ಎನ್​ಡಿಎ, ನೌಕಾದಳ ಅಕಾಡೆಮಿ ಪರೀಕ್ಷೆಗೆ ಅವಿವಾಹಿತ ಮಹಿಳೆಯರಿಗೆ ಅವಕಾಶ; ಯುಪಿಎಸ್​ಸಿಯಿಂದ ಅರ್ಜಿ ಆಹ್ವಾನ

ಮಹಿಳಾ ಅಭ್ಯರ್ಥಿಗಳ ದೈಹಿಕ ಮಾನದಂಡಗಳು ಮತ್ತು ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಕೇಂದ್ರ ರಕ್ಷಣಾ ಸಚಿವಾಲಯದಿಂದ ಅಧಿಸೂಚನೆ ಬಂದ ಬಳಿಕ ತಿಳಿಸಲಾಗುವುದು ಎಂದು ಯುಪಿಎಸ್​ಸಿ ತಿಳಿಸಿದೆ. ಪರೀಕ್ಷೆ ನವೆಂಬರ್​ 14ರಂದು ನಡೆಯಲಿದೆ.

ಎನ್​ಡಿಎ, ನೌಕಾದಳ ಅಕಾಡೆಮಿ ಪರೀಕ್ಷೆಗೆ ಅವಿವಾಹಿತ ಮಹಿಳೆಯರಿಗೆ ಅವಕಾಶ; ಯುಪಿಎಸ್​ಸಿಯಿಂದ ಅರ್ಜಿ ಆಹ್ವಾನ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Sep 24, 2021 | 6:06 PM

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (National Defence Academy-NDA) ಮತ್ತು ನೌಕಾದಳ ಅಕಾಡೆಮಿ ಪರೀಕ್ಷೆಗೆ ಅವಿವಾಹಿತ ಯುವತಿಯರೂ ಅರ್ಜಿ ಸಲ್ಲಿಸಲು ಕೇಂದ್ರ ಸೇವಾ ಆಯೋಗ (UPSC) ಅವಕಾಶ ನೀಡಿದೆ. ಈ ಬಗ್ಗೆ  ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.  ಎನ್​ಡಿಎ ಮತ್ತು ನೌಕಾದಳ ಅಕಾಡೆಮಿಗಳಲ್ಲಿ ಮಹಿಳೆಯರಿಗೂ ಪ್ರವೇಶ ನೀಡಬೇಕು ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿತ್ತು. ಅದರಂತೆ ಮಹಿಳೆಯರಿಗೆ ನ್ಯಾಷನಲ್​ ಡಿಫೆನ್ಸ್​ ಅಕಾಡೆಮಿ ಪ್ರವೇಶ ಮತ್ತು ಸೇನೆಯಲ್ಲಿ ಶಾಶ್ವತ ಆಯೋಗಕ್ಕೆ ಅವಕಾಶ ನೀಡಲು ಸೇನೆಯ ಮೂರು ವಿಭಾಗಗಳು ಒಪ್ಪಿಗೆ ನೀಡಿದ್ದಾಗಿ ಕೇಂದ್ರ ಸರ್ಕಾರವೂ ಸುಪ್ರೀಂಕೋರ್ಟ್​ಗೆ ತಿಳಿಸಿತ್ತು.   

ಇದೀಗ ಸುಪ್ರೀಂಕೋರ್ಟ್​​ನ ಮಧ್ಯಂತರ ಆದೇಶಕ್ಕೆ ಅನುಸಾರವಾಗಿ ಯುಪಿಎಸ್​ಸಿ (UPSC) ತನ್ನ upsconline.nic.in ವೆಬ್​​ಸೈಟ್​ನಲ್ಲಿ ಅವಿವಾಹಿತ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ನಿರ್ಧರಿಸಿದೆ. ಅಲ್ಲಿ ಅವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ( unmarried women candidates only) ಎಂಬ ಆಯ್ಕೆ ನೀಡಲಿದ್ದು, ರಾಷ್ಟ್ರೀಯತೆ, ವಯಸ್ಸು, ಶಿಕ್ಷಣದಲ್ಲಿ ಅರ್ಹರಾಗಿರುವ, ಆಸಕ್ತ ಯುವತಿಯರು ಅರ್ಜಿ ಸಲ್ಲಿಸಬಹುದು ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಮಹಿಳಾ ಅಭ್ಯರ್ಥಿಗಳ ದೈಹಿಕ ಮಾನದಂಡಗಳು ಮತ್ತು ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಕೇಂದ್ರ ರಕ್ಷಣಾ ಸಚಿವಾಲಯದಿಂದ ಅಧಿಸೂಚನೆ ಬಂದ ಬಳಿಕ ತಿಳಿಸಲಾಗುವುದು. ಇಂದಿನಿಂದ (ಸೆಪ್ಟೆಂಬರ್ 24) ಅಕ್ಟೋಬರ್​ 8ರ ಸಂಜೆ 6ಗಂಟೆವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅಕ್ಟೋಬರ್​ 8ರ ಸಂಜೆ ಆರುಗಂಟೆ ನಂತರ ಬಂದ ಯಾವುದೇ ಅರ್ಜಿಯನ್ನೂ ಸ್ವೀಕರಿಸುವುದಿಲ್ಲ. ಅರ್ಜಿ ಸಲ್ಲಿಸುವಾಗ ಯಾವುದೇ ಶುಲ್ಕ ನೀಡುವ ಅಗತ್ಯವಿಲ್ಲ. ನವೆಂಬರ್​ 14ರಂದು ಪರೀಕ್ಷೆ ನಡೆಯಲಿದೆ ಎಂದು ಎಂದು ಯುಪಿಎಸ್​ಸಿ ತಿಳಿಸಿದೆ.

ಮಹಿಳೆಯರನ್ನು ಸೇನೆಯಲ್ಲಿ ಶಾರ್ಟ್​ ಸರ್ವೀಸ್​ ಕಮಿಷನ್​ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈ ಲಿಂಗತಾರತಮ್ಯವನ್ನು ಹೋಗಲಾಡಿಸಬೇಕು. ಮಹಿಳೆಯರನ್ನೂ ಶಾಶ್ವತ ಆಯೋಗದಡಿಯೇ ನೇಮಕ ಮಾಡಬೇಕು ಎಂದು 2020ರಲ್ಲೇ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅದರ ವಿಚಾರಣೆ ನಡೆಯುತ್ತಿತ್ತು..ಆಗಸ್ಟ್​ 18ರಂದು ಮತ್ತೆ ಈ ವಿಚಾರ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಪುನರುಚ್ಚರಿಸಿತ್ತು.

ಇದನ್ನೂ ಓದಿ: IPL 2021: ಟಿ. ನಟರಾಜನ್​ಗೆ ಕೊರೊನಾ ಸೋಂಕು; ಬದಲಿಯಾಗಿ ತಂಡ ಸೇರಿದ ಜಮ್ಮು ಮತ್ತು ಕಾಶ್ಮೀರದ ಯುವ ವೇಗಿ

KL Rahul and Athiya Shetty: ಮುಂದುವರೆದಿದೆ ರಾಹುಲ್- ಆಥಿಯಾ ತುಂಟಾಟ; ಈ ಬಾರಿ ಏನು ಸಮಾಚಾರ?

(UPSC allows unmarried women to apply for national defence academy exams)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್