Kerala: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಲ್ಲಿ ಸರ್, ಮೇಡಂ ಬಳಕೆ ನಿಷೇಧ

ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸದಿರುವಂತೆ ಮಾಡಲು ಕೇರಳ ಸರ್ಕಾರದ ಕಚೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದಾರೆ.

Kerala: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಲ್ಲಿ ಸರ್, ಮೇಡಂ ಬಳಕೆ ನಿಷೇಧ
ಕೇರಳದ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 06, 2021 | 5:26 PM

ತಿರುವನಂತಪುರಂ: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಯಾವ ಪಂಚಾಯತ್​ಗಳ ಕಾಂಗ್ರೆಸ್ ಕಚೇರಿಗಳಲ್ಲೂ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸುವಂತಿಲ್ಲ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ. ಸುಧಾಕರನ್ ಆದೇಶ ನೀಡಿದ್ದಾರೆ. ಕೇರಳ ರಾಜ್ಯದ ಪಲಕ್ಕಾಡ್ ಜಿಲ್ಲೆಯ ಮಥೂರ್ ಗ್ರಾಮ ಪಂಚಾಯತ್​ನಿಂದ ಆರಂಭವಾಗಿರುವ ಈ ಸಂಪ್ರದಾಯ ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಿಗೂ ಅನ್ವಯವಾಗಲಿದೆ.

ಈ ಮೊದಲು ಮಥೂರ್ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಸರ್ ಮತ್ತು ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರದಲ್ಲಿರುವ ಉಳಿದ ಪಂಚಾಯತ್​ಗಳಲ್ಲೂ ಇದನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಬದಲಾಗಿ ಪ್ರತಿಯೊಬ್ಬರನ್ನೂ ಅವರ ಹೆಸರಿನಿಂದಲೇ ಸಂಬೋಧಿಸಬೇಕು ಎಂಬ ನಿಯಮ ಜಾರಿಗೆ ತರಲಾಗಿದೆ. ಸರ್, ಮೇಡಂ ಎಂಬುದು ವಸಾಹತುಶಾಹಿಗಳು ಬಿಟ್ಟುಹೋದ ಪದಗಳಾಗಿದ್ದು, ಅದನ್ನು ಬಳಸದಿರಲು ಸೂಚಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್, ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸದಿರುವಂತೆ ಮಾಡಲು ಕೇರಳ ಸರ್ಕಾರದ ಕಚೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ್ದಾರೆ.

ಕೇರಳದ 14 ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿ ಸರ್ ಮತ್ತು ಮೇಡಂ ಪದಗಳನ್ನು ಬಳಸದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಕೆಪಿಸಿಸಿ ಸೂಚನೆ ನೀಡಿದೆ. ಯುಡಿಎಫ್ ನೇತೃತ್ವದ ಮಥೂರ್ ಪಂಚಾಯತ್​ನಲ್ಲಿ ಮೊದಲ ಬಾರಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಮಥೂರ್ ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಪಿ.ಆರ್. ಪ್ರಸಾದ್ ತಮ್ಮ ಅವಶ್ಯಕತೆಗಳಿಗೆ ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವ ಜನ ಸಾಮಾನ್ಯರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್, ಮೇಡಂ ಎಂದು ಬಳಸದಂತೆ ಆದೇಶಿಸಿದ್ದರು.

ಇದನ್ನೂ ಓದಿ: Nipah Virus ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ: ರೋಗ ಲಕ್ಷಣಗಳೇನು? ತಡೆಯುವುದು ಹೇಗೆ?

ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎನ್ನುವುದು ಮತ್ತೆ ಖಚಿತವಾಗಿದೆ; ಕಾಂಗ್ರೆಸ್​ ಒಳಜಗಳ ಬಯಲಾಗಿದೆ: ನಳಿನ್ ಕುಮಾರ್ ಕಟೀಲ್

(Use of Sir, Madam Will Be Banned in All Congress Ruled Panchayats in Kerala says KPCC President K Sudhakaran)

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ