AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 450 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ UPSC ಸುವರ್ಣಾವಕಾಶ ನೀಡಿದೆ. 54 ವಿವಿಧ ರೀತಿಯ 450 ಗ್ರೂಪ್ 'ಎ' ಮತ್ತು 'ಬಿ' ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಪ್ರಕಟಿಸಿದೆ. ಡ್ರಗ್ ಇನ್ಸ್‌ಪೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್-III ಸೇರಿದಂತೆ ಹಲವು ಹುದ್ದೆಗಳಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 17 ರೊಳಗೆ UPSC ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವರವಾದ ಮಾಹಿತಿ ಅಧಿಸೂಚನೆಯಲ್ಲಿದೆ.

UPSC Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 450 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರಿ ಉದ್ಯೋಗವಕಾಶ
ಅಕ್ಷತಾ ವರ್ಕಾಡಿ
|

Updated on: Jul 12, 2026 | 4:58 PM

Share

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಪಡೆಯುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗ (UPSC) ಸುವರ್ಣಾವಕಾಶ ನೀಡಿದೆ. ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಡಿಯಲ್ಲಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ 54 ವಿವಿಧ ರೀತಿಯ ಹುದ್ದೆಗಳಲ್ಲಿ ಒಟ್ಟು 450 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 17 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ?

ಈ ನೇಮಕಾತಿಯಲ್ಲಿ ಡ್ರಗ್ ಇನ್ಸ್‌ಪೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್-III, ಕಂಪನಿ ಪ್ರಾಸಿಕ್ಯೂಟರ್, ಕಾನೂನು ಅಧಿಕಾರಿ, ವೈಮಾನಿಕ ಅಧಿಕಾರಿ, ಸಹಾಯಕ ಎಂಜಿನಿಯರ್, ನಾಗರಿಕ ಸಹಾಯಕ ಭದ್ರತಾ ಅಧಿಕಾರಿ, ಅಧಿಕೃತ ಭಾಷಾ ಅಧಿಕಾರಿ, ಜಂಟಿ ನಿರ್ದೇಶಕರು, ವೈಜ್ಞಾನಿಕ ಅಧಿಕಾರಿ, ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 54 ವಿವಿಧ ಹುದ್ದೆಗಳಿಗೆ 450 ಖಾಲಿ ಹುದ್ದೆಗಳು ಪ್ರಕಟಿಸಲಾಗಿದೆ. ಇದರಲ್ಲಿ ಡ್ರಗ್ ಇನ್ಸ್‌ಪೆಕ್ಟರ್ – 186 ಮತ್ತು ಸ್ಪೆಷಲಿಸ್ಟ್ ಗ್ರೇಡ್-III – 104 ಹುದ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ.

ಶೈಕ್ಷಣಿಕ ಅರ್ಹತೆ ಏನು?

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಬಿಇ/ಬಿಟೆಕ್, ಸ್ನಾತಕೋತ್ತರ ಪದವಿ (PG), ಎಂಬಿಬಿಎಸ್, ವೈದ್ಯಕೀಯ ಸ್ನಾತಕೋತ್ತರ ಪದವಿ, ಎಲ್‌ಎಲ್‌ಬಿ ಅಥವಾ ಸಂಬಂಧಿತ ಕಾನೂನು ಪದವಿ ಪಡೆದಿರಬೇಕು. ಕೆಲವು ಹುದ್ದೆಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವವೂ ಕಡ್ಡಾಯವಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಅರ್ಹತಾ ಮಾನದಂಡಗಳನ್ನು ಪರಿಶೀಲಿಸುವುದು ಅಗತ್ಯ.

ವಯೋಮಿತಿ ಎಷ್ಟು?

ಹುದ್ದೆಯ ಸ್ವರೂಪಕ್ಕೆ ಅನುಗುಣವಾಗಿ ಗರಿಷ್ಠ ವಯೋಮಿತಿಯನ್ನು 30 ರಿಂದ 50 ವರ್ಷಗಳವರೆಗೆ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಇತರೆ ಮೀಸಲಾತಿ ವರ್ಗಗಳಿಗೆ ಕೇಂದ್ರ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಆಯಾ ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ, ಅನುಭವ ಹಾಗೂ ಇತರ ಷರತ್ತುಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಅರ್ಜಿ ಶುಲ್ಕದ ವಿವರ:

ಎಸ್‌ಸಿ, ಎಸ್‌ಟಿ, ದಿವ್ಯಾಂಗ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಪುರುಷ ಅಭ್ಯರ್ಥಿಗಳು ₹25 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಅಭ್ಯರ್ಥಿಗಳ ಆಯ್ಕೆಯನ್ನು ಮೊದಲು ಅರ್ಜಿಗಳ ಪರಿಶೀಲನೆ ಮತ್ತು ಶಾರ್ಟ್‌ಲಿಸ್ಟಿಂಗ್ ಮೂಲಕ ನಡೆಸಲಾಗುತ್ತದೆ. ಅಗತ್ಯವಿದ್ದರೆ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದ್ದು, ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಸಾಧನೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಅಭ್ಯರ್ಥಿಗಳಿಗೆ ಮುಖ್ಯ ಸೂಚನೆ:

ಈ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 17, 2026. ಕೊನೆಯ ದಿನಾಂಕದವರೆಗೆ ಕಾಯದೆ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ. ಪ್ರತಿ ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ, ಅನುಭವ, ವಯೋಮಿತಿ ಮತ್ತು ಇತರ ಅರ್ಹತಾ ಮಾನದಂಡಗಳು ವಿಭಿನ್ನವಾಗಿರುವುದರಿಂದ, ಅರ್ಜಿ ಸಲ್ಲಿಸುವ ಮೊದಲು UPSC ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದು ಕಡ್ಡಾಯ. ಸರಿಯಾದ ಮಾಹಿತಿ ಪರಿಶೀಲಿಸಿ ಅರ್ಜಿ ಸಲ್ಲಿಸಿದರೆ ಮಾತ್ರ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ತಪ್ಪಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ