೀಟಾ (55), ಮಗ ನಿತಿನ್ (25), ಸೊಸೆ ಮಾಧುರಿ (24) ಹಾಗೂ ಇಬ್ಬರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ. ಮನೆಯ ಹಿರಿಯ ಮಗ ಅಮನ್ (28) ಅವಶೇಷಗಳ ಅಡಿಯಿಂದ ತೆವಳುತ್ತ ಹೊರಬಂದು ನೆರೆಹೊರೆಯವರಿಗೆ ಮಾಹಿತಿ ನೀಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ತಕ್ಷಣ ಆರಂಭವಾಯಿತು. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ 6 ಮಂದಿ ಮೃತಪಟ್ಟಿದ್ದರು.

ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದ ಇಟ್ಟಿಗೆ ಗೋಡೆ: ಬಾರಾಬಂಕಿ ಜಿಲ್ಲೆಯ ಅಲಿಯಾಬಾದ್‌ನಲ್ಲಿ ರಸ್ತೆಬದಿ ಆಟವಾಡುತ್ತಿದ್ದ ಐದು ಮಕ್ಕಳ ಮೇಲೆ ಹಳೆಯ ಇಟ್ಟಿಗೆ ಗೋಡೆಯೊಂದು ಕುಸಿದು ಬಿದ್ದಿದೆ. ಘಟನೆಯಲ್ಲಿ 7 ವರ್ಷದ ಬಾಲಕ ಹಾಗೂ ಆತನ ೧೪ ವರ್ಷದ ಸಹೋದರಿ ಇಬ್ಬರೂ ಮೃತಪಟ್ಟಿದ್ದು, ಇತರ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ:

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ವರ: ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ

ಸಹರಾನ್‌ಪುರದ ಘಾಘ್ರೇಕಿ ಗ್ರಾಮದಲ್ಲಿ ಭಾರಿ ಮಳೆಗೆ ಮಣ್ಣಿನ ಮನೆ ಕುಸಿದುಬಿದ್ದು, 34 ವರ್ಷದ ಮಹಿಳೆಯೊಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿ ಅಸಹಾಯಕರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಕ್ಷಣವೇ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ಪರಿಶೀಲಿಸುವಂತೆ ಮತ್ತು ಮೃತರ ಕುಟುಂಬಗಳಿಗೆ ಕಂದಾಯ ಇಲಾಖೆಯ ವತಿಯಿಂದ ತಕ್ಷಣವೇ ತುರ್ತು ಪರಿಹಾರ ಧನ ಬಿಡುಗಡೆ ಮಾಡಲು ಸೂಚನೆ ನೀಡಿದೆ.

ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಳೆಯ ಹಾಗೂ ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸ್ಥಳೀಯ ನಗರಸಭೆ ಮತ್ತು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ