ನಕ್ಸಲಿಸಂ ಬೆಂಬಲಿಸಲು ಸುಪ್ರೀಂ ಕೋರ್ಟನ್ನು ಬಳಸಿಕೊಂಡಿದ್ದರು; ವಿಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಸುದರ್ಶನ್ ರೆಡ್ಡಿ ಬಗ್ಗೆ ಅಮಿತ್ ಶಾ ಟೀಕೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶುಕ್ರವಾರ) ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯಾಗಿದ್ದಾಗ ಬಿ. ಸುದರ್ಶನ್ ರೆಡ್ಡಿ ಅವರು ಸಾಲ್ವಾ ಜುಡುಮ್ ತೀರ್ಪನ್ನು ಉಲ್ಲೇಖಿಸುವಾಗ ನಕ್ಸಲಿಸಂ ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ, ಆಗಸ್ಟ್ 22: ಜಗದೀಪ್ ಧನ್ಖರ್ (Jagdeep Dhankhar) ಅವರ ರಾಜೀನಾಮೆಯ ಬಳಿಕ ಉಪರಾಷ್ಟ್ರಪತಿ ಚುನಾವಣೆಯನ್ನು (Vice President Election) ಘೋಷಿಸಲಾಗಿದೆ. ಎನ್ಡಿಎ ಸಿ.ಪಿ ರಾಧಾಕೃಷ್ಣನ್ ಅವರ ಹೆಸರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರೆ ಇಂಡಿಯ ಬ್ಲಾಕ್ ಅಭ್ಯರ್ಥಿಯಾಗಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಆಯ್ಕೆ ಮಾಡಿದೆ. ವಿರೋಧ ಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಸುದರ್ಶನ್ ರೆಡ್ಡಿ ಅವರ ವಿರುದ್ಧ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಚ್ಚಿಯಲ್ಲಿ ಖಾಸಗಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಎಡಪಂಥೀಯರ ಒತ್ತಡದಿಂದ ಕಾಂಗ್ರೆಸ್ ಸುದರ್ಶನ್ ರೆಡ್ಡಿಯನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಸುದರ್ಶನ್ ರೆಡ್ಡಿ ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಅನ್ನು ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡಿದ ವ್ಯಕ್ತಿಯಾಗಿದ್ದಾರೆ. ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿದ್ದಾಗ ಈ ತೀರ್ಪು ನೀಡದಿದ್ದರೆ 2020ರ ವೇಳೆಗೆ ಉಗ್ರವಾದವನ್ನು ನಿರ್ಮೂಲನೆ ಮಾಡಲಾಗುತ್ತಿತ್ತು. ಕೇರಳವು ನಕ್ಸಲಿಸಂನ ಪರಿಣಾಮವನ್ನು ಅನುಭವಿಸಿದೆ. ಉಗ್ರವಾದವನ್ನೂ ಸಹಿಸಿಕೊಂಡಿದೆ ಎಂದಿದ್ದಾರೆ.
“Congress’s VP candidate Sudershan Reddy promoted naxalism when he gave Salwa Judum order as SC judge.
He used the forum of SC for his ideological ends.
Congress has spoilt its chances of coming to power in Kerala by selecting him.”
– HM Amit Shah in Kochi pic.twitter.com/SyyODIKof8
— News Arena India (@NewsArenaIndia) August 22, 2025
ಇದನ್ನೂ ಓದಿ: ಸುದರ್ಶನ್ ರೆಡ್ಡಿ ವಿರುದ್ಧ ಪ್ರತಿಭಟಿಸಿದ್ದ ಕಾಂಗ್ರೆಸ್ ಅವರನ್ನೇ ಉಪರಾಷ್ಟ್ರಪತಿ ಅಭ್ಯರ್ಥಿ ಎನ್ನುತ್ತಿದೆ; ಲಹರ್ ಸಿಂಗ್ ಲೇವಡಿ
ಎಡಪಂಥೀಯರ ಒತ್ತಡದ ಮೇರೆಗೆ ಸುಪ್ರೀಂ ಕೋರ್ಟ್‌ನಂತಹ ವೇದಿಕೆಯನ್ನು ಬಳಸಿಕೊಂಡು ಎಡಪಂಥೀಯ ಉಗ್ರವಾದ ಮತ್ತು ನಕ್ಸಲ್‌ವಾದವನ್ನು ಬೆಂಬಲಿಸಿದ ಸುದರ್ಶನ್ ರೆಡ್ಡಿಯನ್ನು ಅಭ್ಯರ್ಯಾಗಿ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ಹೇಳಿದ್ದಾರೆ. 2011ರಲ್ಲಿ ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸುದರ್ಶನ್ ರೆಡ್ಡಿ ಮತ್ತು ಎಸ್‌ಎಸ್ ನಿಜ್ಜರ್ ಅವರ ದ್ವಿಸದಸ್ಯ ಪೀಠವು ಮಾವೋವಾದಿ ದಂಗೆಯನ್ನು ಎದುರಿಸಲು ಛತ್ತೀಸ್‌ಗಢ ಸರ್ಕಾರವು ಬುಡಕಟ್ಟು ಯುವಕರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ನೇಮಿಸಿದ ಸಾಲ್ವಾ ಜುಡುಮ್ ಅನ್ನು ವಿಸರ್ಜಿಸಿತು. ಈ ಸಂಘಟನೆಯು ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ಎಂದು ನ್ಯಾಯಪೀಠ ಹೇಳಿತ್ತು.
मैं भाजपा से आता हूँ, RSS का स्वयंसेवक हूँ। जब तक भारत महान नहीं बन जाता, तब तक हमें आराम करने का अधिकार नहीं है। pic.twitter.com/VsVjvUH0oM
— Amit Shah (@AmitShah) August 22, 2025
ಇದನ್ನೂ ಓದಿ: Video: ಪ್ರಧಾನಿ ಮೋದಿ, ಎನ್ಡಿಎ ನಾಯಕರ ಸಮ್ಮುಖದಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ಭಾರತದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯ ಬಣದಿಂದ ಕಣಕ್ಕಿಳಿದಿರುವ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಮತ್ತು ಎನ್‌ಡಿಎಯ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಯ ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು, ಅದೇ ದಿನ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದ್ದು, ಅಭ್ಯರ್ಥಿಗಳು ಆಗಸ್ಟ್ 25ರವರೆಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದು. ಉಪರಾಷ್ಟ್ರಪತಿ ಚುನಾವಣೆಯನ್ನು ಸಂವಿಧಾನದ 64 ಮತ್ತು 68ನೇ ವಿಧಿಗಳ ಅಡಿಯಲ್ಲಿ ನಿಬಂಧನೆಗಳಿಂದ ನಿಯಂತ್ರಿಸಲಾಗುತ್ತದೆ. ಚುನಾವಣಾ ಆಯೋಗವು ಅಧ್ಯಕ್ಷೀಯ ಮತ್ತು ಉಪಾಧ್ಯಕ್ಷೀಯ ಚುನಾವಣಾ ಕಾಯ್ದೆ, 1952ರ ಮೂಲಕ ಉಪರಾಷ್ಟ್ರಪತಿ ಚುನಾವಣೆಗಳನ್ನು ಅಧಿಸೂಚನೆ ಮಾಡುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




