AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Recruitment 2026: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಂಶೋಧನಾ ಅಧಿಕಾರಿ, ತೋಟಗಾರಿಕೆ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ವಯೋಮಿತಿ, ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕದ ವಿವರಗಳನ್ನು ತಿಳಿದುಕೊಂಡು ಆಗಸ್ಟ್ 28 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪೂರ್ಣ ಮಾಹಿತಿ ಇಲ್ಲಿದೆ.

UPSC Recruitment 2026: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ!
UPSC ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Aug 09, 2026 | 1:13 PM

Share

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುವ ಅಧಿಕೃತ ಅಧಿಸೂಚನೆಯನ್ನು ಕೇಂದ್ರ ಲೋಕಸೇವಾ ಆಯೋಗ (UPSC) ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 28 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖಾವಾರು ಖಾಲಿ ಹುದ್ದೆಗಳ ವಿವರಗಳು:

ಈ ನೇಮಕಾತಿ ಅಭಿಯಾನದ ಮೂಲಕ ವಿಭಿನ್ನ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಸಿವಿಲ್): 01 ಹುದ್ದೆ
  • ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಲೆಕ್ಟ್ರಾನಿಕ್ಸ್): 09 ಹುದ್ದೆಗಳು
  • ಸಹಾಯಕ ನಿರ್ದೇಶಕ (ಎಂಜಿನಿಯರಿಂಗ್): 01 ಹುದ್ದೆ
  • ಸೂಪರಿಂಟೆಂಡೆಂಟ್ ಅನುವಾದ (ಹಿಂದಿ ಶಾಖೆ): 01 ಹುದ್ದೆ
  • ಸಂಶೋಧನಾ ಅಧಿಕಾರಿ: 11 ಹುದ್ದೆಗಳು
  • ತೋಟಗಾರಿಕೆ ಅಭಿವೃದ್ಧಿ ಅಧಿಕಾರಿ: 04 ಹುದ್ದೆಗಳು
  • ಮಣ್ಣು ಸಂರಕ್ಷಣಾ ಸಹಾಯಕ: 07 ಹುದ್ದೆಗಳು

ಶೈಕ್ಷಣಿಕ ಅರ್ಹತೆ ಮತ್ತು ಕೆಲಸದ ಅನುಭವ:

ಹುದ್ದೆಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಗಳು ಬದಲಾಗುತ್ತವೆ. ಸಂಬಂಧಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ, ಬಿ.ಎಸ್ಸಿ., ಎಂ.ಎಸ್ಸಿ., ಎಲ್ಎಲ್ಬಿ., ಎಲ್ಎಲ್ಎಂ. ಇತ್ಯಾದಿ ವಿದ್ಯಾರ್ಹತೆ ಹೊಂದಿರಬೇಕು. ಇದರೊಂದಿಗೆ ಕೆಲವು ಹುದ್ದೆಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ (Work Experience) ಅಗತ್ಯವಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ಅರ್ಹತೆಯ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಒಳ್ಳೆಯದು.

ವಯೋಮಿತಿ ಮತ್ತು ಸಡಿಲಿಕೆ ವಿವರಗಳು:

UPSC ವಿಧಿಸಿರುವ ವಯೋಮಿತಿಯ ಪ್ರಕಾರ, ಸಹಾಯಕ ನಿರ್ದೇಶಕ (ಎಂಜಿನಿಯರಿಂಗ್) ಹುದ್ದೆಗಳಿಗೆ ಗರಿಷ್ಠ 30 ವರ್ಷಗಳು, ತೋಟಗಾರಿಕೆ ಅಭಿವೃದ್ಧಿ ಅಧಿಕಾರಿ ಹಾಗೂ ಮಣ್ಣು ಸಂರಕ್ಷಣಾ ಸಹಾಯಕ ಹುದ್ದೆಗಳಿಗೆ 40 ವರ್ಷಗಳು ಮತ್ತು ಇತರ ಹುದ್ದೆಗಳಿಗೆ 35 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಅರ್ಹ ವರ್ಗಗಳ ಅಭ್ಯರ್ಥಿಗಳಿಗೆ (SC, ST, OBC, PwBD) ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಅರ್ಜಿ ಶುಲ್ಕದ ಮಾಹಿತಿ:

ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ (OBC) ಮತ್ತು ಇಡಬ್ಲ್ಯೂಎಸ್ (EWS) ವರ್ಗಗಳಿಗೆ ಸೇರಿದ ಪುರುಷ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ ರೂ. 25 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ದಿವ್ಯಾಂಗ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷಾ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಮೊದಲಿಗೆ ಪರಿಶೀಲಿಸಿ ಶಾರ್ಟ್‌ಲಿಸ್ಟಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಬಂದಿರುವ ಅರ್ಜಿಗಳ ಸಂಖ್ಯೆಯನ್ನು ಆಧರಿಸಿ ಸ್ಕ್ರೀನಿಂಗ್ ಅಥವಾ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮುಂದಿನ ಹಂತದ ಸಂದರ್ಶನಕ್ಕೆ (Interview) ಕರೆಯಲಾಗುತ್ತದೆ. ಅಂತಿಮವಾಗಿ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಆಯ್ಕೆ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್