ವರನ ಮುಂದೆಯೇ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ

ವರನ ಮುಂದೆಯೇ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಬ್ಬರ ನಿಶ್ಚಿತಾರ್ಥವೂ ನಡೆದಿತ್ತು, ಕೆಲವೇ ದಿನಗಳಲ್ಲಿ ಮದುವೆಯಿತ್ತು. ಅವರು ಫ್ರೀ ಬರ್ಡ್​ಗಳಂತೆ ಓಡಾಡಿಕೊಂಡಿದ್ದರು. ಹಾಗೆಯೇ ಇಬ್ಬರೂ ಮಾತನಾಡುತ್ತ ಒಂದೆಡೆ ಕುಳಿತಿರುವಾಗ ದುಷ್ಕರ್ಮಿಗಳ ಗುಪೊಂದು ವರನನ್ನು ಒತ್ತಾಯಾಳಾಗಿರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಏಪ್ರಿಲ್ 10 ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ, ಅವರಿಬ್ಬರು ರಸ್ತೆಯ ಬದಿಯ ಕಾಲುವೆ ಬಳಿ ಕುಳಿತು ಮಾತನಾಡುತ್ತಿದ್ದರು.

ವರನ ಮುಂದೆಯೇ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ
ಕ್ರೈಂ
Image Credit source: The Hindu

Updated on: Apr 15, 2025 | 7:57 AM

ಉತ್ತರ ಪ್ರದೇಶ, ಏಪ್ರಿಲ್ 15: ಇಬ್ಬರ ನಡುವೆ ನಿಶ್ಚಿತಾರ್ಥ (Engagement)ನಡೆದಿತ್ತು, ಕೆಲವೇ ದಿನಗಳಲ್ಲಿ ಮದುವೆಯಾಗುವವರಿದ್ದರು, ಆದರೆ ಬರಸಿಡಿಲಂತೆ ಕೆಲವು ಕಾಮುಕರು ವರ(Groom)ನ ಎದುರೇ ಯುವತಿಯ ಮೇಲೆರಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಯುವತಿ ಮೇಲೆ 8 ಜನರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ವರನನ್ನು ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಏಪ್ರಿಲ್ 10 ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ, ಅವರಿಬ್ಬರು ರಸ್ತೆಯ ಬದಿಯ ಕಾಲುವೆ ಬಳಿ ಕುಳಿತು ಮಾತನಾಡುತ್ತಿದ್ದರು. ಅವರಿಬ್ಬರೇ ಅಲ್ಲಿರುವುದನ್ನು ನೋಡಿದ ಗುಂಪೊಂದು ಅವರ ಹತ್ತಿರ ಹೋಗಿ ಅಸಭ್ಯವಾಗಿ ಮಾತನಾಡಿದ್ದಾರೆ. ಬಳಿಕ ವರನನ್ನು ಒತ್ತಾಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳು ಅವರ ಬಳಿ ಇದ್ದ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದರು.

ದೂರಿನ ಪ್ರಕಾರ, ಹಲವು ಪುರುಷರು ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಒಬ್ಬೊಬ್ಬರಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಆರೋಪಿಯನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತ್ವರಿತ ನ್ಯಾಯಕ್ಕಾಗಿ ಪೊಲೀಸರು ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಮತ್ತಷ್ಟು ಓದಿ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಜೈಲಿನಲ್ಲೇ ಆತ್ಮಹತ್ಯೆ

ಮತ್ತೊಂದು ಘಟನೆ
ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಟು ಮಂದಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವ ಇರುವವರೆಗೂ ಸೆರೆವಾಸದ ಶಿಕ್ಷೆ ವಿಧಿಸಿದೆ. 2024ರ ಅಕ್ಟೋಬರ್​ನಲ್ಲಿ ಈ ಅತ್ಯಾಚಾರ ನಡೆದಿದ್ದು, ನಾಲ್ಕನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದಲ್ಲಿರುವ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಎಂಟು ಜನ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ