ಪತ್ನಿಯೊಂದಿಗೆ ಜಗಳ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ. ಆತ ಮಕ್ಕಳಿಗೆ ವಿಷಕೊಟ್ಟು ಬಳಿಕ ತಾನೂ ವಿಷ ಸೇವಿಸಿದ್ದಾನೆ.ಕುಟುಂಬದವರ ಪ್ರಕಾರ, ಮೃತ ಬಾಬುರಾಮ್ ಕೆಲವು ಸಮಯದಿಂದ ವೈವಾಹಿಕ ಭಿನ್ನಾಭಿಪ್ರಾಯವನ್ನು ಎದುರಿಸುತ್ತಿದ್ದರು. ಅವರ ಪತ್ನಿ ತನ್ನ ಹೆತ್ತವರ ಮನೆಯಲ್ಲಿ ವಾಸವಾಗಿದ್ದರು ಮತ್ತು ಶುಕ್ರವಾರ ತನ್ನ ಸಹೋದರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಗ್ರಾಮಕ್ಕೆ ಮರಳಿದ್ದರು. ಸ್ವಲ್ಪ ಸಮಯದ ನಂತರ, ದಂಪತಿ ನಡುವೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಪತ್ನಿಯೊಂದಿಗೆ ಜಗಳ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಮೃತ ವ್ಯಕ್ತಿ
Image Credit source: India Today

Updated on: Dec 07, 2025 | 12:48 PM

ಬಿಜ್ನೋರ್, ಡಿಸೆಂಬರ್ 07: ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ. ಆತ ಮಕ್ಕಳಿಗೆ ವಿಷಕೊಟ್ಟು ಬಳಿಕ ತಾನೂ ವಿಷ ಸೇವಿಸಿದ್ದಾನೆ. ಕುಟುಂಬದವರ ಪ್ರಕಾರ, ಮೃತ ಬಾಬುರಾಮ್ ಕೆಲವು ಸಮಯದಿಂದ ವೈವಾಹಿಕ ಭಿನ್ನಾಭಿಪ್ರಾಯವನ್ನು ಎದುರಿಸುತ್ತಿದ್ದರು. ಅವರ ಪತ್ನಿ ತನ್ನ ಹೆತ್ತವರ ಮನೆಯಲ್ಲಿ ವಾಸವಾಗಿದ್ದರು ಮತ್ತು ಶುಕ್ರವಾರ ತನ್ನ ಸಹೋದರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಗ್ರಾಮಕ್ಕೆ ಮರಳಿದ್ದರು. ಸ್ವಲ್ಪ ಸಮಯದ ನಂತರ, ದಂಪತಿ ನಡುವೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಶನಿವಾರ, ಬಾಬುರಾಮ್ ತನ್ನ ಮಕ್ಕಳನ್ನು ಕ್ಷೌರ ಮಾಡಲು ಕರೆದುಕೊಂಡು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ನಂತರ, ಎರಡೂ ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬಾಬುರಾಮ್ ಅವರ ಸ್ಥಿತಿ ಹದಗೆಟ್ಟಿದ್ದರಿಂದ, ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಂಜೆ 4 ಗಂಟೆ ಸುಮಾರಿಗೆ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ. ಮೂವರೂ ವಿಷವ್ನು ಸೇವಿಸಿದ್ದಾರೆ ಎಂದು ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಬುರಾಮ್ ಅವರ ಪತ್ನಿ ಮಕ್ಕಳು ಮತ್ತು ಅವರಿಗೆ ವಿಷ ಸೇವಿಸುವಂತೆ ಒತ್ತಾಯಿಸಿರಬಹುದು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ, ಆದರೆ ಪೊಲೀಸರು ಈ ಹೇಳಿಕೆಯನ್ನು ದೃಢಪಡಿಸಿಲ್ಲ. ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ತಾಯಿ, ಮಗ ಆತ್ಮಹತ್ಯೆ: ಪೊಲೀಸರು ಬಿಚ್ಚಿಟ್ರು ಮೊದಲ ಸೊಸೆ ಸಾವಿನ ರಹಸ್ಯ

ಸಾವಿನ ನಂತರ, ಸಿಒ ಚಂದಪುರ ದೇಶ್ ದೀಪಕ್ ಸ್ಥಳಕ್ಕೆ ತಲುಪಿ ಕುಟುಂಬದೊಂದಿಗೆ ಮಾತನಾಡಿದರು. ಗ್ರಾಮೀಣ ಎಸ್ಪಿ ಡಾ. ಪ್ರಕಾಶ್ ಸಿಂಗ್ ಕೂಡ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಕ್ಕಳ ಶವಗಳನ್ನು ಸಂಬಂಧಿಕರು ಅಂತಿಮ ವಿಧಿವಿಧಾನಗಳಿಗಾಗಿ ತೆಗೆದುಕೊಂಡು ಹೋಗಿದ್ದಾರೆ ಮತ್ತು ಬಾಬುರಾಮ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿರುವಂತೆ ಕಾಣುತ್ತಿದೆ ಎಂದು ಗ್ರಾಮೀಣ ಎಸ್ಪಿ ಡಾ. ಪ್ರಕಾಶ್ ಸಿಂಗ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ತನಿಖೆಯ ಭಾಗವಾಗಿ ಪೊಲೀಸರು ಬಾಬುರಾಮ್ ಅವರ ಪತ್ನಿಯನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ