AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Police US Woman: ಆಘಾತಕಾರಿ! ಮಹಾರಾಷ್ಟ್ರದ ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿದ್ದ ಅಮೆರಿಕದ ಮಹಿಳೆ ಪತ್ತೆ

ಆಕೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕ್ಷೀಣಿಸಿದ್ದ ಸ್ಥಿತಿಯಲ್ಲಿದ್ದ ಕಾರಣ, ಆಕೆಯನ್ನು ನಂತರ ಹೆಚ್ಚಿನ ಆರೈಕೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸಲಾಯಿತು. ಆಕೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆಕೆಯ ಬಳಿ ಈ ಹಿಂದಿನ ವೈದ್ಯಕೀಯ ಪ್ರಿಸ್ಕ್ರಿಪ್ಷನ್​​ ಇದ್ದು, ಅದನ್ನು ಪರಿಶೀಲಿಸಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

Maharashtra Police US Woman: ಆಘಾತಕಾರಿ! ಮಹಾರಾಷ್ಟ್ರದ ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿದ್ದ ಅಮೆರಿಕದ ಮಹಿಳೆ ಪತ್ತೆ
ಮಹಾರಾಷ್ಟ್ರದ ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿದ್ದ ಅಮೆರಿಕದ ಮಹಿಳೆ ಪತ್ತೆ
ಸಾಧು ಶ್ರೀನಾಥ್​
|

Updated on:Jul 29, 2024 | 2:24 PM

Share

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ( Sindhudurg district of Maharashtra) 50 ವರ್ಷದ ಮಹಿಳೆಯೊಬ್ಬರು (woman) ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಯುಎಸ್ ಪಾಸ್‌ಪೋರ್ಟ್‌ನ ( US passport) ಫೋಟೊಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ (Aadhaar card) ಸೇರಿದಂತೆ ಇತರ ದಾಖಲೆಗಳು ಆಕೆಯ ಬಳಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ವರದಿ ಮಾಡಿದ್ದಾರೆ. ಶನಿವಾರ ಸಂಜೆ ಜಿಲ್ಲೆಯಿಂದ ಸರಿಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಮಹಿಳೆ ಅಳುತ್ತಿರುವುದು ಸ್ಥಳೀಯ ಕುರಿಗಾಹಿಗಳಿಗೆ ಕೇಳಿಬಂದಿತ್ತು. ಆಕೆ ಸರಪಳಿ ಸಿಲುಕಿಕೊಂಡು ಸಂಕಷ್ಟದಲ್ಲಿರುವುದನ್ನು ಕಂಡು ಕುರುಬರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು. ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಸಾವಂತವಾಡಿ ಮತ್ತು ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

ಆಕೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕ್ಷೀಣಿಸಿದ್ದ ಸ್ಥಿತಿಯಲ್ಲಿದ್ದ ಕಾರಣ, ಆಕೆಯನ್ನು ನಂತರ ಹೆಚ್ಚಿನ ಆರೈಕೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸಲಾಯಿತು. ಆಕೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆಕೆಯ ಬಳಿ ಈ ಹಿಂದಿನ ವೈದ್ಯಕೀಯ ಪ್ರಿಸ್ಕ್ರಿಪ್ಷನ್​​ ಇದ್ದು, ಅದನ್ನು ಪರಿಶೀಲಿಸಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಟೆಕ್ಕಿಯಾಗಿದ್ದ ಮೃತ ಮಗನನ್ನು ಸಮಾರಂಭದಲ್ಲಿ ನೋಡಿ ಹೆತ್ತವರು ಶಾಕ್ – ಕರುಳು ಚುರುಕ್ ಎನ್ನುವ ವೀಡಿಯೊ ನೋಡಿ

ತಮಿಳುನಾಡು ವಿಳಾಸವಿರುವ ಆಧಾರ್ ಕಾರ್ಡ್ ಮತ್ತು ಆಕೆಯ ಅವಧಿ ಮುಗಿದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ಫೋಟೊಕಾಪಿ ಸೇರಿದಂತೆ ದೊರೆತ ದಾಖಲೆಗಳ ಆಧಾರದ ಮೇಲೆ ಮಹಿಳೆಯನ್ನು ಲಲಿತಾ ಕಯಿ ( Lalita Kayi) ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಆಕೆಯ ರಾಷ್ಟ್ರೀಯತೆಯನ್ನು ನಿರ್ಧರಿಸಲು ಪೊಲೀಸರು ಈ ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ. ಮಹಿಳೆಯ ಪ್ರಸ್ತುತ ಆರೋಗ್ಯ ಸ್ಥಿತಿ ಆತಂಕಕಾರಿಯಾಗಿರುವುದರಿಂದ ಪೊಲೀಸರಿಗೆ ಹೇಳಿಕೆ ಪಡೆಯಲು ಕಷ್ಟಸಾಧ್ಯವಾಗಿದೆ. ಮಹಿಳೆಯು ಒಂದೆರಡು ದಿನಗಳಿಂದ ಏನನ್ನೂ ತಿನ್ನದ ಕಾರಣ ಮತ್ತು ಪ್ರದೇಶದಲ್ಲಿ ಭಾರಿ ಮಳೆಯಿದ್ದ ಕಾರಣ ಆಕೆ ದುರ್ಬಲಳಾಗಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕೆಯನ್ನು ಆ ಮರಕ್ಕೆ ಎಷ್ಟು ಸಮಯದಿಂದ ಕಟ್ಟಿ ಹಾಕಿದ್ದರೋ ಗೊತ್ತಿಲ್ಲ. ತಮಿಳುನಾಡು ಮೂಲದ ಆಕೆಯ ಪತಿ ಆಕೆಯನ್ನು ಅಲ್ಲಿ ಕಟ್ಟಿಹಾಕಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳನ್ನು ತಮಿಳುನಾಡು, ಗೋವಾ ಮತ್ತು ಇತರ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು   ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Mon, 29 July 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್