AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಬಂದ್ರು ಓಡ್ರೋ ಎನ್ನುತ್ತಾ ಹೋಗಿ ನದಿಗೆ ಹಾರಿ ಪ್ರಾಣಬಿಟ್ಟ ಜೂಜುಕೋರ, ಮೂವರು ಪೊಲೀಸರ ಅಮಾನತು

ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

ಪೊಲೀಸರು ಬಂದ್ರು ಓಡ್ರೋ ಎನ್ನುತ್ತಾ ಹೋಗಿ ನದಿಗೆ ಹಾರಿ ಪ್ರಾಣಬಿಟ್ಟ ಜೂಜುಕೋರ, ಮೂವರು ಪೊಲೀಸರ ಅಮಾನತು
ಸಾವುImage Credit source: Shutterstock
ನಯನಾ ರಾಜೀವ್
|

Updated on: Oct 30, 2025 | 2:56 PM

Share

ಶಹಜಹಾನ್ಪುರ, ಅಕ್ಟೋಬರ್ 30: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

ಐವರು ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರೆ, ಜೂಜುಕೋರರಿಗೆ ಸಾಲ ನೀಡಲು ಅಲ್ಲಿಗೆ ಹೋಗಿದ್ದ ತಿವಾರಿ (28) ಎಂದು ಗುರುತಿಸಲಾದ ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ. ಘಟನೆಯ ನಂತರ, ಮೃತರ ಕುಟುಂಬ ಸದಸ್ಯರು ಬುಧವಾರ ತಡರಾತ್ರಿ ಕೆರುಗಂಜ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಾನ್‌ಸ್ಟೆಬಲ್‌ಗಳಾದ ಪಂಕಜ್ ಕುಮಾರ್, ರಾಜೇಶ್ ಕುಮಾರ್ ಮತ್ತು ಅಮನ್ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ.

ಘಟನೆಯ ನಂತರ, ಪ್ರದೇಶದಲ್ಲಿ ಉದ್ವಿಗ್ನತೆ ಹರಡಿತು. ಕೋಪಗೊಂಡ ಕುಟುಂಬ ಸದಸ್ಯರು ಶವವನ್ನು ರಸ್ತೆಯಲ್ಲಿ ಇರಿಸಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ರಸ್ತೆ ತಡೆ ನಡೆಸಿದರು. ಹನುಮಾನ್ ಧಾಮ್ ದಡದಲ್ಲಿರುವ ಬಗ್ಗು ಘಾಟ್‌ನಲ್ಲಿ ಕೆಲವು ಯುವಕರು ಜೂಜಾಡುತ್ತಿದ್ದರು.

ಯಾರೋ ಪೊಲೀಸರಿಗೆ ಮಾಹಿತಿ ನೀಡಿದರು. ಇಬ್ಬರು ಕಾನ್‌ಸ್ಟೆಬಲ್‌ಗಳು ತಕ್ಷಣ ಸ್ಥಳಕ್ಕೆ ಬಂದರು. ಪೊಲೀಸರನ್ನು ನೋಡಿದ ಯುವಕರು ಭಯಭೀತರಾದರು ಮತ್ತು ಐವರೂ ತಮ್ಮ ಜೀವ ಉಳಿಸಿಕೊಳ್ಳಲು ನದಿಗೆ ಹಾರಿದ್ರು.

ನಂತರ ಚೌಕ್ ಪೊಲೀಸ್ ಠಾಣೆಯ ಪೊಲೀಸರು ಮತ್ತು ಡೈವರ್‌ಗಳು ಸ್ಥಳಕ್ಕೆ ಬಂದರು. ಸುಮಾರು ಎರಡು ಗಂಟೆಗಳ ಪ್ರಯತ್ನದ ನಂತರ, ಡೈವರ್‌ಗಳು ತಿವಾರಿಯ ದೇಹವನ್ನು ಹೊರಕ್ಕೆ ತೆಗೆದರು.ಕೆರುಗಂಜ್ ನಿಂದ ಕಚಾರಿ ರಸ್ತೆಗೆ ಹೋಗುವ ರಸ್ತೆಯನ್ನು ತಡೆದು, ಅವರ ಶವವನ್ನು ಅಲ್ಲಿ ಇರಿಸಿದರು. ಪೊಲೀಸರು ಸಂಯವಹಿಸಿದ್ದರೆ, ಹಾಗೂ ಸ್ನೇಹಿತರು ಆತನನ್ನು ನದಿಗೆ ಹಾರದಂತೆ ತಡೆದಿದ್ದರೆ ಇದೆಲ್ಲಾ ನಡೆಯುತ್ತಲೇ ಇರಲಿಲ್ಲ ಎಂದು ಕುಟುಂಬ ಸದಸ್ಯರು ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ