AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Recruitment 2026: 80 ಅಸಿಸ್ಟೆಂಟ್ ಫಂಡ್ ಕಮಿಷನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ!

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) 80 ಸಹಾಯಕ ಪ್ರಾವಿಡೆಂಟ್ ಫಂಡ್ ಕಮಿಷನರ್ (APFC) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 11 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪದವಿ ವಿದ್ಯಾರ್ಹತೆ ಮತ್ತು ನಿಗದಿತ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ.

UPSC Recruitment 2026: 80 ಅಸಿಸ್ಟೆಂಟ್ ಫಂಡ್ ಕಮಿಷನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ!
UPSC EPFO ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Aug 25, 2026 | 2:42 PM

Share

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುವ ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಖಾಲಿ ಇರುವ 80 ಅಸಿಸ್ಟೆಂಟ್ ಪ್ರಾವಿಡೆಂಟ್ ಫಂಡ್ ಕಮಿಷನರ್ (APFC) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್‌ಗಳಾದ upsc.gov.in ಹಾಗೂ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 11 ಕೊನೆಯ ದಿನಾಂಕವಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿಗೆ ಸಂಬಂಧಿಸಿದಂತೆ, ಸಾಮಾನ್ಯ (UR) ಮತ್ತು EWS ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಇತರ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (SC/ST) ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ವಯೋಸಡಿಲಿಕೆ ಇರುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ಪೆನ್ ಮತ್ತು ಪೇಪರ್ ಆಧಾರಿತ ನೇಮಕಾತಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುತ್ತದೆ. ಈ ಪರೀಕ್ಷೆಯು ಒಟ್ಟು 2 ಗಂಟೆಗಳ ಅವಧಿಯದ್ದಾಗಿದ್ದು, ಬಹುಆಯ್ಕೆ ಮಾದರಿಯ (MCQ) ಆಬ್ಜೆಕ್ಟಿವ್ ಪ್ರಶ್ನೆಗಳನ್ನು ಹೊಂದಿರುತ್ತದೆ. ಪರೀಕ್ಷೆಯ ಪ್ರಶ್ನೆಪತ್ರಿಕೆಯು ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಲಭ್ಯವಿರುತ್ತದೆ. ಈ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು (Negative Marking), ಪ್ರತಿ ತಪ್ಪು ಉತ್ತರಕ್ಕೆ ಆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳಲ್ಲಿ ಮೂರನೇ ಒಂದು ಭಾಗವನ್ನು (1/3rd) ಕಳೆಯಲಾಗುತ್ತದೆ. ಉತ್ತರಿಸದೆ ಬಿಟ್ಟ ಪ್ರಶ್ನೆಗಳಿಗೆ ಯಾವುದೇ ಅಂಕ ಕಡಿತಗೊಳಿಸುವುದಿಲ್ಲ.

ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ:

ಅರ್ಜಿ ಸಲ್ಲಿಸುವ ಸಾಮಾನ್ಯ, OBC ಮತ್ತು EWS ವರ್ಗದ ಪುರುಷ ಅಭ್ಯರ್ಥಿಗಳು 25 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು ವೀಸಾ, ಮಾಸ್ಟರ್, ರೂಪೇ ಡೆಬಿಟ್/ಕ್ರೆಡಿಟ್ ಕಾರ್ಡ್, ಯುಪಿಐ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಕೊನೆಯ ದಿನಾಂಕದೊಳಗೆ ಪಾವತಿಸಬಹುದು. ಮಹಿಳೆಯರು, SC, ST ಹಾಗೂ ವಿಕಲಚೇತನ (PwBD) ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಇತರ ವರ್ಗದ ಪುರುಷ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿನಾಯಿತಿ ಲಭ್ಯವಿರುವುದಿಲ್ಲ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ