ಮಗಳ ಅಪಹರಣ ದೂರನ್ನು ಹಿಂಪಡೆಯುವಂತೆ ಮಹಿಳೆಗೆ ಕಪಾಳಮೋಕ್ಷ, ಪೊಲೀಸ್ ಅಧಿಕಾರಿಗಳ ಅಮಾನತು
ಮಗಳ ಅಪಹರಣ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಮಗಳ ಅಪಹರಣವಾಗಿದೆ ಎಂದು ತಾಯಿಯೊಬ್ಬರು ದೂರು ದಾಖಲಿಸಿದ್ದರು, ಈ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ಮಾಡಿ ಹಲ್ಲೆ ನಡೆಸಿದ್ದರು. ಈ ಕುರಿತು ಖಾಸಗಿ ಶಾಲಾ ವಿದ್ಯಾರ್ಥಿಗಳು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
ಮಗಳ ಅಪಹರಣ(Kidnap) ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಮಗಳ ಅಪಹರಣವಾಗಿದೆ ಎಂದು ತಾಯಿಯೊಬ್ಬರು ದೂರು ದಾಖಲಿಸಿದ್ದರು, ಈ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ಮಾಡಿ ಹಲ್ಲೆ ನಡೆಸಿದ್ದರು. ಈ ಕುರಿತು ಖಾಸಗಿ ಶಾಲಾ ವಿದ್ಯಾರ್ಥಿಗಳು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
ಘಟನೆಯನ್ನು ಗಮನಿಸಿ, ಜಿಲ್ಲಾಡಳಿತವು ಸರ್ಕಲ್ ಅಧಿಕಾರಿ,ಮಿಲಕ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ವಜಾಗೊಳಿಸಿದ್ದಾರೆ. ಪೊಲೀಸ್ ಠಾಣೆ ಬಳಿ ನಡೆದ ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. 12 ವರ್ಷದ ಬಾಲಕಿಯ ತಾಯಿ ಮಂಗಳವಾರ ಔಟ್‌ಪೋಸ್ಟ್ ಇನ್‌ಚಾರ್ಜ್ ಅಶೋಕ್ ಕುಮಾರ್ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ತನ್ನ ಮನೆಗೆ ತಲುಪಿ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ನ ಬಟ್ಟೆ ಹರಿದಿದ್ದಾರೆ, ಎರಡು ಮೂರು ಬಾರಿ ಕಪಾಳಕ್ಕೆ ಹೊಡೆದಿದ್ದಾರೆ, ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ತಮ್ಮ ಕುಟುಂಬದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳೆ ಹೇಳಿದ್ದಾರೆ. ಆರೋಪಿಗಳು ತನ್ನ ಮಗಳನ್ನು ಬೈಕ್ನಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ, ಇಬ್ಬರು ಹದಿಹರೆಯದವರ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಸಾರ್ ಸಿಂಗ್ ಹೇಳಿದ್ದಾರೆ.
ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್ಕಾಲ್ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ
ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಾವು ಎಸ್‌ಎಚ್‌ಒ, ಸರ್ಕಲ್ ಅಧಿಕಾರಿ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ತೆಗೆದುಹಾಕಿದ್ದೇವೆ ಆದರೆ ಪ್ರಭಾರಿ ಪೊಲೀಸ್ ಔಟ್‌ಪೋಸ್ಟ್ ಅಶೋಕ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.
ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಈ ಬಗ್ಗೆ ತನಿಖೆ ನಡೆಸುತ್ತಾರೆ ಮತ್ತು ಮಹಿಳೆಯನ್ನು ಅಮಾನುಷವಾಗಿ ನಡೆಸಿರುವುದು ಕಂಡುಬಂದರೆ, ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Thu, 21 September 23