AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನುಮುಂದೆ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ

ಉತ್ತರ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ. ವಂದೇ ಮಾತರಂ ಕೇವಲ ಹಾಡಲ್ಲ, ಅದು ಭಾರತದ ಏಕತೆ ಮತ್ತು ಸಮಗ್ರತೆಯನ್ನು ಪ್ರತಿನಿಧಿಸುತ್ತದೆ ಎಂದು ಅವರು ಹೇಳಿದರು.ಯಾವುದೇ ಧರ್ಮ ಅಥವಾ ನಂಬಿಕೆ ರಾಷ್ಟ್ರಕ್ಕಿಂತ ದೊಡ್ಡದಲ್ಲ ಎಂದು ಅವರು ಹೇಳಿದರು. ಸಮಾಜವಾದಿ ಪಕ್ಷದ ಮಾಜಿ ಸಂಸದ ಶಫೀಕುರ್ ರೆಹಮಾನ್ ಬಾರ್ಕ್ ಅವರು ವಂದೇ ಮಾತರಂ ಹಾಡನ್ನು ವಿರೋಧಿಸಿ, ಅದು ಅವರ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದು ಗಮನಾರ್ಹ. ಈಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದನ್ನು ಕಡ್ಡಾಯಗೊಳಿಸುವುದಾಗಿ ಘೋಷಿಸಿದ್ದಾರೆ.

ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನುಮುಂದೆ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ
ಪ್ರಾರ್ಥನೆ-ಸಾಂದರ್ಭಿಕ ಚಿತ್ರImage Credit source: Facebook
ನಯನಾ ರಾಜೀವ್
|

Updated on:Nov 10, 2025 | 12:32 PM

Share

ಲಕ್ನೋ, ನವೆಂಬರ್ 10: ಉತ್ತರ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ'(Vande Mataram) ಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ. ವಂದೇ ಮಾತರಂ ಕೇವಲ ಹಾಡಲ್ಲ, ಅದು ಭಾರತದ ಏಕತೆ ಮತ್ತು ಸಮಗ್ರತೆಯನ್ನು ಪ್ರತಿನಿಧಿಸುತ್ತದೆ ಎಂದು ಅವರು ಹೇಳಿದರು.ಯಾವುದೇ ಧರ್ಮ ಅಥವಾ ನಂಬಿಕೆ ರಾಷ್ಟ್ರಕ್ಕಿಂತ ದೊಡ್ಡದಲ್ಲ ಎಂದು ಅವರು ಹೇಳಿದರು. ಸಮಾಜವಾದಿ ಪಕ್ಷದ ಮಾಜಿ ಸಂಸದ ಶಫೀಕುರ್ ರೆಹಮಾನ್ ಬಾರ್ಕ್ ಅವರು ವಂದೇ ಮಾತರಂ ಹಾಡನ್ನು ವಿರೋಧಿಸಿ, ಅದು ಅವರ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದು ಗಮನಾರ್ಹ. ಈಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದನ್ನು ಕಡ್ಡಾಯಗೊಳಿಸುವುದಾಗಿ ಘೋಷಿಸಿದ್ದಾರೆ.

1937 ರಲ್ಲಿ ವಂದೇ ಮಾತರಂನ ಪ್ರಮುಖ ಚರಣಗಳನ್ನು ಕೈಬಿಡಲಾಯಿತು, ಇದು ವಿಭಜನೆಗೆ ಕಾರಣವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಅಂತಹ ವಿಭಜನೆ ಮನಸ್ಥಿತಿ ಇನ್ನೂ ದೇಶಕ್ಕೆ ಸವಾಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಹಾಡಿನ ಕುರಿತು ಈ ಹೇಳಿಕೆ ನೀಡಿದ 1937 ರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಹಾಗೂ ರವೀಂದ್ರನಾಥ ಟ್ಯಾಗೋರ್ ಅವರನ್ನು ಪ್ರಧಾನಿ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಪಕ್ಷದ ವಕ್ತಾರ ಜೈರಾಮ್ ರಮೇಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಕೋಲ್ಕತ್ತಾದಲ್ಲಿ ಅಕ್ಟೋಬರ್ 26 ನವೆಂಬರ್ 1, 1937 ರಂದು ಸಭೆ ಸೇರಿತು. ಹಾಜರಿದ್ದವರಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ರಾಜೇಂದ್ರ ಪ್ರಸಾದ್, ಜೆಬಿ ಕೆ.ಕೆ. ಬಜಾಜ್, ನರೇಂದ್ರ ದೇವ ಮತ್ತು ಇತರರಿದ್ದರು.

ಮತ್ತಷ್ಟು ಓದಿ: ನಾಳೆ ಭಾರತೀಯರ ದೇಶಭಕ್ತಿಯನ್ನು ಬಡಿದೆಬ್ಬಿಸಿದ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ

ಪಿಐಬಿ ಪ್ರಕಾರ, ವಂದೇ ಮಾತರಂ ಅನ್ನು ಬಂಕಿಮ್ ಚಂದ್ರ ಚಟರ್ಜಿ ರಚಿಸಿದ್ದಾರೆ. ಇದು ಮೊದಲು ನವೆಂಬರ್ 7, 1875 ರಂದು ಸಾಹಿತ್ಯ ನಿಯತಕಾಲಿಕೆ ಬಂಗದರ್ಶನ್‌ನಲ್ಲಿ ಪ್ರಕಟವಾಯಿತು. ನಂತರ ಬಂಕಿಮ್ ಚಂದ್ರ ಚಟರ್ಜಿ ಇದನ್ನು 1882 ರಲ್ಲಿ ಪ್ರಕಟವಾದ ತಮ್ಮ ಅಮರ ಕಾದಂಬರಿ ಆನಂದಮಠದಲ್ಲಿ ಸೇರಿಸಿದರು.

ಈ ಸಂಯೋಜನೆಯ ಹಿಂದೆ ಒಂದು ಕುತೂಹಲಕಾರಿ ಕಥೆ ಇದೆ. ವರದಿಗಳ ಪ್ರಕಾರ, ಬ್ರಿಟಿಷ್ ಆಡಳಿತಗಾರರು ಪ್ರತಿ ಸಮಾರಂಭದಲ್ಲಿ ಇಂಗ್ಲೆಂಡ್ ರಾಣಿಗೆ ಗೌರವ ಸಲ್ಲಿಸುವ ‘ಸೇವ್​ ದಿ ಕ್ವೀನ್’ ಎಂಬ ಹಾಡನ್ನು ಹಾಡುವುದನ್ನು ಕಡ್ಡಾಯಗೊಳಿಸಿದ್ದರು. ಇದು ಬಂಕಿಮ್ ಚಂದ್ರ ಸೇರಿದಂತೆ ಅನೇಕ ದೇಶವಾಸಿಗಳನ್ನು ಕೆರಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರು 1874 ರಲ್ಲಿ ವಂದೇ ಮಾತರಂ ಎಂಬ ಹಾಡನ್ನು ರಚಿಸಿದರು. ಈ ಹಾಡಿನ ಕೇಂದ್ರ ವಿಷಯವೆಂದರೆ ಭಾರತದ ಭೂಮಿಯನ್ನು ತಾಯಿ ಎಂದು ಸಂಬೋಧಿಸುವುದು.

ಈ ಹಾಡನ್ನು ನಂತರ ಅವರ 1882 ರ ಕಾದಂಬರಿ ‘ಆನಂದಮಠ’ದಲ್ಲಿ ಸೇರಿಸಲಾಯಿತು. ಐತಿಹಾಸಿಕ ಮತ್ತು ಸಾಮಾಜಿಕ ರಚನೆಗಳಿಂದ ಹೆಣೆಯಲಾದ ಈ ಕಾದಂಬರಿಯು ದೇಶದಲ್ಲಿ ರಾಷ್ಟ್ರೀಯತೆಯ ಚೈತನ್ಯವನ್ನು ಜಾಗೃತಗೊಳಿಸಲು ಗಮನಾರ್ಹವಾಗಿ ಕೊಡುಗೆ ನೀಡಿತು.

1896 ರಲ್ಲಿ ಕೋಲ್ಕತ್ತಾದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮೊದಲ ಬಾರಿಗೆ ಈ ಹಾಡನ್ನು ಹಾಡಲಾಯಿತು. ಅಲ್ಪಾವಧಿಯಲ್ಲಿಯೇ, ದೇಶಭಕ್ತಿಯ ಸಂಕೇತವಾದ ಈ ಹಾಡು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಭಾರತೀಯ ಕ್ರಾಂತಿಕಾರಿಗಳ ನೆಚ್ಚಿನ ಹಾಡು ಮತ್ತು ಮುಖ್ಯ ಘೋಷಣೆಯಾಯಿತು. ದೇಶಾದ್ಯಂತ, ಕ್ರಾಂತಿಕಾರಿ ಮಕ್ಕಳು, ಯುವಕರು, ವಯಸ್ಕರು ಮಾತ್ರವಲ್ಲದೆ, ಭಾರತೀಯ ಮಹಿಳೆಯರು ಸಹ ಸ್ವಾತಂತ್ರ್ಯ ಹೋರಾಟದ ಅದೇ ಘೋಷಣೆಯನ್ನು ಪ್ರತಿಧ್ವನಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Mon, 10 November 25