AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಶೇ.25 ರಷ್ಟು ಸುಂಕ ಬೆನ್ನಲ್ಲೇ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರ ಮಹತ್ವದ ಪ್ರಕಟಣೆ

ನಿರೀಕ್ಷೆಯಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಸರಕುಗಳ ಮೇಲೆ ಶೇ. 25ರಷ್ಟು ಸುಂಕವನ್ನು ಪ್ರಕಟಿಸಿದ್ದಾರೆ. ಆಗಸ್ಟ್ 1ರಿಂದ ಭಾರತದ ಮೇಲೆ ಶೇ 25 ಟ್ಯಾರಿಫ್ ಹಾಗೂ ಹೆಚ್ಚುವರಿ ದಂಡವನ್ನು ಹಾಕಲಾಗುವುದು ಎಂದು ಸೋಷಿಯಲ್ ಅಕೌಂಟ್​ನಲ್ಲಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರವು ಉಭಯ ದೇಶಗಳ ನಡುವಿನ ಮಹತ್ವಾಕಾಂಕ್ಷೆ ಮುಕ್ತ ವ್ಯಾಪಾರದ ಒಪ್ಪಂದದ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದೆ.

ಭಾರತಕ್ಕೆ ಶೇ.25 ರಷ್ಟು ಸುಂಕ ಬೆನ್ನಲ್ಲೇ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರ ಮಹತ್ವದ ಪ್ರಕಟಣೆ
ಅಮೆರಿಕ-ಭಾರತ
ರಮೇಶ್ ಬಿ. ಜವಳಗೇರಾ
|

Updated on: Jul 30, 2025 | 9:40 PM

Share

ನವದೆಹಲಿ, (ಜುಲೈ 30):  ಭಾರತದಿಂದ ಸರಬರಾಜಾಗುವ ಸರಕುಗಳ ಮೇಲೆ ಶೇ. 25 ಸುಂಕ (25 percent tariffs) ಮತ್ತು ಹೆಚ್ಚುವರಿ ದಂಡ ಹಾಕಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಧಿಕೃತ ಘೋಷಣೆ ಮಾಡಿದ್ದಾರೆ. ಭಾರತ ಅಧಿಕ ಟ್ಯಾರಿಫ್ ವಿಧಿಸುತ್ತಿರುವುದು, ಹಣಕಾಸೇತರ ವ್ಯಾಪಾರ ನಿರ್ಬಂಧ (non monetary trade barriers) ಹೊಂದಿರುವುದು, ರಷ್ಯಾ ಇಂಧನ ಖರೀದಿಸುತ್ತಿರುವುದು, ಈ ಮೂರು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಭಾರತದ ಮೇಲೆ ಆಮದು ಸುಂಕ ಹಾಕುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಮಹತ್ವಾಕಾಂಕ್ಷೆಯ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. “ಭಾರತ ಹಾಗೂ ಅಮೆರಿಕ ನಡುವೆ ಒಪ್ಪಂದ ಏರ್ಪಡುವ ಕುರಿತು ರಾಷ್ಟ್ರೀಯ ಹಿತಾಸಕ್ತಿ ಆಧಾರದ ಮೇಲೆ ಅಧ್ಯಯನ ನಡೆಸಲಾಗುತ್ತಿದೆ” ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕಳೆದ ಕೆಲವು ತಿಂಗಳಿಂದ ಭಾರತ ಹಾಗೂ ಅಮೆರಿಕವು ಮುಕ್ತ, ನ್ಯಾಯಸಮ್ಮತ ಹಾಗೂ ಪರಸ್ಪರ ಅನುಕೂಲವಾಗುವ ದಿಸೆಯಲ್ಲಿ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿದೆ. ಇದೇ ಉದ್ದೇಶದೊಂದಿಗೆ ಭಾರತ ಮುಂದಡಿ ಇರಿಸುತ್ತದೆ ಎಂದು ಪ್ರಕಟಣೆಯಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್: ಅಮೆರಿಕ ಅಧ್ಯಕ್ಷ ಘೋಷಣೆ

“ನಮ್ಮ ದೇಶದ ರೈತರು, ಉದ್ಯಮಿಗಳು ಹಾಗೂ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಗಳ ಏಳಿಗೆಯೇ ಪರಮೋಚ್ಚ ಬದ್ಧತೆಯಾಗಿದೆ. ರಾಷ್ಟ್ರೀಯ ಹಿತಾಸಕ್ತಿಯೂ ನಮ್ಮ ಪ್ರಾಮುಖ್ಯತೆಯಾಗಿದೆ. ಬ್ರಿಟನ್ ಜತೆ ಮಾಡಿಕೊಂಡ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನೇ ಅಮೆರಿಕದ ಜತೆಗೂ ಮಾಡಿಕೊಳ್ಳುವುದು ನಮ್ಮ ಉದ್ದೇಶ” ಎಂದು ಸರ್ಕಾರ ಪ್ರಕಟಣೆಯಲ್ಲಿ ಹೇಳಿದೆ.

ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಸಂಬಂಧ ದೊಡ್ಡ ಮಟ್ಟದಲ್ಲಿ ಇದೆಯಾದರೂ ಅಮೆರಿಕಕ್ಕೆ ಟ್ರೇಡ್ ಡೆಫಿಸಿಟ್ ಇದೆ. 40 ಬಿಲಿಯನ್ ಡಾಲರ್​ಗೂ ಅಧಿಕ ಮೊತ್ತದ ಟ್ರೇಡ್ ಡೆಫಿಸಿಟ್ ಅನ್ನು ಅಮೆರಿಕ ಹೊಂದಿದೆ. ಈ ಕೊರತೆಯನ್ನು ಸರಿದೂಗಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ರಷ್ಯಾ ಬದಲು ತನ್ನ ತೈಲವನ್ನು ಭಾರತ ಖರೀದಿಸಲಿ ಎನ್ನುವ ಅಪೇಕ್ಷೆ ಮತ್ತು ನಿರೀಕ್ಷೆ ಅಮೆರಿಕದ್ದಾಗಿದೆ.

ಇನ್ನು ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ ಅಂತಿಮಗೊಳಿಸಲು ಸೆಪ್ಟೆಂಬರ್ ತಿಂಗಳಲ್ಲಿ ಆರನೇ ಸುತ್ತಿನ ಮಾತುಕತೆ ಇದೆ. ಆಗ ಒಪ್ಪಂದವು ಅಂತಿಮ ಹಂತಕ್ಕೆ ಬರಬಹುದು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ