ಹಣವನ್ನು ದುರುಪಯೋಗಪಡಿಸಿಕೊಳ್ಳಲು 40 ಅವಿವಾಹಿತ ಹೆಣ್ಣುಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು ಎಂದು ನಮೂದಿಸಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮಲ್ಹಿಯಾ ಗ್ರಾಮದ ಹೆಣ್ಣುಮಕ್ಕಳನ್ನು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಪೋಷಣ್ ಅಭಿಯಾನ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಆಘಾತಕಾರಿ ಸಂದೇಶ ಬಂದಿದೆ.
ಪೋಷಣ್ ಟ್ರ್ಯಾಕರ್ಗೆ ಸುಸ್ವಾಗತ, ಹಾಲುಣಿಸುವ ತಾಯಂದಿರು ಬಿಸಿಯೂಟ ಅಥವಾ ಪಡಿತರ, ಸಮಾಲೋಚನೆ, ಮಕ್ಕಳ ಆರೋಗ್ಯ ಮೇಲ್ವಿಚಾರಣೆ ಮತ್ತು ಸ್ತನ್ಯಪಾನಕ್ಕೆ ಸಂಬಂಧಿಸಿದ ಸಲಹೆಯನ್ನು ಪಡೆಯಬಹುದು ಎನ್ನುವ ಸಂದೇಶ ಬಂದಿದ್ದು,ಅ ದನ್ನು ನೋಡಿ ಹೆಣ್ಣುಮಕ್ಕಳ ಮನೆಯವರು ಬೆಚ್ಚಿಬಿದ್ದಿದ್ದಾರೆ.
ಅವರು ಅಂಗನವಾಡಿ ಕಾರ್ಯಕರ್ತೆ ಸುಮನಲತಾ ಅವರನ್ನು ಪ್ರಶ್ನಿಸಿದಾಗ ನುಣುಚಿಕೊಳ್ಳಲು ಪ್ರಯತ್ನಿಸಿದರು. ಸುಮನಲತಾ ಅವರು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳಿಂದ ಆಧಾರ್ ನಕಲು ಪ್ರತಿಗಳನ್ನು ಸಂಗ್ರಹಿಸಿ, ನಂತರ ತಾಯಂದಿರಿಗೆ ಉದ್ದೇಶಿಸಿರುವ ಪೌಷ್ಟಿಕಾಂಶದ ವಸ್ತುಗಳನ್ನು ದುರುಪಯೋಗಪಡಿಸಿಕೊಳ್ಳಲು ಗರ್ಭಿಣಿ ಎಂದು ಸುಳ್ಳು ನೋಂದಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ.
ಮತ್ತಷ್ಟು ಓದಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ, ಇಲ್ಲಿದೆ ವಿಶೇಷತೆ
ಕುಟುಂಬದವರು ನೀಡಿದ ದೂರಿನ ಮೇರೆಗೆ ಮುಖ್ಯ ಅಭಿವೃದ್ಧಿ ಅಧಿಕಾರಿ ಹಿಮಾಂಶು ನಾಗ್ಪಾಲ್ ತನಿಖೆಗೆ ಆದೇಶಿಸಿದ್ದಾರೆ. ಈ ಹೆಣ್ಣುಮಕ್ಕಳ ಹೆಸರಿನಲ್ಲಿ ಯಾವುದೇ ವಸ್ತುಗಳನ್ನು ವಿತರಿಸಲಾಗಿದೆಯೇ ಎಂದು ಪರಿಶೀಲಿಸಲು ಬ್ಲಾಕ್ ಅಭಿವೃದ್ಧಿ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ತನಿಖೆಯ ಫಲಿತಾಂಶಗಳ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ