ಮಹಾಕುಂಭದಲ್ಲಿ ಸ್ನಾನ ಮಾಡುವ ಮಹಿಳೆಯರ ವಿಡಿಯೋ ಡಾರ್ಕ್​ವೆಬ್​ಗೆ ಅಪ್​ಲೋಡ್​, ಎಚ್ಚರಿಕೆ ಕೊಟ್ಟ ಪೊಲೀಸ್

ಮಹಾಕುಂಭದಲ್ಲಿ ಮಹಿಳೆಯರು ಸ್ನಾನ ಮಾಡುವ ವಿಡಿಯೋವನ್ನು ಚಿತ್ರೀಕರಿಸಿ ಡಾರ್ಕ್​ವೆಬ್​ನಲ್ಲಿ ಅಪ್​ಲೋಡ್ ಮಾಡಲಾಗುತ್ತಿದೆ ಎನ್ನುವ ವಿಚಾರ ಬಹಿರಂಗಗೊಮಡಿದೆ. ಇಂತಹ ವಿಡಿಯೋಗಳನ್ನು ಮಾರಾಟ ಮಾಡುವ ಹಾಗೂ ಖರೀದಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ಕೆಲವು ವೇದಿಕೆಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ.

ಮಹಾಕುಂಭದಲ್ಲಿ ಸ್ನಾನ ಮಾಡುವ ಮಹಿಳೆಯರ ವಿಡಿಯೋ ಡಾರ್ಕ್​ವೆಬ್​ಗೆ ಅಪ್​ಲೋಡ್​, ಎಚ್ಚರಿಕೆ ಕೊಟ್ಟ ಪೊಲೀಸ್
ಮಹಾಕುಂಭ ಮೇಳ
Image Credit source: PTI

Updated on: Feb 21, 2025 | 2:11 PM

ಪ್ರಯಾಗ್​ರಾಜ್, ಫೆಬ್ರವರಿ 21: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಭಾಗವಹಿಸುವ ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಾಯಿಸುವ ವಿಡಿಯೋಗಳನ್ನು ಚಿತ್ರೀಕರಿಸಲಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ, ಈ ವೀಡಿಯೊಗಳು ಮಾರಾಟವಾಗುತ್ತಿವೆ. ಈ ವೀಡಿಯೊಗಳನ್ನು ಮಾರಾಟ ಮಾಡುವವರು ಮತ್ತು ಖರೀದಿಸುವವರು ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ಕೆಲವು ವೇದಿಕೆಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ಉತ್ತರ ಪ್ರದೇಶದ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡವು ಕಂಡುಹಿಡಿದಿದೆ. ಇದು ಅವರ ಗೌಪ್ಯತೆ ಮತ್ತು ಘನತೆಯ ಉಲ್ಲಂಘನೆಯಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರು ವಾರಗಳ ಕುಂಭಮೇಳವು ಹಿಂದೂ ಧಾರ್ಮಿಕ ಕ್ಯಾಲೆಂಡರ್‌ನಲ್ಲಿ ಅತಿ ದೊಡ್ಡ ಮೈಲಿಗಲ್ಲು. ಕಳೆದ ತಿಂಗಳು ಪ್ರಾರಂಭವಾದ ಮಹಾಕುಂಭಕ್ಕೆ ಇಲ್ಲಿಯವರೆಗೆ ಸುಮಾರು 50 ಕೋಟಿ ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ಶುದ್ಧವಾಗುತ್ತವೆ ಎಂದು ಹಿಂದೂಗಳು ನಂಬುತ್ತಾರೆ.

ಕೆಲವು ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳು ಮತ್ತು ಗುಂಪುಗಳನ್ನು ರಚಿಸಲಾಗಿದ್ದು, ಅಲ್ಲಿ ಕಾನೂನುಬಾಹಿರ ಕೆಲಸಗಳು ನಡೆಯುತ್ತಿವೆ ಎಂಬ ಮಾಹಿತಿ ನಮಗೆ ಬಂದಿದೆ. ನಾವು ಅವರೆಲ್ಲರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಲ್ಲದೆ, ಈ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರನ್ನು ಗುರುತಿಸಲಾಗುತ್ತಿದೆ. ಇವು ಕ್ರಿಮಿನಲ್ ಅಪರಾಧಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Mahakumbh Mela: ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದು ಪಾಪ ತೊಳೆದುಕೊಳ್ಳಲಿದ್ದಾರೆ 9 ಸಾವಿರ ಕೈದಿಗಳು

ಅಂತಹ ವೀಡಿಯೊಗಳನ್ನು ಮಾರಾಟ ಮಾಡುವ ಮತ್ತು ಖರೀದಿಸುವವರನ್ನು ಬಂಧಿಸಲಾಗುವುದು, ಅಂತಹ ವಿಷಯವನ್ನು ಅಪ್‌ಲೋಡ್ ಮಾಡುವ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು.
ನಾವು ನಿನ್ನೆ ಎಫ್‌ಐಆರ್ ದಾಖಲಿಸಿದ್ದೇವೆ. ಟೆಲಿಗ್ರಾಮ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಪ್ರೊಫೈಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನಾವು ಇನ್ನೂ ಅವರನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ನಾವು ಅವರನ್ನು ಗುರುತಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದೇವೆ. ಇಲ್ಲಿಯವರೆಗೆ, 103 ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ಗುರುತಿಸಲಾಗಿದೆ.
ಒಟ್ಟು 26 ಸಾಮಾಜಿಕ ಮಾಧ್ಯಮ ಖಾತೆಗಳಿವೆ. ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಟ್ವಿಟರ್‌ನಲ್ಲಿ ಈ ಕಾನೂನುಬಾಹಿರ ಕೃತ್ಯದಲ್ಲಿ ಭಾಗಿಯಾಗಿರುವವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ