AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ಅಮೆರಿಕವು ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದೆ. ಡೊನಾಲ್ಡ್ ಟ್ರಂಪ್, ಹೋರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್ ಪರಮಾಣು ಅಸ್ತ್ರ ಹೊಂದದಂತೆ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯಿಂದ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಕಚ್ಚಾ ತೈಲ ಬೆಲೆ ಏರಿಕೆಯ ಭೀತಿ ಎದುರಾಗಿದೆ.

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ
ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ
ಅಕ್ಷಯ್​ ಪಲ್ಲಮಜಲು​​
|

Updated on: Mar 14, 2026 | 6:40 AM

Share

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ.

ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ (Strait of Hormuz) ಹಡಗುಗಳ ಮುಕ್ತ ಸಂಚಾರಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

“ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವಂತಿಲ್ಲ. ವಿಶ್ವದ ಶಾಂತಿಗೆ ಧಕ್ಕೆ ತರುವ ಸಾಮರ್ಥ್ಯವನ್ನು ಇರಾನ್‌ಗೆ ಪಡೆಯಲು ಬಿಡುವುದಿಲ್ಲ” ಎಂದು ಟ್ರಂಪ್ ಗುಡುಗಿದ್ದಾರೆ. “ಇರಾನ್ ಮಿಲಿಟರಿ ಪಡೆಗಳು ಕೂಡಲೇ ಶರಣಾಗಬೇಕು. ಇನ್ನುಳಿದಿರುವ ದೇಶವನ್ನಾದರೂ ಉಳಿಸಿಕೊಳ್ಳಬೇಕಾದರೆ ಆಯುಧಗಳನ್ನು ಕೆಳಗಿಡಬೇಕು” ಎಂದು ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಈ ದಾಳಿಯು ಜಾಗತಿಕ ರಾಜಕೀಯದಲ್ಲಿ ಭಾರಿ ಕಂಪನ ಸೃಷ್ಟಿಸಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ