ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 50 ಕೋಟಿ ರೂಪಾಯಿ ಬೆಲೆ ಬಾಳುವ ಗಂಧದ ತುಂಡುಗಳನ್ನು ಉತ್ತರ ಪ್ರದೇಶದ ಅಮ್ರೋಹದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ಸಹಯೋಗದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿರುವ ಉತ್ತರ ಪ್ರದೇಶದ ಅಮ್ರೋಹಿ ಪೊಲೀಸರು, ಗೊದಾಮಿನಲ್ಲಿ ಸಂಗ್ರಹಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೆಂಪು ಚಂದನವನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಮ್ರೋಹಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಂಡಾ, ಅಕ್ರಮವಾಗಿ ಶ್ರೀಗಂಧ ಸಂಗ್ರಹಣೆ ಮತ್ತು ಸಾಗಣೆ ಸಂಬಂಧ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
Amroha: Huge quantity of sandalwood worth approximately Rs 50 crores seized yesterday during raid at a godown by UP Police in a joint operation with Delhi Police Crime Branch.
Vipin Tanda, SP Amroha, says “Several accused arrested. Investigation is underway.” (09.08.2020) pic.twitter.com/wlGADMiFNg
— ANI UP (@ANINewsUP) August 10, 2020