AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಕೇಂದ್ರ, ಡಿಜಿಸಿಎಗೆ ನೋಟಿಸ್ ನೀಡಿದ ಸುಪ್ರೀಂ

ಏರ್ ಇಂಡಿಯಾ ವಿಮಾನದೊಳಗೆ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ 72 ವರ್ಷದ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಬಗ್ಗೆ ಕೇಂದ್ರ, ಡಿಜಿಸಿಎಗೆ ಸುಪ್ರೀಂ ನೋಟಿಸ್​​​ ಜಾರಿ ಮಾಡಿದೆ.

Air India: ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಕೇಂದ್ರ, ಡಿಜಿಸಿಎಗೆ ನೋಟಿಸ್ ನೀಡಿದ ಸುಪ್ರೀಂ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 08, 2023 | 3:54 PM

Share

ದೆಹಲಿ: ಏರ್ ಇಂಡಿಯಾ (Air India) ವಿಮಾನದೊಳಗೆ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ 72 ವರ್ಷದ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಬಗ್ಗೆ SOP ಮತ್ತು ನಿಯಮಾವಳಿಗಳನ್ನು ಕೋರಿ ಸಲ್ಲಿಸಿದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಮಹಿಳೆಯ ಮನವಿಯನ್ನು ಪರಿಗಣಿಸಿ ಕೇಂದ್ರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಮತ್ತು ಏರ್ ಇಂಡಿಯಾ ಸೇರಿದಂತೆ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ರೂಪಿಸುವಲ್ಲಿ ಪ್ರಕರಣದಲ್ಲಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನು ಸುಪ್ರೀಂ ಕೋರ್ಟ್ ಕೋರಿತು ಮತ್ತು ಜುಲೈನಲ್ಲಿ ಬೇಸಿಗೆ ರಜೆಯ ನಂತರ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಿತು. ಘಟನೆಯ ನಂತರ ಏರ್ ಇಂಡಿಯಾ ಮತ್ತು ಡಿಜಿಸಿಎ ತನ್ನನ್ನು ಕಾಳಜಿ ಮತ್ತು ಜವಾಬ್ದಾರಿಯಿಂದ ನೋಡಿಕೊಳ್ಳಲು ವಿಫಲವಾದ ಕಾರಣ ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಲು ನಿರ್ಬಂಧವಿದೆ ಎಂದು ಮಹಿಳೆ ಮಾರ್ಚ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಜನವರಿ 31ರಂದು, ನ್ಯೂಯಾರ್ಕ್‌ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ನ್ಯಾಯಾಲಯವು ಜಾಮೀನು ನೀಡಿತ್ತು. ವಿಚಾರಣಾ ನ್ಯಾಯಾಲಯವು ₹ 1 ಲಕ್ಷದ ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿಯ ಮೇಲೆ ಮಿಶ್ರಾ ಅವರಿಗೆ ಪರಿಹಾರವನ್ನು ನೀಡಿತು .

ಇದನ್ನೂ ಓದಿ: Air India Alcohol Service Policy: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವಿಮಾನದಲ್ಲಿ ಮದ್ಯಪಾನ ಪೂರೈಕೆ ನಿಯಮ ಬದಲಿಸಿದ ಏರ್​ ಇಂಡಿಯಾ

ಮಿಶ್ರಾ ಅವರು ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶವನ್ನು ತೊರೆಯಬಾರದು ಮತ್ತು ತನಿಖಾಧಿಕಾರಿ ಅಥವಾ ಸಂಬಂಧಪಟ್ಟ ನ್ಯಾಯಾಲಯವು ಕರೆದಾಗ ತನಿಖೆ ಮತ್ತು ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಂಡರು. ಮಿಶ್ರಾ ಅವರನ್ನು ಜನವರಿ 6 ರಂದು ಬೆಂಗಳೂರಿನಲ್ಲಿ ಬಂಧಿಸಲಾಯಿತು ಮತ್ತು ಜನವರಿ 7 ರಂದು ಇಲ್ಲಿನ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಕಳೆದ ವರ್ಷ ನವೆಂಬರ್ 26 ರಂದು ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಕುಡಿದ ಅಮಲಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Mon, 8 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ