AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter India: ಟ್ವಿಟರ್ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ ಯುಎಸ್​ನ ಜೆರೆಮಿ ಕೆಸ್ಸೆಲ್ ನೇಮಕ

ಟ್ವಿಟರ್ ಧರ್ಮೇಂದ್ರ ಚತುರ್‌ರನ್ನು ಮಧ್ಯಂತರ ಕುಂದುಕೊರತೆ ಅಧಿಕಾರಿಯಾಗಿ‌ ನೇಮಕ ಮಾಡಿರುವ ಬಗ್ಗೆ ಮೇ 31ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆದರೆ, ಈ ಹುದ್ದೆಗೆ ಹೊರಗಿನವರನ್ನು ನೇಮಕ ಮಾಡಿರುವ ಬಗ್ಗೆ ಕೇಂದ್ರ ಸರ್ಕಾರ ಅಸಮ್ಮತಿ ಸೂಚಿಸಿತ್ತು.

Twitter India: ಟ್ವಿಟರ್ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ ಯುಎಸ್​ನ ಜೆರೆಮಿ ಕೆಸ್ಸೆಲ್ ನೇಮಕ
ಟ್ವಿಟ್ಟರ್
TV9 Web
| Edited By: |

Updated on:Jun 28, 2021 | 4:32 PM

Share

ದೆಹಲಿ: ಕೇಂದ್ರ ಸರ್ಕಾರದ ಜೊತೆಗಿನ ಜಟಾಪಟಿಯ‌ ನಡುವೆ ಟ್ವಿಟರ್ ಗ್ಲೋಬಲ್ ಲೀಗಲ್ ಪಾಲಿಸಿ ನಿರ್ದೇಶಕ ಜೆರೆಮಿ ಕೆಸ್ಸೆಲ್ ಅವರನ್ನು ಭಾರತದ ಕುಂದುಕೊರತೆ ಪರಿಹಾರ ಅಧಿಕಾರಿಯನ್ನಾಗಿ ನೇಮಕ ಮಾಡಿದೆ. ಸಾಮಾಜಿಕ ಜಾಲತಾಣಗಳಿಗೆ ಅನ್ವಯಿಸುವಂತಹ ಕೇಂದ್ರ ಸರ್ಕಾರದ ಹೊಸ ನಿಯಮಾವಳಿಗಳನ್ನು ಅನುಸರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ತಿಂಗಳು ನೇಮಕವಾಗಿದ್ದ ಮಧ್ಯಂತರ ಕುಂದುಕೊರತೆ ಪರಿಹಾರ ಅಧಿಕಾರಿ ಧರ್ಮೇಂದ್ರ ಚತುರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ‌.

ಟ್ವಿಟರ್ ಧರ್ಮೇಂದ್ರ ಚತುರ್‌ರನ್ನು ಮಧ್ಯಂತರ ಕುಂದುಕೊರತೆ ಅಧಿಕಾರಿಯಾಗಿ‌ ನೇಮಕ ಮಾಡಿರುವ ಬಗ್ಗೆ ಮೇ 31ರಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು. ಆದರೆ, ಈ ಹುದ್ದೆಗೆ ಹೊರಗಿನವರನ್ನು ನೇಮಕ ಮಾಡಿರುವ ಬಗ್ಗೆ ಕೇಂದ್ರ ಸರ್ಕಾರ ಅಸಮ್ಮತಿ ಸೂಚಿಸಿತ್ತು. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಟ್ವಿಟರ್​ ಮಧ್ಯಂತರ ಪ್ರಾದೇಶಿಕ ಕುಂದುಕೊರತೆ ನಿವಾರಣಾ ಅಧಿಕಾರಿಯನ್ನು ನೇಮಕ ಮಾಡಿತ್ತು. ಆದರೆ ಧರ್ಮೇಂದ್ರ ಚತುರ್​ ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೋಷಿಯಲ್​ ಮೀಡಿಯಾದ ವೆಬ್​ಸೈಟ್​​ನಲ್ಲಿ ಇನ್ನುಮುಂದೆ ಅವರ ಹೆಸರು ಇರುವುದಿಲ್ಲ. ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು-2021ರಡಿಯಲ್ಲಿ ಅದನ್ನು ತೆಗೆಯಲಾಗಿದೆ ಎಂದು ಟ್ವಿಟರ್​ ಹೇಳಿದ್ದಾಗಿ ಪಿಟಿಐ ವರದಿ ಮಾಡಿತ್ತು.

ಕೇಂದ್ರ ಸರ್ಕಾರ ತನ್ನ ಹೊಸ ಐಟಿ ನಿಯಮಗಳಡಿ, ಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಮಧ್ಯಂತರ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ ಜೂನ್​ ಪ್ರಾರಂಭದಲ್ಲಷ್ಟೇ ನೇಮಕವಾಗಿದ್ದ ಧರ್ಮೇಂದ್ರ ಚತುರ್​ ತಿಂಗಳ ಅಂತ್ಯದೊಳಗೇ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಿಗೆ ಸಂಬಂಧಪಟ್ಟಂತೆ ಕೇಂದ್ರದ ಹೊಸ ನಿಯಮಗಳ ವಿಚಾರದಲ್ಲಿ ಟ್ವಿಟರ್​ ಕಂಪನಿ ಮತ್ತು ಕೇಂದ್ರ ಸರ್ಕಾರದ ನಡುವೆ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲೇ ಇಂಥದ್ದೊಂದು ಬೆಳವಣಿಗೆ ನಡೆದಿದೆ. ಭಾರತದಲ್ಲಿನ ನಿಯಮಗಳನ್ನು ಪಾಲಿಸುವಲ್ಲಿ ಟ್ವಿಟರ್ ವಿಫಲವಾಗಿದೆ ಎಂದು ಇತ್ತೀಚೆಗೆ ಕೇಂದ್ರ ಸರ್ಕಾರ ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸುತ್ತಲೇ ಇತ್ತು.

ಭಾರತದಲ್ಲಿ ಮೇ 25ರಿಂದ ಹೊಸ ಐಟಿ ನಿಯಮಗಳು ಜಾರಿಯಾಗಿವೆ. ಅದರ ಅನ್ವಯ ಇಲ್ಲಿ 50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ಕುಂದುಕೊರತೆ ನಿವಾರಣಾ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬೇಕು ಮತ್ತು ಅವರ ಹೆಸರು, ಫೋನ್​ ನಂಬರ್​ನ್ನು ತಮ್ಮ ವೆಬ್​ಸೈಟ್​ ಮೂಲಕ ಪ್ರಚುರಪಡಿಸಬೇಕು. ಬಳಕೆದಾರರಿಗೆ ಸೋಷಿಯಲ್ ಮೀಡಿಯಾ ಸಂಬಂಧಪಟ್ಟು ಉಂಟಾಗುವ ಸಮಸ್ಯೆಗಳನ್ನು ಅವರು ಆಲಿಸಬೇಕು ಎಂದು ಹೇಳಲಾಗಿದೆ. ಆದರೆ ಕೇಂದ್ರ ಸರ್ಕಾರ ಹೇಳಿದ್ದ ನಿಯಮಗಳನ್ನು ಪಾಲಿಸಲು ವಿಳಂಬ ಮಾಡಿದ ಟ್ವಿಟರ್​ಗೆ ಜೂ.5ರಂದು ನೋಟಿಸ್​ ಕೂಡ ನೀಡಲಾಗಿತ್ತು. ಬಳಿಕ ಕೇಂದ್ರದ ಆದೇಶವನ್ನು ಪಾಲಿಸುವುದಾಗಿ ಹೇಳಿಕೊಂಡಿತ್ತು.

ಇದನ್ನೂ ಓದಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ವೈಯಕ್ತಿಕ ಟ್ವಿಟರ್ ಖಾತೆಗೆ ನಿರ್ಬಂಧ; ಒಂದು ಗಂಟೆ ಲಾಕ್ ಮಾಡಿ ಅನ್​​ಲಾಕ್

ಉತ್ತರ ಪ್ರದೇಶ ಪೊಲೀಸರ ಸಮನ್ಸ್​ ಜಾರಿ ಹಿನ್ನೆಲೆ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಟ್ವಿಟರ್​ ಇಂಡಿಯಾ ಮುಖ್ಯಸ್ಥ

Published On - 4:21 pm, Mon, 28 June 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ