AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ನಾಗ್ಪುರ್: ಹಣಕಾಸು ಬಿಕ್ಕಟ್ಟಿನಿಂದ ಬೇಸತ್ತು ಪತ್ನಿ, ಮಗನೊಂದಿಗೆ ಕಾರಲ್ಲಿ ಕುಳಿತು ಬೆಂಕಿ ಹಚ್ಚಿದ ವ್ಯಕ್ತಿ

ಭಟ್ ಮನೆಯಿಂದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದ್ದು ಆರ್ಥಿಕ ಸಮಸ್ಯೆಯಿಂದಾಗಿ ನಾನು ಬದುಕು ಕೊನೆಗೊಳಿಸುತ್ತಿದ್ದೇನೆ ಎಂದು ಅದರಲ್ಲಿ ಬರೆದಿದೆ

Watch ನಾಗ್ಪುರ್: ಹಣಕಾಸು ಬಿಕ್ಕಟ್ಟಿನಿಂದ ಬೇಸತ್ತು ಪತ್ನಿ, ಮಗನೊಂದಿಗೆ ಕಾರಲ್ಲಿ ಕುಳಿತು ಬೆಂಕಿ ಹಚ್ಚಿದ ವ್ಯಕ್ತಿ
ಹೊತ್ತಿ ಉರಿದ ಕಾರು
TV9 Web
| Edited By: |

Updated on: Jul 20, 2022 | 12:35 PM

Share

ನಾಗ್ಪುರ್(ಮಹಾರಾಷ್ಟ್ರ): ಹಣಕಾಸು ಬಿಕ್ಕಟ್ಟಿನಿಂದ (financial crisis) ನೊಂದ ಮಹಾರಾಷ್ಟ್ರ(Maharashtra) ನಾಗ್ಪುರ್​​ನ (Nagpur)  ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಗನನ್ನು ಕಾರಲ್ಲಿ ಕೂರಿಸಿಕೊಂಡು ಕಾರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ಬೆಲ್ಟಾರೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಖಾಪ್ರಿ ಪುನರ್​​ವಾಸನ್ ಪ್ರದೇಶದಲ್ಲಿ ರಾಮರಾಜ್ ಗೋಪಾಲಕೃಷ್ಣ ಭಟ್(58) ಎಂಬವರು ಪತ್ನಿ ಸಂಗೀತಾ ಭಟ್ (55) ಮತ್ತು ಮಗ ನಂದನ್​​ನ್ನು(30) ಕಾರಲ್ಲಿ ಕೂರಿಸಿ ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ ಪತ್ನಿ ಮತ್ತು ಪುತ್ರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಗೋಪಾಲಕೃಷ್ಣ ಭಟ್ ಸಾವಿಗೀಡಾಗಿದ್ದಾರೆ. ಭಟ್ ಮನೆಯಿಂದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದ್ದು ಆರ್ಥಿಕ ಸಮಸ್ಯೆಯಿಂದಾಗಿ ನಾನು ಬದುಕು ಕೊನೆಗೊಳಿಸುತ್ತಿದ್ದೇನೆ ಎಂದು ಅದರಲ್ಲಿ ಬರೆದಿದೆ.

ರಾಮರಾಜ್ ಭಟ್ ಅವರು ಊಟಕ್ಕಾಗಿ ಹೋಟೆಲ್​​ಗೆ ಹೋಗೋಣ ಎಂದು ತನ್ನ ಕುಟುಂಬವನ್ನು ಕಾರಲ್ಲಿ ಕರೆತಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಕಾರಿಗೆ ಬೆಂಕಿ ಹತ್ತಿಕೊಂಡ ಕೂಡಲೇ ಪತ್ನಿ ಮತ್ತು ಮಗ ಕಾರಿನ ಬಾಗಿಲು ತೆರೆದು ಹೊರ ಬಂದಿದ್ದಾರೆ. ಆದರೆ ಭಟ್ ಕಾರಲ್ಲೇ ಸುಟ್ಟು ಸಾವಿಗೀಡಾಗಿದ್ದಾರೆ. ಭಟ್ ವಿರುದ್ಧ ಬೆಲ್ಟಾರೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?