G7 Summit: ನೀವು ತುಂಬಾ ಜನಪ್ರಿಯ ವ್ಯಕ್ತಿ; ಪ್ರಧಾನಿ ಮೋದಿರನ್ನು ಹೊಗಳಿದ ಅಮೆರಿಕ ಅಧ್ಯಕ್ಷ ಬೈಡನ್
ಪ್ರಧಾನಿ ಮೋದಿಯವರು ಜೂನ್ 21 ರಿಂದ 24 ರವರೆಗೆ ಯುಎಸ್‌ಗೆ ಅಧಿಕೃತ ರಾಜ್ಯ ಪ್ರವಾಸಕ್ಕೆ ಮುಂಚಿತವಾಗಿ ಶನಿವಾರ ಬೈಡನ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಇದೀಗ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜಪಾನ್‌ನ ಹಿರೋಷಿಮಾದಲ್ಲಿ ಶನಿವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಪರಸ್ಪರ ಆತ್ಮೀಯವಾಗಿ ಆಲಿಂಗಿಸಿದ್ದರು. ಜಪಾನ್ ಪಿಎಂ ಫುಮಿಯೊ ಕಿಶಿದಾ (Fumio Kishida) ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರಧಾನಿ ಮೋದಿಯವರು ಜೂನ್ 21 ರಿಂದ 24 ರವರೆಗೆ ಯುಎಸ್‌ಗೆ ಅಧಿಕೃತ ರಾಜ್ಯ ಪ್ರವಾಸಕ್ಕೆ ಮುಂಚಿತವಾಗಿ ಶನಿವಾರ ಬೈಡನ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಇದೀಗ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹಿರೊಶೀಮಾದಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಜೋ ಬೈಡನ್ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಮೋದಿ ಅವರ ನಡೆ ಸಾಕಷ್ಟು ಜನರ ಮೇಲೆ ಪ್ರಭಾವ ಬೀರಿದೆ ಎಂದು ಮೋದಿ ಅವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ಜೊತೆಗೆ ನೀವು ತುಂಬಾ ಜನಪ್ರಿಯರು ಎಂದು ಮೋದಿ ಅವರನ್ನು ಶ್ಲಾಘಿಸಿದ್ದಾರೆ.
ಒಂದು ದಿನದ ಹಿಂದೆ ಜಪಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರು ನಿನ್ನೆ ಬೆಳಗ್ಗೆ ತಮ್ಮ ಜಪಾನ್ ಪ್ರಧಾನಿ ಕಿಶಿದಾ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಭಾರತ ಮತ್ತು ಜಪಾನ್ ನಡುವಿನ ಸಂಪೂರ್ಣ ಶ್ರೇಣಿಯ ಸಂಬಂಧಗಳನ್ನು ಪರಿಶೀಲಿಸಿದರು. ಉಭಯ ನಾಯಕರು ಗ್ರಹವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಭಾರತದ ಜಿ 20 ಪ್ರೆಸಿಡೆನ್ಸಿ ಮತ್ತು ಜಪಾನ್‌ನ ಜಿ 7 ಪ್ರೆಸಿಡೆನ್ಸಿಯ ಕೇಂದ್ರೀಕೃತ ಕ್ಷೇತ್ರಗಳ ಬಗ್ಗೆ ಚರ್ಚಿಸಿದರು.
ಇಬ್ಬರೂ ನಾಯಕರು ತಮ್ಮ ಸಂಬಂಧಿತ ಜಿ-20 ಮತ್ತು ಜಿ-7 ಪ್ರೆಸಿಡೆನ್ಸಿಗಳ ಪ್ರಯತ್ನಗಳನ್ನು ಸಂಯೋಜಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ. ಜಾಗತಿಕ ದಕ್ಷಿಣ ರಾಷ್ಟ್ರಗಳ ಕಾಳಜಿ ಮತ್ತು ಆದ್ಯತೆಗಳನ್ನು ಎತ್ತಿ ಹಿಡಿಯುವ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.ಅಧಿಕಾರಿಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಟೋಕಿಯೊದಲ್ಲಿ ಭೇಟಿಯಾಗಿದ್ದಾರೆ. ಫೆಬ್ರವರಿ 24, 2022 ರಂದು ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.
ಇದನ್ನೂ ಓದಿ: ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ
ಪ್ರಬಲ ಗುಂಪಿನ ಪ್ರಸ್ತುತ ಅಧ್ಯಕ್ಷ ಜಪಾನ್‌ನ ಆಹ್ವಾನದ ಮೇರೆಗೆ ಉಕ್ರೇನಿಯನ್ ಅಧ್ಯಕ್ಷರು ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.ಉಕ್ರೇನ್ ಸಂಘರ್ಷ ಪ್ರಾರಂಭವಾದಾಗಿನಿಂದ, ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಹಲವಾರು ಬಾರಿ ಮಾತನಾಡಿದ್ದಾರೆ.