ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ […]

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ
ಸಾಧು ಶ್ರೀನಾಥ್​ Edited By:

Updated on: May 25, 2020 | 6:37 AM

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,31,868
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,867
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 54,441

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 54,94,458
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,46,434
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 22,99,345

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us