AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ವರ್ಷಗಳ ಅಧಿಕಾರಾವಧಿ ಬಾಕಿ ಇರುವಾಗಲೇ, ಯುಪಿಎಸ್​ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

UPSC Chairperson Manoj Soni Resigns: ಪೂಜಾ ಖೇಡ್ಕರ್​ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು, ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಐದು ವರ್ಷಗಳ ಅಧಿಕಾರಾವಧಿ ಬಾಕಿ ಇರುವಾಗಲೇ, ಯುಪಿಎಸ್​ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ
ಮನೋಜ್ ಸೋನಿ
ನಯನಾ ರಾಜೀವ್
| Edited By: |

Updated on:Jul 20, 2024 | 11:10 AM

Share

ಪೂಜಾ ಖೇಡ್ಕರ್​ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು, ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಮನೋಜ್ ಸೋನಿ ರಾಜೀನಾಮೆಗೂ ಪೂಜಾ ಖೇಡ್ಕರ್ ವಿವಾದಕ್ಕೂ ಸಂಬಂಧವಿಲ್ಲ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಪೂಜಾ ಖೇಡ್ಕರ್ ಅವರ ಘಟನೆ ನಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಮತ್ತು ಹೊರಗೆ ತುಂಬಾ ಜನ ಕೇಂದ್ರ ಲೋಕಸೇವಾ ಆಯೋಗದ ಯೂ ಪಿ ಎಸ್​ ಸಿ)  ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ ಎತ್ತಿದ್ದರು. ಹಣ ಮತ್ತು ರಾಜಕೀಯ ಪ್ರಭಾವ ಇದ್ದರೆ ಯೂ ಪಿ ಎಸ್​ ಸಿ ಯಲ್ಲಿ ಒಳ್ಳೇ  ರಾಂಕಿಂಗ್ ಸಿಗುತ್ತೆ ಎಂಬ ​ಮಾತು ದೊಡ್ಡದಾಗಿ ಕೇಳಿ ಬಂದಿರುವ ಸಮಯದಲ್ಲಿಯೇ  ಸೋನಿಯವರು ರಾಜೀನಾಮೆ ನೀಡಿರುವುದು ಕಾಕತಾಳೀಯವೇನು ಅಲ್ಲ. ಯಾಕೆಂದರೆ, ಸೋಮವಾರದಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ. ವಿರೋಧ ಪಕ್ಷಗಳು ಯೂ ಪಿ ಎಸ್​ ಸಿ ವಿಚಾರ ಎತ್ತಿಕೊಂಡು ಮತ್ತೆ ಸರಕಾರದ ಮುಜುಗರ ಉಂಟುಮಾಡುವ ಸಾಧ್ಯತೆ ಇದೆ. ಅದನ್ನು ತಪ್ಪಿಸಿಕೊಳ್ಳಲು ಈ ರೀತಿ ಕ್ರಮಕ್ಕೆ ಸರಕಾರವೇ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಪ್ರಕಾರ ಮನೋಜ್ ಸೋನಿ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸೋನಿ 2017ರಲ್ಲಿ ಆಯೋಗದ ಸದಸ್ಯರಾಗಿ ಸೇರಿದ್ದರು. ಮೇ 16, 2023ರಂದು ಅವರನ್ನು ಯುಪಿಎಸ್​ಸಿ ಅಧ್ಯಕ್ಷರನ್ನಾಗಿ ಮಾಡಲಾಯಿತು. ಅವರು ಒಂದು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು ಆದರೆ, ಅವರು ರಿಲೀವ್ ಆಗುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ನೂತನ ಅಧ್ಯಕ್ಷರ ಹೆಸರನ್ನು ಸರ್ಕಾರ ಪ್ರಕಟಿಸಿಲ್ಲ.

ಯುಪಿಎಸ್​ಸಿ ಸೇರುವ ಮೊದಲು ಅವರು ಎರಡು ವಿಶ್ವವಿದ್ಯಾಲಯಗಳ ಕುಲಪತಿಯೂ ಆಗಿದ್ದರು.

ಯುಪಿಎಸ್​ಸಿ ಕೆಲಸವೇನು? ಕೇಂದ್ರ ಸರ್ಕಾರದ ಪರವಾಗಿ ನಾಗರಿಕ ಸೇವಾ ಪರೀಕ್ಷೆಗಳು ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸುವಲ್ಲಿ ಕೇಂದ್ರ ಲೋಕಸೇವಾ ಆಯೋಗವು ಪ್ರಮುಖ ಪಾತ್ರವಹಿಸುತ್ತದೆ. ಈ ಸಂಸ್ಥೆಯು ಸಾಮಾನ್ಯವಾಗಿ ಐಎಎಸ್​, ಐಎಫ್​ಎಸ್​, ಐಪಿಎಸ್ ಮತ್ತು ಕೇಂದ್ರ ಸೇವೆಗಳಲ್ಲಿ ಪ್ರತಿಷ್ಠಿತ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶಿಫಾರಸು ಮಾಡುತ್ತದೆ.

ಪೂಜಾ ಖೇಡ್ಕರ್ ಪ್ರಕರಣದ ನಂತರ ಯುಪಿಎಸ್​ಸಿ ಚರ್ಚೆಯಲ್ಲಿದೆ ಯುಪಿಎಸ್​ಸಿ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ವಿರುದ್ಧದ ಆರೋಪದ ನಂತರ ಯುಪಿಎಸ್​ಸಿ ಸುದ್ದಿಯಲ್ಲಿದೆ. ಅವರು ನಾಗರಿಕ ಸೇವೆಗಳ ಪ್ರವೇಶ ಪಡೆಯಲು ತಮ್ಮ ದಾಖಲೆಗಳನ್ನು ನಕಲು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಮನೋಜ್ ಸೋನಿ ಹಾಗೂ ಈ ಪ್ರಕರಣಕ್ಕೆ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಸಧ್ಯಕ್ಕೆ ಪೂಜಾ ತರಬೇತಿಯನ್ನು ತಡೆಹಿಡಿಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:38 am, Sat, 20 July 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ