ಈ ಶಾಂತಿ ಸದಾ ಉಳಿಯಲಿ ಎಂಬುದು ನಮ್ಮ ಆಶಯ, ಅಮೆರಿಕ-ಇರಾನ್ ಕದನ ವಿರಾಮದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ

ಭಾರತವು ಅಮೆರಿಕ-ಇರಾನ್ ಕದನ ವಿರಾಮವನ್ನು ಸ್ವಾಗತಿಸಿದೆ, ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಗಾಗಿ ಆಶಿಸಿದೆ. ಸಂಘರ್ಷದಿಂದಾದ ಮಾನವ ಸಂಕಷ್ಟ, ಇಂಧನ ಮತ್ತು ವ್ಯಾಪಾರ ಜಾಲದ ಅಡಚಣೆ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಉದ್ವಿಗ್ನತೆ ಕಡಿಮೆಗೊಳಿಸಿ, ಸಂವಾದದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ತಕ್ಷಣ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ.

ಈ ಶಾಂತಿ ಸದಾ ಉಳಿಯಲಿ ಎಂಬುದು ನಮ್ಮ ಆಶಯ, ಅಮೆರಿಕ-ಇರಾನ್ ಕದನ ವಿರಾಮದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ
ರಣಧೀರ್ ಜೈಸ್ವಾಲ್
Image Credit source: ANI

Updated on: Apr 08, 2026 | 2:48 PM

ನವದೆಹಲಿ, ಏಪ್ರಿಲ್ 08:ಅಮೆರಿಕ-ಇಸ್ರೇಲ್(Israel) ಮತ್ತು ಅಮೆರಿಕದ ನಡುವಿನ ಕದನ ವಿರಾಮದ ಕುರಿತು ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ನಾವು ಕದನ ವಿರಾಮವನ್ನು ಸ್ವಾಗತಿಸುತ್ತೇವೆ ಮತ್ತು ಅದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂದು ಆಶಿಸುತ್ತೇವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ನಾವು ಹಿಂದೆ ಪದೇ ಪದೇ ಹೇಳಿದಂತೆ, ನಡೆಯುತ್ತಿರುವ ಸಂಘರ್ಷವನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಲು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆ ಅತ್ಯಗತ್ಯ ಎಂದು ಸಚಿವಾಲಯ ಹೇಳಿದೆ.

ಈ ಸಂಘರ್ಷ ಈಗಾಗಲೇ ಜನರಿಗೆ ಅಪಾರ ನೋವನ್ನುಂಟು ಮಾಡಿದೆ ಮತ್ತು ಜಾಗತಿಕ ಇಂಧನ ಪೂರೈಕೆ ಮತ್ತು ವ್ಯಾಪಾರ ಜಾಲಗಳಿಗೆ ಅಡ್ಡಿಪಡಿಸಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಸಂಚಾರ ಮೊದಲಿನಂತೆಯೇ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಲಾಗಿದೆ.

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮದಿಂದ ಮಧ್ಯಪ್ರಾಚ್ಯದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿದ್ದ ಹೋರಾಟ ನಿಂತಿದೆ. ಇರಾನ್ ಐತಿಹಾಸಿಕ ವಿಜಯ ಸಾಧಿಸಿದೆ. ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ದಾಳಿಗಳಿಂದ ಹಿಂದೆ ಸರಿದು ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್ ಈ ಹೇಳಿಕೆ ನೀಡಿದೆ.  ಟೆಹ್ರಾನ್ 10 ಅಂಶಗಳ ಪ್ರಸ್ತಾವನೆಯನ್ನು ಸಹ ಮಂಡಿಸಿದೆ, ಅದನ್ನು ಅಮೆರಿಕ ಅದನ್ನು ಒಪ್ಪಿಕೊಂಡಿದೆ ಎಂದು ಹೇಳಿದೆ.

ಮತ್ತಷ್ಟು ಓದಿ: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ನಾಗರಿಕರು ತಕ್ಷಣ ದೇಶವನ್ನು ತೊರೆಯುವಂತೆ ಸೂಚಿಸಿದೆ. ಇದಕ್ಕೂ ಮೊದಲು, ಏಪ್ರಿಲ್ 7 ರಂದು ಹೊರಡಿಸಲಾದ ಹಿಂದಿನ ಸಲಹೆಯಲ್ಲಿ, ಜನರು ಜಾಗರೂಕರಾಗಿರಿ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಉಳಿಯುವಂತೆ ಸೂಚಿಸಲಾಗಿತ್ತು.

ಭಾರತೀಯ ನಾಗರಿಕರು ರಾಯಭಾರ ಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಬೇಕು ಮತ್ತು ಅವರು ಸೂಚಿಸಿದ ಸುರಕ್ಷಿತ ಮಾರ್ಗಗಳ ಮೂಲಕ ಮಾತ್ರ ಇರಾನ್‌ನಿಂದ ಹೊರಡಬೇಕು ಎಂದು ರಾಯಭಾರ ಕಚೇರಿ ಹೇಳಿದೆ. ಯಾವುದೇ ಭಾರತೀಯ ನಾಗರಿಕರು ಪೂರ್ವ ಸಮಾಲೋಚನೆ ಇಲ್ಲದೆ ಯಾವುದೇ ಅಂತಾರಾಷ್ಟ್ರೀಯ ಗಡಿಯನ್ನು ದಾಟಲು ಪ್ರಯತ್ನಿಸಬಾರದು ಎಂದು ರಾಯಭಾರ ಕಚೇರಿ ಕಟ್ಟುನಿಟ್ಟಾಗಿ ಸೂಚಿಸಿದೆ. ಯಾವುದೇ ಗಡಿಯನ್ನು ದಾಟುವ ಮೊದಲು ರಾಯಭಾರ ಕಚೇರಿ ಸಂಪರ್ಕಿಸುವುದು ಒಳಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us