ಉತ್ತರ ಪ್ರದೇಶ: ಆಸ್ಪತ್ರೆ ಅಗ್ನಿ ಅವಘಡದಲ್ಲಿ 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಜೀವನ್ಮರಣ ಹೋರಾಟ

ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ

ಉತ್ತರ ಪ್ರದೇಶ: ಆಸ್ಪತ್ರೆ ಅಗ್ನಿ ಅವಘಡದಲ್ಲಿ 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಜೀವನ್ಮರಣ ಹೋರಾಟ
ವೈರಲ್​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Nov 16, 2024 | 9:49 AM

ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವಿನಾಶ್ ಕುಮಾರ್ ಹೇಳಿದ್ದಾರೆ.

ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿ ತಗುಲಿದ ತಕ್ಷಣ ಆಸ್ಪತ್ರೆ ಸಿಬ್ಬಂದಿಗಳು ಮಕ್ಕಳನ್ನು ಕಾಪಾಡಲು ಮುಂದಾಗಿದ್ದಾರೆ. NICUನಲ್ಲಿ ಒಟ್ಟು 54 ಮಕ್ಕಳು ದಾಖಲಾಗಿದ್ದರು. ಈ ಬೆಂಕಿ ಅನಾಹುತದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ 7 ಮಕ್ಕಳನ್ನು ಪತ್ತೆ ಮಾಡಲಾಗಿದೆ. ಉಳಿದ ಮೂರು ಮಕ್ಕಳು ಯಾರದ್ದೂ ಎಂದು ಇನ್ನೂ ಪತ್ತೆಯಾಗಿಲ್ಲ. ಈ ಕಾರಣಕ್ಕೆ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.

ಇನ್ನು ಸಾವನ್ನಪ್ಪಿರುವ ಶಿಶುಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ಧನವನ್ನು ನೀಡುವುದಾಗಿ ಕೂಡ ಘೋಷಣೆ ಮಾಡಿದೆ. ಇನ್ನು ಈ ಘಟನೆಯ ಬಗ್ಗೆ ವಿಡಿಯೋ ಒಂದು ಕೂಡ ವೈರಲ್​​ ಆಗಿದೆ, ಅದರಲ್ಲಿ ರೋಗಿಗಳು ಭಯಗೊಂಡಿರುವುದನ್ನು ಹಾಗೂ ಆಸ್ಪತ್ರೆಯ ವಸ್ತುಗಳು ಸುಟ್ಟು ಭಸ್ಮ ಆಗಿರುವುದನ್ನು ಕಾಣಬಹುದು.

ಇನ್ನು ಬೆಂಕಿ ಅನಾಹುತದಿಂದ ಗಾಯಗೊಂಡಿರುವ ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಝಾನ್ಸಿ ಸುಧಾ ಸಿಂಗ್ ಈ ಬಗ್ಗೆ ವರದಿಯನ್ನು ಪಡೆದಿದ್ದಾರೆ. ಇನ್ನು ಗಾಯಗೊಂಡಿರುವ ಶಿಶುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಇಲ್ಲಿ ವೈದ್ಯರು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮನೆಯ ಬಾವಿಯಲ್ಲಿ ನೀರಿನ ಬದಲು ಪೆಟ್ರೋಲ್; ಕೊನೆಗೂ ಅಸಲಿ ಸತ್ಯ ಬಯಲು

ಶಿಶುಗಳ ಕುಟುಂಬದವರು ಈ ಘಟನೆ ನಡೆದಾಗ ಅಗ್ನಿಶಾಮಕ ದಳ ಕೂಡ ಬಂದಿಲ್ಲ. ಇಂತಹ ಘಟನೆಗಳು ನಡೆದಾಗ ಮುಂಜಾಗ್ರತಾ ಕ್ರಮವಾಗಿ ಒಂದು ವ್ಯವಸ್ಥೆ ಕೂಡ ಆಸ್ಪತ್ರೆಯಲ್ಲಿ ಇಲ್ಲ ಎಂದು ಆರೋಪಿಸಿದ್ದಾರೆ. ಇನ್ನು ಈ ಘಟನೆಯ ಬಗ್ಗೆ ತನಿಖೆಯನ್ನು ನಡೆಸಲು ಸರ್ಕಾರ ಆದೇಶವನ್ನು ನೀಡಿದೆ. ಸಂತ್ರಸ್ತರ ಕುಟುಂಬಗಳಿಗೆ ₹ 5 ಲಕ್ಷ ಆರ್ಥಿಕ ನೆರವು ಘೋಷಿಸಿದ್ದಾರೆ . ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹ 50,000 ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ