ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ಅಕ್ಷಯ್​ ಪಲ್ಲಮಜಲು​​

|

Updated on:Jan 31, 2023 | 5:15 PM

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
ಶಂಕರ್ ಮಿಶ್ರಾ
Image Credit source: NDTV

ದೆಹಲಿ:  ಏರ್ ಇಂಡಿಯಾ ವಿಮಾನದಲ್ಲಿ (air india) ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾಗೆ (Shankar Mishra) ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜನವರಿ 7 ರಂದು ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದ ಮಿಶ್ರಾ ಅವರಿಗೆ 1 ಲಕ್ಷ ರೂ. ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿ ಮೇಲೆ ಜಾಮೀನು ನೀಡಲಾಯಿತು. ಸೋಮವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಿಶ್ರಾ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ನವೆಂಬರ್ 26 ರ ಘಟನೆಯು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ದೂಷಿಸಿದೆ ಎಂದು ವಾದಿಸಿದ ದೆಹಲಿ ಪೊಲೀಸರು ಆರೋಪಿಗಳಿಗೆ ಜಾಮೀನನ್ನು ವಿರೋಧಿಸಿದ್ದರು. ಮಿಶ್ರಾ ಅವರು ಮಾಡಿರುವುದು ಅಸಹ್ಯಕರವಾಗಿದ್ದರೂ, ಕಾನೂನಿನ ಪ್ರಕಾರ ವ್ಯವಹರಿಸಬೇಕು ಎಂದು ನ್ಯಾಯಾಲಯ ಗಮನಿಸಿದೆ.

ನ್ಯೂಯಾರ್ಕ್‌ನಿಂದ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತಿನಲ್ಲಿ ಪ್ಯಾಂಟ್ ಅನ್ನು ಬಿಚ್ಚಿ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಪ್ರತ್ಯಕ್ಷದರ್ಶಿಗಳ ವರದಿಗಳು ಮತ್ತು ಹೇಳಿಕೆಗಳ ಪ್ರಕಾರ, ಆ ವ್ಯಕ್ತಿ ಮತ್ತೆ ಅಲ್ಲಿ ನಿಂತಿದ್ದರು, ಅವರನ್ನು ಅಲ್ಲಿಂದ ಇತರ ಪ್ರಯಾಣಿಕರು ಅಲ್ಲಿಂದ ತೆರಳುವಂತೆ ಕೇಳಿಕೊಂಡ ನಂತರ ಅಲ್ಲಿಂದ ಹೋಗಿದ್ದಾರೆ.

ಇದನ್ನು ಓದಿ: Air India: ಶಂಕರ್ ಮಿಶ್ರಾಗೆ ಶಿಕ್ಷೆ, ಜೌಹರ್ ಅಲಿಖಾನ್‌ಗೆ ಜಾಮೀನು, ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದ ಬಿಜೆಪಿ ನಾಯಕ

ಈ ವಿಷಯವನ್ನು ಸಿಬ್ಬಂದಿಯ ಗಮನಕ್ಕೆ ತಂದರು ಯಾವುದೇ ಪರಿಣಾಮಕಾರಿ ಪ್ರತಿಕ್ರಿಯೆ ಬಂದಿರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ, ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ. ಜನವರಿ 4ರಂದು ಆಕೆ ಶಂಕರ್ ಮಿಶ್ರಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು, ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಆರೋಪ ಹೊರಿಸಲಾಗಿದ್ದು, ಅವರು 30 ದಿನಗಳ ಕಾಲ ವಿಮಾನಯಾನದೊಂದಿಗೆ ಹಾರಾಟ ನಡೆಸದಂತೆ ನಿರ್ಬಂಧಿಸಲಾಗಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಏರ್ ಇಂಡಿಯಾ ಮತ್ತು ಆ ವಿಮಾನದಲ್ಲಿದ್ದ ಸಿಬ್ಬಂದಿಗೆ ನೋಟಿಸ್ ನೀಡಿದೆ ಮತ್ತು ಅವರ ನಡವಳಿಕೆಯನ್ನು ‘ವೃತ್ತಿಪರವಲ್ಲ’ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada